ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

Date:

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳನ್ನು ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ದಲಿತರ ಭೂಮಿ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಒತ್ತಾಯಿಸಿ ದಲಿತ ಹಕ್ಕುಗಳ ಸಮಿತಿ (DHS) ರಾಜ್ಯ ಸಮಿತಿಯ ಕರೆ ಮೇರೆಗೆ ಸೋಮವಾರ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

- Advertisement -
WhatsApp Image 2026 09 21 at 10.04.41 PM 3

ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ದಲಿತ ಹಕ್ಕುಗಳ ಸಮಿತಿ (DHS) ಉಡುಪಿ ಜಿಲ್ಲಾ ಸಮಿತಿ, ಸಿಐಟಿಯು ಉಡುಪಿ ಜಿಲ್ಲಾ ಸಮಿತಿ, ಜನವಾದಿ ಮಹಿಳಾ ಸಂಘಟನೆ (JMS) ಉಡುಪಿ ಜಿಲ್ಲಾ ಸಮಿತಿ, ಡಿವೈಎಫ್‌ಐ, ಉಡುಪಿ ಜಿಲ್ಲಾ ಕಟ್ಟಡ ಕಾರ್ಮಿಕರ ಸಂಘ, ಕೃಷಿಕೂಲಿಕಾರರ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ಆಶ್ರಯದಲ್ಲಿ ಪ್ರತಿಭಟನೆ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಕರ್ನಾಟಕ ದಲಿತ ಹಕ್ಕುಗಳ ಹೋರಾಟ ಸಮಿತಿ ಉಡುಪಿ ಜಿಲ್ಲಾಧ್ಯಕ್ಷ ಸಂಜೀವ ಬಳ್ಕೂರು, ರಾಜ್ಯದಲ್ಲಿ ದಲಿತರ ಮೇಲೆ ನಡೆಯುತ್ತಿರುವ ಕೊಲೆ, ದೌರ್ಜನ್ಯ ಹಾಗೂ ಹಕ್ಕುಗಳ ಉಲ್ಲಂಘನೆಗೆ ಪೊಲೀಸ್‌ ಮತ್ತು ಜಿಲ್ಲಾಡಳಿತದ ವ್ಯವಸ್ಥೆಯ ವೈಫಲ್ಯವೂ ಕಾರಣವಾಗಿದೆ ಎಂದು ಆರೋಪಿಸಿದರು. ಒಂದು ಜಿಲ್ಲೆಯಲ್ಲಿ ದಲಿತರ ಕೊಲೆ ನಡೆದ ಸಂದರ್ಭದಲ್ಲಿ ಅದರ ಹೊಣೆಗಾರಿಕೆಯನ್ನು ಆ ಜಿಲ್ಲೆಯ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಮತ್ತು ಜಿಲ್ಲಾಧಿಕಾರಿ (ಡಿಸಿ) ಹೊರಬೇಕು ಎಂದು ಹೇಳಿದರು.

WhatsApp Image 2026 09 21 at 10.04.41 PM 2

2004ರಲ್ಲಿ ಯಡಿಯೂರಪ್ಪ ನೇತೃತ್ವದ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಹಾಗೂ ಕೊಲೆ ಪ್ರಕರಣಗಳಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್‌ ಅಧಿಕಾರಿಗಳ ಜವಾಬ್ದಾರಿಯನ್ನು ನಿಗದಿಪಡಿಸುವ ಕ್ರಮಗಳನ್ನು ಜಾರಿಗೆ ತರಲಾಗಿತ್ತು ಎಂದು ಅವರು ಹೇಳಿದರು. ಆದರೆ ನಂತರ ಅಧಿಕಾರಕ್ಕೆ ಬಂದ ಸರ್ಕಾರಗಳು ಈ ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸದಿರುವುದರಿಂದ ದಲಿತರ ಮೇಲಿನ ದೌರ್ಜನ್ಯಗಳು ಮುಂದುವರಿಯುತ್ತಿವೆ ಎಂದು ಆರೋಪಿಸಿದರು.

ಪ್ರತಿಯೊಂದು ಗ್ರಾಮದಲ್ಲಿಯೂ ಪೊಲೀಸ್‌ ವ್ಯವಸ್ಥೆ ಹಾಗೂ ಸ್ಥಳೀಯ ಆಡಳಿತದ ಮೂಲಕ ದಲಿತರ ಕುಂದುಕೊರತೆಗಳ ಬಗ್ಗೆ ನಿಯಮಿತವಾಗಿ ಮಾಹಿತಿ ಸಂಗ್ರಹಿಸುವ ವ್ಯವಸ್ಥೆ ಜಾರಿಗೆ ಬರಬೇಕಿತ್ತು. ಠಾಣಾಧಿಕಾರಿಗಳು ದಲಿತರ ಕುಂದುಕೊರತೆಗಳ ಸಭೆಗಳನ್ನು ನಿಯಮಿತವಾಗಿ ನಡೆಸಿ, ಅವರ ಸಮಸ್ಯೆಗಳನ್ನು ಮೇಲಧಿಕಾರಿಗಳ ಗಮನಕ್ಕೆ ತಂದು ಅಗತ್ಯ ಕಾನೂನು ಕ್ರಮ ಕೈಗೊಳ್ಳಬೇಕಿತ್ತು. ಈ ಪ್ರಕ್ರಿಯೆಯಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಕಂಡುಬಂದರೆ, ಅದಕ್ಕೆ ಸಂಬಂಧಪಟ್ಟ ಪೊಲೀಸ್‌ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಬೇಕು ಎಂದು ಅವರು ಹೇಳಿದರು.

WhatsApp Image 2026 09 21 at 10.11.24 PM

ಅದೇ ರೀತಿ, ಜಿಲ್ಲಾಧಿಕಾರಿಗಳು ಕೇವಲ ಜಿಲ್ಲಾಡಳಿತದ ಸಾಮಾನ್ಯ ನಿರ್ವಹಣೆಗೆ ಸೀಮಿತರಾಗದೆ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿರುವ ದಲಿತರ ಸಾಮಾಜಿಕ ಹಾಗೂ ಆರ್ಥಿಕ ಸ್ಥಿತಿಗತಿಗಳ ಬಗ್ಗೆಯೂ ಸಮಗ್ರ ಮಾಹಿತಿ ಹೊಂದಿರಬೇಕು. ಗ್ರಾಮ ಮಟ್ಟದ ಅಧಿಕಾರಿಗಳಿಂದ ಅಗತ್ಯ ಮಾಹಿತಿ ಸಂಗ್ರಹಿಸಿ, ತಹಸೀಲ್ದಾರ್‌ಗಳ ಮೂಲಕ ಜಿಲ್ಲಾಧಿಕಾರಿಗಳ ಗಮನಕ್ಕೆ ತರುವ ವ್ಯವಸ್ಥೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕಿತ್ತು. ಆದರೆ ಈ ವ್ಯವಸ್ಥೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಅವರು ಆರೋಪಿಸಿದರು.

ದೇಶದ ವಿವಿಧ ಭಾಗಗಳಲ್ಲಿ ದಲಿತರು ದೇವಸ್ಥಾನ ಪ್ರವೇಶ ಸೇರಿದಂತೆ ತಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸಲು ಮುಂದಾದಾಗಲೂ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಘಟನೆಗಳು ವರದಿಯಾಗುತ್ತಿವೆ. ಇತ್ತೀಚೆಗೆ ಯಾದಗಿರಿ ಜಿಲ್ಲೆಯಲ್ಲಿ ದೇವಸ್ಥಾನಕ್ಕೆ ತೆರಳಿದ್ದ ದಲಿತ ಕುಟುಂಬದ ಮೇಲೆ ಹಲ್ಲೆ ಹಾಗೂ ಬೆದರಿಕೆ ನಡೆದಿರುವ ಆರೋಪವೂ ಕೇಳಿಬಂದಿದೆ. ಇಂತಹ ಘಟನೆಗಳು ಒಂದು ಜಿಲ್ಲೆಗೆ ಸೀಮಿತವಾಗಿಲ್ಲ; ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಲ್ಲಿ ದಲಿತರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ ಎಂದು ಹೇಳಿದರು.

WhatsApp Image 2026 09 21 at 10.04.41 PM 1

ದಲಿತರ ಮೇಲಿನ ದೌರ್ಜನ್ಯಗಳನ್ನು ತಡೆಯಲು ಪೊಲೀಸ್‌ ಮತ್ತು ಜಿಲ್ಲಾಡಳಿತಗಳು ತಮ್ಮ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕು. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ, ದೌರ್ಜನ್ಯಗಳಿಗೆ ಕಾರಣವಾಗುವ ಸಾಮಾಜಿಕ ವ್ಯವಸ್ಥೆಯ ಬಗ್ಗೆಯೂ ಗಂಭೀರವಾಗಿ ಗಮನಹರಿಸಬೇಕು ಎಂದು ಅವರು ಒತ್ತಾಯಿಸಿದರು.

ಸಿಐಟಿಯು ಉಡುಪಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ.ವಿ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ದೇಶದಾದ್ಯಂತ ಹಲವು ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳು ನಡೆಯುತ್ತಿವೆ. ಆದರೆ ಮುಖ್ಯವಾಹಿನಿಯ ಮಾಧ್ಯಮಗಳು ಎಲ್ಲ ಪ್ರಕರಣಗಳಿಗೂ ಸಮಾನ ಪ್ರಚಾರ ನೀಡದೆ, ಕೆಲವೇ ಪ್ರಕರಣಗಳನ್ನು ಮಾತ್ರ ದೊಡ್ಡ ಮಟ್ಟದಲ್ಲಿ ಬಿಂಬಿಸುತ್ತಿವೆ. ಅಂತಹ ಪ್ರಕರಣಗಳು ದೇಶವ್ಯಾಪಿ ಚರ್ಚೆಗೆ ಗ್ರಾಸವಾಗುತ್ತವೆ. ಆ ಸಂತ್ರಸ್ತರಿಗೆ ನ್ಯಾಯ ದೊರೆಯಬೇಕು ಎಂಬ ಒತ್ತಾಯವೂ ವ್ಯಾಪಕವಾಗಿ ವ್ಯಕ್ತವಾಗುತ್ತದೆ.

ಆದರೆ ಇದೇ ಸಂದರ್ಭದಲ್ಲಿ ತಳಸಮುದಾಯಗಳು, ವಿಶೇಷವಾಗಿ ದಲಿತ ಸಮುದಾಯದ ಮಹಿಳೆಯರು ಹಾಗೂ ಜನರ ಮೇಲೆ ನಡೆಯುವ ಅತ್ಯಾಚಾರ, ಕೊಲೆ ಮತ್ತು ದೌರ್ಜನ್ಯ ಪ್ರಕರಣಗಳಿಗೆ ಅದೇ ರೀತಿಯ ಪ್ರಚಾರ ಹಾಗೂ ಸಾಮಾಜಿಕ ಗಮನ ದೊರೆಯುವುದಿಲ್ಲ. ಹಲವು ಪ್ರಕರಣಗಳು ಪತ್ರಿಕೆಯ ಯಾವುದೋ ಒಂದು ಮೂಲೆಯಲ್ಲಿ ಪ್ರಕಟವಾಗಿ ಮರೆಯಾಗುತ್ತವೆ. ಇದು ನಮ್ಮ ಸಮಾಜದ ವಾಸ್ತವ ಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ.

WhatsApp Image 2026 09 21 at 10.04.41 PM

ಅತ್ಯಾಚಾರ ಮತ್ತು ಕೊಲೆಗೆ ಒಳಗಾದ ಪ್ರತಿಯೊಬ್ಬರಿಗೂ ಸಮಾನ ನ್ಯಾಯ ದೊರೆಯಬೇಕು. ಆದರೆ ನಮ್ಮ ಸಮಾಜದಲ್ಲಿ ಜಾತಿ ವ್ಯವಸ್ಥೆ ಇನ್ನೂ ಆಳವಾಗಿ ಬೇರೂರಿರುವ ಪರಿಣಾಮ, ತಳಸಮುದಾಯದ ಸಂತ್ರಸ್ತರಿಗೆ ನ್ಯಾಯ ಪಡೆಯುವ ಪ್ರಕ್ರಿಯೆಯಲ್ಲಿಯೇ ಅಸಮಾನತೆ ಎದುರಾಗುತ್ತಿದೆ. ಮೇಲ್ವರ್ಗದವರಿಗೆ ಒಂದು ರೀತಿಯ ನ್ಯಾಯ, ತಳಸಮುದಾಯದವರಿಗೆ ಮತ್ತೊಂದು ರೀತಿಯ ನ್ಯಾಯ ಎಂಬ ಭಾವನೆ ಮೂಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ತಳಸಮುದಾಯಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿಯೂ ಮಾಧ್ಯಮಗಳು ಸಮಾನವಾಗಿ ಧ್ವನಿ ಎತ್ತಬೇಕು. ಸಂತ್ರಸ್ತರು ಯಾವ ಜಾತಿ, ಧರ್ಮ ಅಥವಾ ಸಮುದಾಯಕ್ಕೆ ಸೇರಿದವರೇ ಆಗಿರಲಿ, ಕಾನೂನಿನ ಮುಂದೆ ಎಲ್ಲರಿಗೂ ಸಮಾನ ನ್ಯಾಯ ದೊರೆಯಬೇಕು. ಆ ನಿಟ್ಟಿನಲ್ಲಿ ನಮ್ಮನ್ನು ಆಳುವವರ ಆಡಳಿತದ ಧೋರಣೆಯಲ್ಲಿಯೂ ಬದಲಾವಣೆ ಅಗತ್ಯವಿದೆ. ಕರ್ನಾಟಕದಲ್ಲಿಯೂ ಈ ಅಸಮಾನತೆಯ ಪ್ರತಿಬಿಂಬವನ್ನು ನಾವು ಇಂದು ಕಾಣುತ್ತಿದ್ದೇವೆ” ಎಂದು ಹೇಳಿದರು.

WhatsApp Image 2026 09 21 at 10.04.40 PM 2

ಸಾಮಾಜಿಕ ಹೋರಾಟಗಾರ ಇದ್ರೀಸ್‌ ಹೂಡೆ ಮಾತನಾಡಿ, “2022ರ ಒಂದು ಸಮೀಕ್ಷೆಯ ಪ್ರಕಾರ ದೇಶದಲ್ಲಿ ಸುಮಾರು 4.45 ಲಕ್ಷ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ನಡೆದಿವೆ. ಈ ಪ್ರಕರಣಗಳಲ್ಲಿ ದಲಿತರು ಮತ್ತು ಆದಿವಾಸಿ ಸಮುದಾಯಗಳ ಮಹಿಳೆಯರ ಮೇಲಿನ ದೌರ್ಜನ್ಯಗಳ ಪ್ರಮಾಣವೂ ಆತಂಕಕಾರಿಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ವರದಿಯ ಪ್ರಕಾರ ದೇಶದಲ್ಲಿ ದಿನಕ್ಕೆ ಸರಾಸರಿ 87 ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ಇದು ನಾಗರಿಕ ಸಮಾಜಕ್ಕೆ ಅತ್ಯಂತ ಅವಮಾನಕರ ಹಾಗೂ ತಲೆತಗ್ಗಿಸುವ ಸಂಗತಿಯಾಗಿದೆ” ಎಂದರು.

