ಉಡುಪಿಯಲ್ಲಿ MSME ಕ್ಲಸ್ಟರ್ ಅಭಿವೃದ್ಧಿ ಕುರಿತು ವಿಶೇಷ ಮಾಹಿತಿ ಶಿಬಿರ

Date:

ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಉಡುಪಿ ಚಾಪ್ಟರ್ ವತಿಯಿಂದ ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ (MSME) ಸಚಿವಾಲಯದ ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಂ ಕುರಿತು ವಿಶೇಷ ಮಾಹಿತಿ ಶಿಬಿರ ಹಾಗೂ ಮಾಸಿಕ ಬಿಸಿನೆಸ್ ಮೀಟ್ ಉಡುಪಿಯ ಮಣಿಪಾಲ್ ಇನ್‌ನಲ್ಲಿ ಶುಕ್ರವಾರ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಬಿದರ್‌ನ ಇಂಟಗ್ಲಿಯೋ ತಾಂತ್ರಿಕಾ ಹಾಗೂ ವ್ಯವಹಾರಿಕ ಸೇವಾ ಸಂಸ್ಥೆಯ (M/s IntaGlio Technical & Business Services) ನಿರ್ದೇಶಕ ಹಾಗೂ ಕ್ಲಸ್ಟರ್ ತಜ್ಞ ಎಂ.ಡಿ. ಶಹೇರಿಯಾಜ್ ಪಟೇಲ್, MSME ಸಚಿವಾಲಯದ ಕ್ಲಸ್ಟರ್ ಡೆವಲಪ್‌ಮೆಂಟ್ ಪ್ರೋಗ್ರಾಂ, ಉದ್ಯಮಿಗಳ ಬೆಳವಣಿಗೆಗೆ ಲಭ್ಯವಿರುವ ಅವಕಾಶಗಳು, ಕ್ಲಸ್ಟರ್ ಆಧಾರಿತ ಉದ್ಯಮ ಅಭಿವೃದ್ಧಿ ಹಾಗೂ ಉದ್ಯಮಿಗಳು ಪರಸ್ಪರ ನೆಟ್‌ವರ್ಕಿಂಗ್ ಮೂಲಕ ಪಡೆಯಬಹುದಾದ ಪ್ರಯೋಜನಗಳ ಕುರಿತು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...
WhatsApp Image 2026 08 28 at 11.40.46 PM

ಉದ್ಯಮಿಗಳು ತಮ್ಮ ವ್ಯವಹಾರವನ್ನು ವಿಸ್ತರಿಸುವುದರ ಜೊತೆಗೆ, ಸಮಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ಇತರ ಉದ್ಯಮಿಗಳೊಂದಿಗೆ ಸಂಪರ್ಕ ಬೆಳೆಸಿಕೊಂಡು ಜ್ಞಾನ ಮತ್ತು ಅನುಭವ ಹಂಚಿಕೊಳ್ಳುವ ಮೂಲಕ ಹೊಸ ಅವಕಾಶಗಳನ್ನು ಸೃಷ್ಟಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಝಹೀರ್ ಮಲ್ಪೆ, ಉದ್ಯಮಿಗಳ ಪರಸ್ಪರ ಸಂಪರ್ಕ, ಜ್ಞಾನ ವಿನಿಮಯ ಹಾಗೂ ವ್ಯವಹಾರ ವಿಸ್ತರಣೆಗೆ ಇಂತಹ ಬಿಸಿನೆಸ್ ಮೀಟ್‌ಗಳ ಮಹತ್ವವನ್ನು ತಿಳಿಸಿದರು ‌ಮತ್ತು ರಿಫಾ ಸಂಸ್ಥೆಯ ಪರಿಚಯವನ್ನು ತಿಳಿಸಿದರು. ಇಸ್ಹಾಕ್ ಹೂಡೆ ಕುರ್ ಆನ್ ಪಡಿಸಿದರು. ರಹೀಸ್ ಅಹಮದ್ ಶೇಕ್ ಕಾರ್ಯಕ್ರಮ ನಿರೂಪಿಸಿ ಧನ್ಯವಾದವಿತ್ತರು.

WhatsApp Image 2026 08 28 at 11.40.45 PM

ಈ ದಿನ.ಕಾಮ್ ಜೊತೆ ಮಾತನಾಡಿದ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಉಡುಪಿ ಚಾಪ್ಟರ್‌ನ ಅಧ್ಯಕ್ಷ ಆಸಿಫ್ ಇಕ್ಬಾಲ್, Learn, Network, Grow ಎಂಬ ಆಶಯದೊಂದಿಗೆ ರಿಫಾ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರೀಸ್ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು, ಉಡುಪಿಯಲ್ಲೂ ತನ್ನ ಚಟುವಟಿಕೆಗಳನ್ನು ನಡೆಸುತ್ತಿದೆ. ವ್ಯಾಪಾರ ಮತ್ತು ಉದ್ಯಮ ಕ್ಷೇತ್ರಕ್ಕೆ ಸಂಬಂಧಿಸಿದ ಹೊಸ ಹೊಸ ಆಲೋಚನೆಗಳನ್ನು ಹಂಚಿಕೊಳ್ಳುವುದು, ಉದ್ಯಮಿಗಳನ್ನು ಪರಸ್ಪರ ಸಂಪರ್ಕಿಸುವುದು ಹಾಗೂ ಅನುಭವ ಮತ್ತು ಮಾಹಿತಿಯನ್ನು ವಿನಿಮಯ ಮಾಡಿಕೊಳ್ಳುವ ಉದ್ದೇಶದಿಂದ ಪ್ರತಿತಿಂಗಳು ಮಾಸಿಕ ಸಭೆಗಳನ್ನು ಆಯೋಜಿಸಲಾಗುತ್ತಿದೆ. ಈ ಸಭೆಗಳಲ್ಲಿ ವಿವಿಧ ಕ್ಷೇತ್ರಗಳ ಉದ್ಯಮಿಗಳು ಹಾಗೂ ವ್ಯಾಪಾರ ಕ್ಷೇತ್ರದ ಪ್ರತಿನಿಧಿಗಳು ಭಾಗವಹಿಸಿ, ತಮ್ಮ ಅನುಭವಗಳನ್ನು ಹಂಚಿಕೊಳ್ಳುವುದರ ಜೊತೆಗೆ ಸಂವಾದ ಮತ್ತು ನೆಟ್‌ವರ್ಕಿಂಗ್‌ನಲ್ಲಿ ತೊಡಗಿಸಿಕೊಳ್ಳುತ್ತಾರೆ. ಇದರ ಮೂಲಕ ಉದ್ಯಮಿಗಳು ವ್ಯವಹಾರಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳುವುದರ ಜೊತೆಗೆ ಹೊಸ ಅವಕಾಶಗಳನ್ನು ಗುರುತಿಸಿ ತಮ್ಮ ವ್ಯವಹಾರವನ್ನು ಮತ್ತಷ್ಟು ಅಭಿವೃದ್ಧಿಪಡಿಸಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ಹೇಳಿದರು.

ವ್ಯವಹಾರ ಹಾಗೂ ಉದ್ಯಮಕ್ಕೆ ಸಂಬಂಧಿಸಿದ ಹೆಚ್ಚಿನ ಮಾಹಿತಿಗಾಗಿ 6366959929 ಸಂಪರ್ಕಿಸಬಹುದು ಎಂದು ಆಸಿಫ್‌ ಇಕ್ಬಾಲ್‌ ತಿಳಿಸಿದ್ದಾರೆ.

WhatsApp Image 2026 08 28 at 11.40.46 PM 1
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...