ಹೂಡೆ ಸಾಲಿಹಾತ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ಪರೀಕ್ಷೆಗೆ ಹಾಜರಾದ ಒಟ್ಟು 59 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದಾರೆ.
ಒಟ್ಟು ಉತ್ತೀರ್ಣರಾದವರಲ್ಲಿ 27 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಹಾಗೂ 6 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿರುವುದು ಗಮನಾರ್ಹವಾಗಿದೆ.
ಶಾಲೆಯ ಆಯಿಶಾ ಸಿಮಾನ್ 625ರಲ್ಲಿ 605 ಅಂಕ (96.08%) ಪಡೆದು ಪ್ರಥಮ ಸ್ಥಾನ ಗಳಿಸಿದ್ದು, ಟಿ.ಎಚ್. ಮುಸ್ಕಾನ್ ಬಾನು 604 ಅಂಕ (96.64%) ಹಾಗೂ ಫರಿಹಾ ಶಫಿ ನಾಕ್ವ 603 ಅಂಕ (96.48%) ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಶಾಲೆಯ ಸಾಧನೆಗೆ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಸಂತೋಷ ವ್ಯಕ್ತಪಡಿಸಿದ್ದಾರೆ.







