ಉಡುಪಿ | ಪಕ್ಷ ಸಂಘಟನೆ ಜತೆಗೆ ಜನಸೇವೆಯಲ್ಲೂ ರಮೇಶ್ ಕಾಂಚನ್ ಮುಂಚೂಣಿ: ಸೊರಕೆ

Date:

ಕಾಂಗ್ರೆಸ್ ಪಕ್ಷದ ಸಂಘಟನೆಗೆ ನಿರಂತರವಾಗಿ ಶ್ರಮಿಸುತ್ತಿರುವ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಅವರು ಸಮಾಜಮುಖಿ ಕಾರ್ಯಗಳ ಮೂಲಕ ಜನ್ಮದಿನ ಆಚರಿಸಿಕೊಳ್ಳುತ್ತಿರುವುದು ಅಭಿನಂದನೀಯ ಎಂದು ಮಾಜಿ ಸಚಿವ, ಕೆಪಿಸಿಸಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಹೇಳಿದರು.

- Advertisement -

ರಮೇಶ್ ಕಾಂಚನ್ ಅವರ ಜನ್ಮದಿನದ ಅಂಗವಾಗಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಜಂಟಿ ಆಶ್ರಯದಲ್ಲಿ ಅಜ್ಜರಕಾಡಿನ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರ ಮತ್ತು ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ರಕ್ತದಾನವು ಅಮೂಲ್ಯ ಜೀವಗಳನ್ನು ಉಳಿಸುವ ಮಹತ್ವದ ಕಾರ್ಯವಾಗಿದ್ದು, ದಿವ್ಯಾಂಗರಿಗೆ ಪೌಷ್ಟಿಕ ಆಹಾರ ವಿತರಿಸುವ ಮೂಲಕ ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಪ್ರಯತ್ನ ಶ್ಲಾಘನೀಯವಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ಮಾದರಿಯಾಗಿದ್ದು, ಚುನಾವಣೆಯಲ್ಲಿ ನೀಡಿದ ಭರವಸೆಗಳನ್ನು ಈಡೇರಿಸುವ ಮೂಲಕ ಜನಪರ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಯೋಜನೆಗಳ ಪ್ರಯೋಜನವನ್ನು ಇನ್ನಷ್ಟು ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಹೇಳಿದರು.

WhatsApp Image 2026 10 29 at 8.45.33 PM

ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಸಂಘಟನೆ ಹಾಗೂ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ರಮೇಶ್ ಕಾಂಚನ್ ಅವರಿಂದ ಕಲಿಯಬೇಕಾದದ್ದು ಸಾಕಷ್ಟಿದೆ. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕರ್ತರು ಮನೆಮನೆಗೆ ತೆರಳಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಮೇಶ್ ಕಾಂಚನ್ ಅವರನ್ನು ಅವರ ರಾಜಕೀಯ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ನಿರ್ಗಮಿತ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹಾಗೂ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್ ಅವರನ್ನು ಗೌರವಿಸಲಾಯಿತು.

ಶಿಬಿರದಲ್ಲಿ ನೂರಾರು ಯುವಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿದರು. ಸುಮಾರು 200 ಮಂದಿ ದಿವ್ಯಾಂಗರಿಗೆ ಪೌಷ್ಟಿಕ ಆಹಾರದ ಕಿಟ್‌ಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಳೆಬೈಲ್, ಅಶೋಕ್ ಕುಮಾರ್ ಕೊಡವೂರು, ಪ್ರಸಾದ್ ರಾಜ್ ಕಾಂಚನ್, ದಿನೇಶ್ ಹೆಗ್ಡೆ ಮೊಳಹಳ್ಳಿ, ದಿನಕರ ಹೇರೂರು, ಡಾ. ಅಶೋಕ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಸತೀಶ್ ಕೊಡವೂರು ಸ್ವಾಗತಿಸಿದರು. ದಯಾನಂದ ಮಾಸ್ಟರ್ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಕಲಾದಗಿಯಲ್ಲಿ 12 ಕ್ವಿಂಟಲ್ ಅಕ್ರಮ ಪಡಿತರ ಅಕ್ಕಿ ಜಪ್ತಿಗೆ ಸೂಚನೆ

ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯ ಕಲಾದಗಿ ಪಟ್ಟಣದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ...

ಬಾಗಲಕೋಟೆ | ಭ್ರಷ್ಟಾಚಾರ ನಿರ್ಮೂಲನೆಗೆ ಸಮಾಜದ ಪ್ರತಿಯೊಬ್ಬರೂ ಜಾಗೃತರಾಗಬೇಕು: ನ್ಯಾಯಾಧೀಶ ಆರ್.ಕೆ.ಜಿ.ಎಂ. ಮಹಾಸ್ವಾಮೀಜಿ

ಭ್ರಷ್ಟಾಚಾರ ನಿರ್ಮೂಲನೆ ಕೇವಲ ಒಂದು ಇಲಾಖೆಯ ಜವಾಬ್ದಾರಿಯಲ್ಲ. ಸಮಾಜದ ಪ್ರತಿಯೊಬ್ಬರೂ ಭ್ರಷ್ಟಾಚಾರದ...

ವಿಜಯಪುರ | ಯುವಜನರು ಜವಾಬ್ದಾರಿಯುತ ನೀತಿ ನಿರೂಪಕರಾಗಲಿ: ಡಿಸಿ ಆನಂದ ಕೆ

ಯುವಜನರು ಸಂವಿಧಾನದ ಆಶಯಗಳು, ಸಂಸದೀಯ ಕಾರ್ಯಕಲಾಪಗಳು ಹಾಗೂ ಕಾನೂನು ರಚನೆಯ ಪ್ರಕ್ರಿಯೆಯ...