ಉಡುಪಿ | ಕ್ರೈಸ್ತರ ‘ಸಮಾಧಾನ’ ಕಾರ್ಯಕ್ರಮಕ್ಕೆ ಭದ್ರತೆ ಒದಗಿಸಲು ಸಹಬಾಳ್ವೆ ಆಗ್ರಹ

Date:

ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ ಕ್ರೈಸ್ತ ಸಮುದಾಯದ ವಾರ್ಷಿಕ ‘ಸಮಾಧಾನ’ ಧಾರ್ಮಿಕ ಕಾರ್ಯಕ್ರಮವು ಶಾಂತಿಯುತವಾಗಿ ನಡೆಯಲು ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸಹಬಾಳ್ವೆ ಉಡುಪಿ ಜಿಲ್ಲೆ ಜಿಲ್ಲಾಡಳಿತವನ್ನು ಆಗ್ರಹಿಸಿದೆ.

- Advertisement -

ಈ ಕುರಿತು ಸಂಘಟನೆಯ ಪ್ರಧಾನ ಸಂಚಾಲಕ ಕೆ. ಫಣಿರಾಜ್ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಕ್ರೈಸ್ತ ಸಮುದಾಯವು ತಮ್ಮ ಸಂಸ್ಥೆಗಳ ವ್ಯಾಪ್ತಿಯ ಕ್ರಿಶ್ಚಿಯನ್ ಶಾಲಾ ಮೈದಾನದಲ್ಲಿ ತಮ್ಮ ಅನುಯಾಯಿಗಳಿಗಾಗಿ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು, ಭಾರತದ ಸಂವಿಧಾನವು ನೀಡಿರುವ ಧಾರ್ಮಿಕ ಸ್ವಾತಂತ್ರ್ಯದ ಹಕ್ಕಿನಡಿ ಇಂತಹ ಆಚರಣೆಗಳು ಸಹಜವಾಗಿ ನಡೆಯಬೇಕಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...
Untitled design 20260315 161436 0000
ಜಾಹಿರಾತು

ಆದರೆ, ಹಿಂದು ಜಾಗರಣ ವೇದಿಕೆಯ ಮುಖಂಡ ಶ್ರೀಕಾಂತ ಶೆಟ್ಟಿ ಅವರು ಕಾರ್ಯಕ್ರಮಕ್ಕೆ ಅಡ್ಡಿಪಡಿಸುವ ಹೇಳಿಕೆ ನೀಡಿದ್ದು, ಹಿಂಸಾತ್ಮಕ ವಾತಾವರಣ ಸೃಷ್ಟಿಸುವ ಬಗ್ಗೆ ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಇಂತಹ ಹೇಳಿಕೆಗಳು ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವಂತಿದ್ದು, ಜಿಲ್ಲಾಡಳಿತವು ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರಕಟಣೆಯಲ್ಲಿ ಒತ್ತಾಯಿಸಲಾಗಿದೆ.

ಹೀಗಾಗಿ, ಸಂಬಂಧಪಟ್ಟ ವ್ಯಕ್ತಿ ಹಾಗೂ ಸಂಘಟನೆಯ ವಿರುದ್ಧ ಕಾನೂನು ಕ್ರಮ ಜರುಗಿಸಿ, ಕ್ರೈಸ್ತ ಸಮುದಾಯದ ಧಾರ್ಮಿಕ ಕಾರ್ಯಕ್ರಮವು ಯಾವುದೇ ಅಡಚಣೆ ಇಲ್ಲದೆ ಶಾಂತಿಯುತವಾಗಿ ನಡೆಯುವಂತೆ ಜಿಲ್ಲಾಡಳಿತವು ತನ್ನ ಸಂವಿಧಾನಬದ್ಧ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ಸಹಬಾಳ್ವೆ ಸಂಘಟನೆ ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕ್ರಷರ್ ಘಟಕದಿಂದ ಸೀತಿ ಬೆಟ್ಟದ ದೇವಾಲಯಕ್ಕೆ ಹಾನಿ: ಸ್ಥಗಿತಕ್ಕೆ ಗ್ರಾಮಸ್ಥರ ಪ್ರತಿಭಟನೆ

ತಾಲ್ಲೂಕಿನ ವೇಮಗಲ್ ಹೋಬಳಿ ಸೀತಿ ಗ್ರಾಮದ ಬಳಿ ಗೋಮಾಳ ಜಮೀನಿನಲ್ಲಿ ನಿಯಮ...

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...