ಉಡುಪಿ ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡ್‌ನ ಇಂಡಸ್ಟ್ರಿಯಲ್ ಏರಿಯಾ ಕಲ್ಯಾಣಿ ಆರ್.ಎಂ.ಸಿ ಯಿಂದ ಕೆ.ಇ.ಬಿ ಕಚೇರಿ ವರೆಗೆ ರಸ್ತೆ ಕಾಂಕ್ರೀಟೀಕರಣ ಕಾಮಗಾರಿ ಪ್ರಾರಂಭಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಕಾಮಗಾರಿ ನಡೆಯುವ ಅವಧಿಯಲ್ಲಿ ಹಾಗೂ ಕಾಮಗಾರಿ ಪೂರ್ಣಗೊಳ್ಳುವವರೆಗೆ ಸಂಬಂಧಿತ ರಸ್ತೆಯಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.
ಸಾರ್ವಜನಿಕರು ಪರ್ಯಾಯ ಮಾರ್ಗಗಳನ್ನು ಬಳಸಿಕೊಂಡು, ಕಾಮಗಾರಿ ಸುಗಮವಾಗಿ ನಡೆಯಲು ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.






