ಉಡುಪಿ | ಬಿಜೆಪಿಯವರಿಂದಲೇ ಪರಶುರಾಮ ಥೀಮ್ ಪಾರ್ಕ್ ಕಾಮಗಾರಿ ಅಪೂರ್ಣ: ರಿಝ್ವಾನ್ ಅರ್ಷದ್

Date:

ಕಾರ್ಕಳ ಬೈಲೂರಿನಲ್ಲಿ ಪರಶುರಾಮ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಂದಾಗಿದ್ದು ಬಿಜೆಪಿಯವರೇ. ಅವರ ಅಧಿಕಾರಾವಧಿಯಲ್ಲಿ ಯೋಜನೆಯ ವಿನ್ಯಾಸ ರೂಪಿಸಿ, ಟೆಂಡರ್ ಕರೆದು ಕಂಚಿನ ಪ್ರತಿಮೆ ಪ್ರತಿಷ್ಠಾಪಿಸುವುದಾಗಿ ಘೋಷಿಸಿದ್ದರು. ಆದರೆ ಯೋಜನೆಯನ್ನು ಪೂರ್ಣಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ. ಹೀಗಾಗಿ ಈ ವಿಚಾರದಲ್ಲಿ ಮಾತನಾಡುವ ನೈತಿಕ ಹಕ್ಕು ಬಿಜೆಪಿಗಿಲ್ಲ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ತಿರುಗೇಟು ನೀಡಿದ್ದಾರೆ.

- Advertisement -

ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣ ನ್ಯಾಯಾಲಯದಲ್ಲಿದ್ದ ಕಾರಣ ಈ ಹಿಂದೆ ಕ್ರಮ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ನ್ಯಾಯಾಲಯದಿಂದ ಪರಿಹಾರ ದೊರೆತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯೊಂದಿಗೆ ಚರ್ಚಿಸಿದ್ದೇನೆ. ಮುಖ್ಯಮಂತ್ರಿಗಳೊಂದಿಗೂ ಚರ್ಚಿಸಿ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಗ್ರಾಪಂ ನಿಧಿ ಬಳಸಿ ಗ್ಯಾರಂಟಿ ಸಮಾವೇಶ ಆಯೋಜಿಸಿರುವುದಕ್ಕೆ ಬಿಜೆಪಿ ಶಾಸಕರು ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಗ್ಯಾರಂಟಿ ಯೋಜನೆಗಳಿಂದ ಬಡ ಮತ್ತು ಸಾಮಾನ್ಯ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಕೇಂದ್ರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಹೆಚ್ಚಾಗಿರುವ ಸಂದರ್ಭದಲ್ಲಿ ಈ ಯೋಜನೆಗಳು ಜನರಿಗೆ ನೆರವಾಗಿವೆ. ಜನರಿಗೆ ಯೋಜನೆಗಳ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹೇಳಿದರು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಕುರಿತು ಮಾತನಾಡಿದ ಸಚಿವರು, ಮುಖ್ಯಮಂತ್ರಿ ಈಗಾಗಲೇ ಕಾರ್ಯಕರ್ತೆಯರೊಂದಿಗೆ ಮಾತುಕತೆ ನಡೆಸಿದ್ದಾರೆ. ಆರೋಗ್ಯ ಸಚಿವರು ಸಮಸ್ಯೆ ಪರಿಹರಿಸಲು 12 ದಿನಗಳ ಕಾಲಾವಕಾಶ ಕೇಳಿದ್ದಾರೆ. ಈ ಸಮಸ್ಯೆ ಕೇವಲ ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ್ದಲ್ಲ. ಕೇಂದ್ರ ಸರ್ಕಾರವೂ ಜವಾಬ್ದಾರಿ ವಹಿಸಬೇಕಿದೆ ಎಂದರು.

ಉಡುಪಿ ನೂತನ ಜಿಲ್ಲಾಸ್ಪತ್ರೆ ವಿಚಾರವಾಗಿ ಆರೋಗ್ಯ ಸಚಿವರೊಂದಿಗೆ ಚರ್ಚಿಸಿದ್ದು, ಜಿಲ್ಲೆಯ ಐವರು ಶಾಸಕರನ್ನು ಆಹ್ವಾನಿಸಿ ಶೀಘ್ರ ಸಭೆ ನಡೆಸಲಾಗುವುದು. ಹಳೆಯ ಆಸ್ಪತ್ರೆಯಲ್ಲಿರುವ ಉತ್ತಮ ಸ್ಥಿತಿಯ ಉಪಯುಕ್ತ ಉಪಕರಣಗಳನ್ನು ಹೊಸ ಆಸ್ಪತ್ರೆಗೆ ಸ್ಥಳಾಂತರಿಸುವುದರಲ್ಲಿ ತಪ್ಪಿಲ್ಲ. ಆದರೆ ತುಕ್ಕು ಹಿಡಿದಿರುವ ಅಥವಾ ಬಳಕೆಗೆ ಯೋಗ್ಯವಲ್ಲದ ಉಪಕರಣಗಳನ್ನು ಸ್ಥಳಾಂತರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಧೋಳ ಸಬ್ ರಿಜಿಸ್ಟ್ರಾರ್ ಕಚೇರಿ ಮೇಲೆ ಲೋಕಾಯುಕ್ತ ಭೇಟಿ; ದಾಖಲೆಗಳ ಪರಿಶೀಲನೆ

​ಸಾರ್ವಜನಿಕರಿಂದ ಕೇಳಿಬಂದ ದೂರುಗಳ ಹಿನ್ನೆಲೆಯಲ್ಲಿ, ಧಾರವಾಡದ ಲೋಕಾಯುಕ್ತ ಇನ್ಸ್‌ಪೆಕ್ಟರ್ ಹಿರೇಮಠ್ ನೇತೃತ್ವದ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

ಮಂಗಳೂರು | ಪ್ರತಿಭಟನಾಕಾರರ ಅಹವಾಲು ಆಲಿಸಲು ಸಚಿವರ ನಿಯೋಜನೆ: ಸಲೀಂ ಅಹ್ಮದ್

ಡಿಸೆಂಬರ್ 2ರಿಂದ 11ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ...