ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ ಖಾಯಂ ನಿವಾಸಿಗಳಿಗೆ ನಿವೇಶನ ಒದಗಿಸುವ ಉದ್ದೇಶದಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿದಾರರು ಪಡಿತರ ಚೀಟಿ, ಆಧಾರ್ ಕಾರ್ಡ್ ಪ್ರತಿ, ಪಾಸ್‌ಪೋರ್ಟ್ ಅಳತೆಯ ಭಾವಚಿತ್ರ, ಚಾಲ್ತಿಯಲ್ಲಿರುವ ಆದಾಯ ಮತ್ತು ಜಾತಿ ಪ್ರಮಾಣಪತ್ರ ಹಾಗೂ ಕುಟುಂಬದ ಯಾವುದೇ ಸದಸ್ಯರ ಹೆಸರಿನಲ್ಲಿ ನಿವೇಶನ ಇಲ್ಲ ಎಂಬ ಘೋಷಣಾ ಪತ್ರವನ್ನು ಸಲ್ಲಿಸಬೇಕು.
ಅರ್ಜಿಯನ್ನು ಅಕ್ಟೋಬರ್ 8ರೊಳಗೆ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ಕಚೇರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಪಟ್ಟಣ ಪಂಚಾಯಿತಿ ಕಚೇರಿಯನ್ನು ಸಂಪರ್ಕಿಸುವಂತೆ ಮುಖ್ಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.





