ಉಡುಪಿ | ಮಸಾಲೆ ಪುಡಿ ಗುಣಮಟ್ಟವಿದ್ದಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು : ಸಚಿವ ರಿಜ್ವಾನ್ ಅರ್ಷದ್

Date:

ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಇಂದು ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಉಡುಪಿ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯ ಇಲ್ಲು ಫುಡ್ಸ್ ಮಸಾಲಾ ಪುಡಿ ತಯಾರಿಕಾ ಘಟಕವನ್ನು ಉದ್ಘಾಟಿಸಿದರು.

- Advertisement -

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಆಹಾರ ಪದಾರ್ಥಗಳು ಗುಣಮಟ್ಟದಲ್ಲಿ ಚೆನ್ನಾಗಿದ್ದಾಗ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿರುವುದು ಸಾಮಾನ್ಯ. ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯು ಇಲ್ಲು ಫುಡ್ಸ್ ಮಸಾಲಾ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಿರುವುದು ಒಂದು ಒಳ್ಳೆಯ ಉದ್ಯಮವಾಗಿದೆ. ಮಸಾಲೆ ಪುಡಿಯು ಉತ್ತಮ ಗುಣಮಟ್ಟವನ್ನು ಕಾಯ್ದುಕೊಂಡು ಮಾರುಕಟ್ಟೆಯ ವಿಸ್ತರಣೆಗೆ ಒತ್ತು ನೀಡುವುದರ ಜೊತೆಗೆ ಯಶಸ್ವಿಗೊಳಿಸಬೇಕೆಂದು ಕಿವಿ ಮಾತು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...
ಇಲ್ಲು ಫುಡ್ಸ್ ಮಸಾಲಾ ಪುಡಿ ತಯಾರಿಕಾ ಘಟಕ 4

ಕಂಪನಿಗಳ ಕಾಯ್ದೆಯಡಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿರುವ ಈ ಕಂಪನಿಯು ಮಹಿಳಾ ನೇತೃತ್ವದ ಕೃಷಿ ಮತ್ತು ಗ್ರಾಮೀಣ ಉದ್ಯಮಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ಉಡುಪಿ ತಾಲೂಕಿನ 16 ಗ್ರಾಮ ಪಂಚಾಯಿತಿಗಳ 1000 ಮಹಿಳಾ ರೈತರು ಷೇರು ಬಂಡವಾಳ ಹೂಡಿಕೆ ಮಾಡಿದ್ದಾರೆ. ಕೃಷಿ, ಪಶುಸಂಗೋಪನೆ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಣ್ಣ ಮತ್ತು ಅತಿ ಸಣ್ಣ ಮಹಿಳಾ ಉತ್ಪಾದಕರು ಈ ಕಂಪನಿಯ ಸಾಮೂಹಿಕ ಒಡೆತನ ಹೊಂದಿದ್ದಾರೆ ಎಂದರು.

ರೈತ ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗೆ ಅವಕಾಶ ಕಲ್ಪಿಸುವುದರೊಂದಿಗೆ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಮೌಲ್ಯವರ್ಧನೆ ಒದಗಿಸಲಿದ್ದು, ಮಹಿಳೆಯರ ಜೀವನೋಪಾಯ ವೃದ್ಧಿಗೆ ಈ ಕಂಪನಿಯು ನೆರವಾಗಲಿದೆ ಎಂದರು. ಈ ಸಂದರ್ಭದಲ್ಲಿ ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ
ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ,
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಮತ್ತಿತರರು
ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...

ರಾಯಚೂರು | ಕಾರು ಪಲ್ಟಿ: ಕೃಷ್ಣಾ ಭಾಗ್ಯ ಜಲನಿಗಮದ ಸಹಾಯಕ ಎಂಜಿನಿಯರ್ ಸಾವು

ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿ ಕೃಷ್ಣಾ ಭಾಗ್ಯ ಜಲನಿಗಮದ ನಾರಾಯಣಪುರ ವಲಯದ...

ರಾಯಚೂರು | ಯರಮರಸ್ ವಿದ್ಯುತ್ ಘಟಕ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡಲು ಆಗ್ರಹ

ಯರಮರಸ್ ವಿದ್ಯುತ್ ಘಟಕಕ್ಕೆ ಭೂಮಿ ಕಳೆದುಕೊಂಡ ಭೂ ಸಂತ್ರಸ್ಥರಿಗೆ ಉದ್ಯೋಗ ನೀಡದೇ...