ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಅ. 20ರವರೆಗೆ ಕಾಲಾವಕಾಶ ವಿಸ್ತರಣೆ

Date:

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಪಡೆಯುತ್ತಿರುವ ಆದ್ಯತಾ (ಬಿಪಿಎಲ್) ಮತ್ತು ಅಂತ್ಯೋದಯ (ಎಎವೈ) ಪಡಿತರ ಚೀಟಿಗಳ ಅರ್ಹ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಿಕೊಳ್ಳಲು ಸರ್ಕಾರ ಅಕ್ಟೋಬರ್ 20ರವರೆಗೆ ಕಾಲಾವಕಾಶ ವಿಸ್ತರಿಸಿದೆ.

- Advertisement -

ಈ ಹಿಂದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಲು ಸೆಪ್ಟೆಂಬರ್ 30 ಕೊನೆಯ ದಿನವೆಂದು ನಿಗದಿಪಡಿಸಲಾಗಿತ್ತು. ಈ ಕುರಿತು ಪತ್ರಿಕೆಗಳು ಹಾಗೂ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಚೀಟಿದಾರರಿಗೆ ಮಾಹಿತಿ ನೀಡಲಾಗಿತ್ತು. ಇದೀಗ ಸರ್ಕಾರವು ಗಡುವನ್ನು ಅಕ್ಟೋಬರ್ 20ರವರೆಗೆ ವಿಸ್ತರಿಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಈ ಹಿಂದೆ ಇ-ಕೆವೈಸಿ ಮಾಡಿಸಿಕೊಂಡು ಐದು ವರ್ಷಗಳು ಪೂರ್ಣಗೊಂಡಿರುವ ಪಡಿತರ ಚೀಟಿದಾರರು ಕಡ್ಡಾಯವಾಗಿ ಮತ್ತೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಾಗಿದೆ. ನಿಗದಿತ ಅವಧಿಯೊಳಗೆ ಈ ಪ್ರಕ್ರಿಯೆ ಪೂರ್ಣಗೊಳಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪಡಿತರ ವಿತರಣೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಆದ್ದರಿಂದ ಇನ್ನೂ ಇ-ಕೆವೈಸಿ ಮಾಡಿಸದಿರುವ ಅರ್ಹ ಫಲಾನುಭವಿಗಳು ತಕ್ಷಣವೇ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮನವಿ ಮಾಡಿದೆ.

ಇ-ಕೆವೈಸಿ ಮಾಡಿಸಿಕೊಳ್ಳಲು ಬಾಕಿ ಇರುವ ಫಲಾನುಭವಿಗಳ ಪಟ್ಟಿಯನ್ನು ಜಿಲ್ಲೆಯ ಎಲ್ಲ ತಾಲೂಕುಗಳ ನ್ಯಾಯಬೆಲೆ ಅಂಗಡಿಗಳಿಗೆ ಈಗಾಗಲೇ ನೀಡಲಾಗಿದೆ. ಫಲಾನುಭವಿಗಳು ಈ ಪಟ್ಟಿಯನ್ನು ಪರಿಶೀಲಿಸಿಕೊಂಡು ತಮ್ಮ ಇ-ಕೆವೈಸಿ ಸ್ಥಿತಿಯನ್ನು ಖಚಿತಪಡಿಸಿಕೊಳ್ಳಬೇಕು. ವಿಶೇಷವಾಗಿ ಹಲವು ವರ್ಷಗಳಿಂದ ಗ್ರಾಮದಲ್ಲಿ ವಾಸವಿಲ್ಲದೆ ಬೇರೆಡೆಗೆ ವಲಸೆ ಹೋಗಿರುವ ಅಥವಾ ಊರು ಬಿಟ್ಟು ತೆರಳಿರುವ ಪಡಿತರ ಚೀಟಿದಾರರು ಸಹ ತಮ್ಮ ಇ-ಕೆವೈಸಿ ಸ್ಥಿತಿಯನ್ನು ಪರಿಶೀಲಿಸಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಮನೆಯಲ್ಲಿಯೇ ಇ-ಕೆವೈಸಿ ಸೌಲಭ್ಯ

ಫಲಾನುಭವಿಗಳು ಮೊಬೈಲ್‌ನ ಪ್ಲೇ ಸ್ಟೋರ್‌ನಿಂದ ‘ಅನ್ನಸೇವಾ’ ಆ್ಯಪ್ ಡೌನ್‌ಲೋಡ್ ಮಾಡಿಕೊಂಡು ಮನೆಯಲ್ಲಿಯೇ ಇ-ಕೆವೈಸಿ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇದಲ್ಲದೆ, ಮೊಬೈಲ್ ಸಂಖ್ಯೆ ಲಿಂಕ್ ಆಗಿರುವ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಯೊಂದಿಗೆ ಸಮೀಪದ ನ್ಯಾಯಬೆಲೆ ಅಂಗಡಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸಿಕೊಳ್ಳಬಹುದು.

ಅಕ್ಟೋಬರ್ 20ರ ಗಡುವಿನೊಳಗೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ, ಮುಂದಿನ ದಿನಗಳಲ್ಲಿ ಪಡಿತರ ಪಡೆಯುವಲ್ಲಿ ತೊಂದರೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಟಾಟಾ ಎಲೆಕ್ಟ್ರಾನಿಕ್ಸ್‌ನಲ್ಲಿ ಮಹಿಳಾ ಕಾರ್ಮಿಕರ ಸಾವು: ಸಮಗ್ರ ತನಿಖೆಗೆ ಸಿಐಟಿಯು ಒತ್ತಾಯ

ನರಸಾಪುರ ಕೈಗಾರಿಕಾ ಪ್ರದೇಶದ ಟಾಟಾ ಎಲೆಕ್ಟ್ರಾನಿಕ್ಸ್ ಕಂಪನಿಯಲ್ಲಿ ಮಹಿಳಾ ಕಾರ್ಮಿಕರ ಸಾವಿನ...

ಮಹಿಳೆಯರ ಸ್ವಾವಲಂಬನೆಗೆ ಬಿ.ಎಸ್ ಡಬ್ಲ್ಯೂ ಹೊಲಿಗೆ ತರಬೇತಿ ಶಿಬಿರ ಪೂರಕ: ರಾಮಕೃಷ್ಣ

"ಮಹಿಳೆಯರು ಕೌಶಲ್ಯಾಧಾರಿತ ತರಬೇತಿಯನ್ನು ಪಡೆದು ಆರ್ಥಿಕವಾಗಿ ಸ್ವಾವಲಂಬಿಗಳಾಗಲು ಉಚಿತ ಹೊಲಿಗೆ ತರಬೇತಿ...

ಉಡುಪಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಅ.17ರಂದು ಬ್ರಹ್ಮಾವರದಲ್ಲಿ ಬೃಹತ್ ಹಕ್ಕೊತ್ತಾಯ ಸಭೆ

ಉಡುಪಿ ಜಿಲ್ಲೆಯಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸಬೇಕೆಂಬ ಕರಾವಳಿ ಭಾಗದ ಜನರ ಬಹುದಿನಗಳ...

ವಿಜಯಪುರ | SIR ರದ್ದತಿಗೆ ಆಗ್ರಹಿಸಿ CPIMನಿಂದ ಮೇಣದಬತ್ತಿ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...