ಉಡುಪಿ | ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾಲಿಹಾತ್ ಶಿಕ್ಷಣ ಸಂಸ್ಥೆಯಲ್ಲಿ ಜಾಗೃತಿ ಕಾರ್ಯಕ್ರಮ

Date:

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

- Advertisement -

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಡಾ. ಅಬ್ದುಲ್ ಖುದ್ದೂಸ್ ಸುಹೈಬ್ (ಚಿಕ್ಕಮಗಳೂರು) ಅವರು ಪರಿಸರ ಸಂರಕ್ಷಣೆ, ನೀರಿನ ಉಳಿತಾಯ, ಪ್ಲಾಸ್ಟಿಕ್ ಬಳಕೆಯ ನಿಯಂತ್ರಣ ಹಾಗೂ ಮರಗಳ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಉಪನ್ಯಾಸ ನೀಡಿದರು. ಜರ್ಮನಿಯಲ್ಲಿ ಪರಿಸರ ಅಧ್ಯಯನದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಅವರು, ಪ್ರಸ್ತುತ ಪರಿಸರ ಸಂವಾದದ ರಾಷ್ಟ್ರೀಯ ಸಂಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...
1011206191

ತಮ್ಮ ಭಾಷಣದಲ್ಲಿ ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ವಿದ್ಯಾರ್ಥಿಗಳು ಚಿಕ್ಕ ವಯಸ್ಸಿನಿಂದಲೇ ಪರಿಸರ ಸ್ನೇಹಿ ಜೀವನಶೈಲಿಯನ್ನು ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಂಗವಾಗಿ ಗಿಡ ನೆಡುವಿಕೆ, ಪರಿಸರ ಪ್ರತಿಜ್ಞೆ, ಜಾಗೃತಿ ಚಟುವಟಿಕೆಗಳು ಹಾಗೂ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಯಿತು. ಶಿಕ್ಷಕಿಯರಾದ ಅಂಜುಮ್ ಹಾಗೂ ಫಾಹಿನಾ ಕಾರ್ಯಕ್ರಮ ನಿರೂಪಿಸಿದರು. ಅಕಾಡೆಮಿಕ್ ಮುಖ್ಯಸ್ಥ ಅಬ್ದುಲ್ ಹಸೀಬ್ ತರಫದಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಅವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಸುನಂದಾ, ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಯಾಸ್ಮಿನ್, ಮುಖ್ಯಶಿಕ್ಷಕಿ ಸುನೈನಾ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು ಹಾಗೂ ಜವಾಬ್ದಾರಿಯ ಮನೋಭಾವ ಬೆಳೆಸುವಲ್ಲಿ ಕಾರ್ಯಕ್ರಮ ಯಶಸ್ವಿಯಾಯಿತು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...

ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ...