ಉಡುಪಿ | ದಲಿತರ ಹಕ್ಕುಗಳಿಗಾಗಿ ಸಂಘಟಿತ ಹೋರಾಟ ಅಗತ್ಯ: ಸಂಜೀವ ಬಳ್ಕೂರು

Date:

ದಲಿತರ ಹಕ್ಕು, ಸಮಸ್ಯೆ ಹಾಗೂ ನ್ಯಾಯಕ್ಕಾಗಿ ಸಂಘಟಿತ ಹೋರಾಟ ಅಗತ್ಯವಾಗಿದ್ದು, ಸಂಘಟನೆಯೇ ದಲಿತರ ಶಕ್ತಿಯಾಗಿದೆ ಎಂದು DHS ಜಿಲ್ಲಾ ಅಧ್ಯಕ್ಷ ಸಂಜೀವ ಬಳ್ಕೂರು ಹೇಳಿದರು.

- Advertisement -

ಅಂಪಾರು–ಬಾಲಾಡಿ ಘಟಕದ ವತಿಯಿಂದ ಅ.4ರಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಂಘಟನೆಯ ವತಿಯಿಂದ ಪ್ರಸ್ತುತ ನಡೆಸಲಾಗುತ್ತಿರುವ ವಿವಿಧ ಹೋರಾಟಗಳು ಹಾಗೂ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಸ್ಥಳೀಯವಾಗಿ ದಲಿತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳಿಗೆ ಸಂಘಟಿತವಾಗಿ ಸ್ಪಂದಿಸುವ ಅಗತ್ಯವಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಆಗ್ನೇಯ ಪದವೀಧರ ಕ್ಷೇತ್ರ: ಕಾಂಗ್ರೆಸ್-ಬಿಜೆಪಿ ನಡುವೆ ಬಿರುಸಿನ ಸ್ಪರ್ಧೆ!

ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಕಾವು ಪಡೆದುಕೊಂಡಿದ್ದು, ಬಿಜೆಪಿ–ಜೆಡಿಎಸ್ ಮೈತ್ರಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿಯ ವಾತಾವರಣ ನಿರ್ಮಾಣವಾಗಿದೆ. ಕಾಂಗ್ರೆಸ್‌ನಿಂದ ಶಶಿ ಹುಲಿಕುಂಟೆಮಠ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ...

ವಿಜಯಪುರ | ಪ್ಲಾಟ್‌ಫಾರ್ಮ್‌ ಮೇಲೆ ಹರಿವ ಚರಂಡಿ ನೀರು;...

"ಚರಂಡಿ ನೀರಿನ್ಯಾಗ ದಿನ ಹೋಗಾಕ ಹತ್ತಿವಿ…" ಇದು ವಿಜಯಪುರ ಕೇಂದ್ರ ಬಸ್ ನಿಲ್ದಾಣಕ್ಕೆ ಪ್ರತಿನಿತ್ಯ ಆಗಮಿಸುವ ಸಾವಿರಾರು ಪ್ರಯಾಣಿಕರ ಅಳಲು. ಪ್ಲಾಟ್‌ಫಾರ್ಮ್‌-1ರಲ್ಲಿ ಕೊಳಚೆ ನೀರು ಹರಿಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಮಾತ್ರ ಜವಾಬ್ದಾರಿಯಿಂದ...

ಮನೋಜ್ ಅವರು ಸ್ಥಳೀಯವಾಗಿ ಎದುರಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದು, ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟಗಳು ಹಾಗೂ ಸಂಘಟನೆಯ ಮೂಲಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದರು. ಗುರುಮೂರ್ತಿ ಅವರು ಸಂಘಟನೆಯ ಮಹತ್ವ, ಒಗ್ಗಟ್ಟು ಹಾಗೂ ಸದಸ್ಯರ ಸಕ್ರಿಯ ಭಾಗವಹಿಸುವಿಕೆಯ ಅಗತ್ಯತೆಯ ಕುರಿತು ಮಾತನಾಡಿದರು.

WhatsApp Image 2026 10 05 at 4.10.52 PM

ಸಭೆಯಲ್ಲಿ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವುದು, ಹೆಚ್ಚಿನ ಜನರನ್ನು ಸಂಘಟನೆಯೊಂದಿಗೆ ಸಂಪರ್ಕಿಸುವುದು ಹಾಗೂ ಸಾರ್ವಜನಿಕರಲ್ಲಿ ಸಂಘಟನೆಯ ಕಾರ್ಯಚಟುವಟಿಕೆಗಳ ಬಗ್ಗೆ ಅರಿವು ಮೂಡಿಸುವ ಕುರಿತು ಚರ್ಚಿಸಲಾಯಿತು.

ನಿವೇಶನ ಹಾಗೂ ವಸತಿ ರಹಿತರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳನ್ನು ಒಗ್ಗೂಡಿಸಿ, ಸಂಘಟನೆಯ ಮುಖಂಡರ ನೇತೃತ್ವದಲ್ಲಿ ಸಂಬಂಧಪಟ್ಟ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಸಂಘಟನೆಯ ಕಾರ್ಯಚಟುವಟಿಕೆಗಳನ್ನು ನಿರಂತರವಾಗಿ ನಡೆಸಿಕೊಂಡು ಹೋಗುವ ಉದ್ದೇಶದಿಂದ ಪ್ರತಿ ತಿಂಗಳಿಗೊಮ್ಮೆ ಸಭೆ ನಡೆಸಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಬಾಬು ಬಳ್ಕೂರು, ರಾಜೀವ, ಜಯರಾಮ, ಸುವರ್ಣ, ಜಯಕರ, ಭೋಜ, ನಾಗರಾಜ, ಮಂಜು ಸೇರಿದಂತೆ ಹಲವು ಸದಸ್ಯರು ಉಪಸ್ಥಿತರಿದ್ದರು. ಸಂಘಟನೆಯ ಒಗ್ಗಟ್ಟು ಬಲಪಡಿಸಿ, ಮುಂದಿನ ದಿನಗಳಲ್ಲಿ ಸ್ಥಳೀಯ ಸಮಸ್ಯೆಗಳ ವಿರುದ್ಧ ಪರಿಣಾಮಕಾರಿ ಹೋರಾಟ ರೂಪಿಸುವ ಸಂಕಲ್ಪದೊಂದಿಗೆ ಸಭೆ ಮುಕ್ತಾಯಗೊಂಡಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಲಾರಿ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ...

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ...

ಯಲ್ಲಾಪುರ | ಆಯುಷ್ಮಾನ್ ಆರೋಗ್ಯ ಕೇಂದ್ರ ಸ್ಥಗಿತಗೊಳಿಸದಂತೆ ಸ್ಥಳೀಯರ ಆಗ್ರಹ

ಯಲ್ಲಾಪುರ: ಪಟ್ಟಣದ ರವೀಂದ್ರ ನಗರದಲ್ಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಯಾವುದೇ ಕಾರಣಕ್ಕೂ...