ಉಡುಪಿ | ಪಾಂಗಳಲ್ಲಿ ರಸ್ತೆ ಅಪಘಾತ, ಕಾರು ಚಾಲಕ ಸಾವು

Date:

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪಾಂಗಳ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿ ಕಾರು ಚಾಲಕ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಬಾಗಲಕೋಟೆ ಜಿಲ್ಲೆಯ ಲೋಕಾಪುರದಿಂದ ಮಂಗಳೂರಿಗೆ ಸರಕು ಸಾಗಣೆ ಮಾಡುತ್ತಿದ್ದ ಲಾರಿ ಚಾಲಕ ಮಂಜುನಾಥ ಗೌಡ ಅವರು ಮಂಗಳೂರಿನಲ್ಲಿ ಕೋಕ್ ಲೋಡ್ ಮಾಡಿಕೊಂಡು ಕೊಪ್ಪಳದ ಗಿಣಿಗೇರಿಗೆ ತೆರಳುತ್ತಿದ್ದರು. ಈ ವೇಳೆ ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ಏಕಮುಖ ಸಂಚಾರ ರಸ್ತೆಯಲ್ಲಿ ನಿಧಾನವಾಗಿ ಸಾಗುತ್ತಿದ್ದಾಗ, ಹಿಂಬದಿಯಿಂದ ವೇಗವಾಗಿ ಬಂದ ಕಿಯಾ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಡಿಕ್ಕಿ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಕಾರು ಚಾಲಕ ಶ್ರೇಯಸ್ ಆಚಾರ್ ಗಂಭೀರವಾಗಿ ಗಾಯಗೊಂಡು ವಾಹನದಲ್ಲೇ ಸಿಲುಕಿಕೊಂಡಿದ್ದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಸಾರ್ವಜನಿಕರು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ, ವೈದ್ಯರು ಅವರು ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ.

ಇನ್ನೂ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಡಾರ್ವಿನ್ ಹಾಗೂ ಸೂರ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಡುಪಿಯ ಅಜ್ಜರಕಾಡು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನೆ ಸಂಬಂಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಛತ್ತೀಸ್‌ಗಢ | 29 ಜನರ ಹತ್ಯೆಗೆ ಕಾರಣವಾದ 2013ರ ದಾಳಿ; 13 ವರ್ಷಗಳ ನಂತರ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಘೋಷಣೆ!

ದೇಶವನ್ನೇ ಬೆಚ್ಚಿಬೀಳಿಸಿದ್ದ ಛತ್ತೀಸ್‌ಗಢದ 2013ರ ಝೀರಂ ಕಣಿವೆ ನಕ್ಸಲ್‌ ದಾಳಿ ಪ್ರಕರಣಕ್ಕೆ...

ವಿಜಯಪುರ | ಸಮಾಜದ ಅಭಿವೃದ್ಧಿಯಲ್ಲಿ ಎಂಜಿನಿಯರ್‌ ಪಾತ್ರ ಮಹತ್ವದ್ದು: ರಾಕೇಶ್ ಗೋಪಾಲ್ ಜೋಶಿ

ಸಮಾಜದ ಅಭಿವೃದ್ಧಿ, ದೇಶದ ಪ್ರಗತಿಯಲ್ಲಿ ಎಂಜಿನಿಯರ್‌ಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ ಶಕ್ತಿಗೆ ಕತ್ತರಿ

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ...

ಮೋದಿಯ ಮೋಸದ UPI ಶುಲ್ಕ ನೀತಿ; ತೀವ್ರ ವಿರೋಧದ ನಡುವೆಯೂ ಜಾರಿಗೆ ಮುಂದಾದ ಕೇಂದ್ರ

₹2,000ಕ್ಕಿಂತ ಹೆಚ್ಚಿನ UPI ವಹಿವಾಟುಗಳಿಗೆ ಪ್ರಸ್ತಾಪಿಸಿರುವ ಶೇ 0.4ರಷ್ಟು ಮರ್ಚೆಂಟ್ ಡಿಸ್ಕೌಂಟ್...