“ದೇಶ ಸ್ವಾತಂತ್ರ್ಯ ಪಡೆದು ಏಳು–ಎಂಟು ದಶಕಗಳು ಕಳೆದಿದ್ದರೂ, ಮಹಿಳೆಯರಿಗೆ ಸುರಕ್ಷತೆ ಮತ್ತು ಸಮಾನತೆಯನ್ನು ಖಾತರಿಪಡಿಸುವಲ್ಲಿ ನಾವು ಇನ್ನೂ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ. ಪ್ರಜಾಪ್ರಭುತ್ವದ ಮೂಲ ತತ್ವಗಳಾದ ಸಮಾನತೆ, ಸ್ವಾತಂತ್ರ್ಯ, ನ್ಯಾಯ ಮತ್ತು ಮಾನವ ಘನತೆಯನ್ನು ಸಮಾಜ ಇನ್ನಷ್ಟು ಗಂಭೀರವಾಗಿ ಮೈಗೂಡಿಸಿಕೊಳ್ಳಬೇಕಿದೆ. ಮಹಿಳೆಯರು, ಅದರಲ್ಲೂ ದಲಿತ ಮತ್ತು ಆದಿವಾಸಿ ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಪರಿಣಾಮಕಾರಿ ಕಾನೂನು ಕ್ರಮಗಳ ಜೊತೆಗೆ ಸಾಮಾಜಿಕ ಜಾಗೃತಿ ಮತ್ತು ಹೊಣೆಗಾರಿಕೆ ಅಗತ್ಯ” ಎಂದು ಅವರು ಹೇಳಿದರು.

WhatsApp Image 2026 09 21 at 10.04.40 PM 1

ದಲಿತ ಹಕ್ಕುಗಳ, ಸಮಿತಿ ಉಡುಪಿ ಜಿಲ್ಲಾ ಖಜಾಂಜಿ ನಾಗರತ್ನ ಆರ್ ಮಾತನಾಡಿ, ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಉಳ್ಳವರು ವಿವಿಧ ವಿಚಾರಗಳಲ್ಲಿ ದಲಿತರನ್ನು ಗುರಿಯಾಗಿಸಿಕೊಂಡು ದೌರ್ಜನ್ಯ ಎಸಗುತ್ತಿದ್ದಾರೆ ಎಂದು ಆರೋಪಿಸಿದರು.

ಭೂಮಿ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ದಲಿತರು ಸರ್ಕಾರಿ ಕಚೇರಿಗಳಿಗೆ ತೆರಳಿದಾಗ ಅಧಿಕಾರಿಗಳು ಸೂಕ್ತ ಮಾಹಿತಿ ನೀಡುವುದಾಗಲಿ, ಮಾರ್ಗದರ್ಶನ ನೀಡುವುದಾಗಲಿ ಮಾಡುತ್ತಿಲ್ಲ. ದಲಿತರು ಎಂಬ ಕಾರಣಕ್ಕೆ ಅವರನ್ನು ತಾತ್ಸಾರದಿಂದ ನೋಡುವ ಮನೋಭಾವ ಇನ್ನೂ ಮುಂದುವರಿದಿದೆ ಎಂದು ಅವರು ಹೇಳಿದರು.

ದಲಿತರ ಮೇಲೆ ಅತ್ಯಾಚಾರ, ಕೊಲೆ ಸೇರಿದಂತೆ ಗಂಭೀರ ದೌರ್ಜನ್ಯಗಳು ನಡೆದಾಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದರೂ, ಘಟನೆ ನಿಜವಾಗಿಯೂ ನಡೆದಿದೆಯೇ ಎಂಬುದನ್ನು ಸಮಗ್ರವಾಗಿ ತನಿಖೆ ಮಾಡುವ ಬದಲು ದಲಿತರದ್ದೇ ತಪ್ಪು ಎಂಬ ರೀತಿಯಲ್ಲಿ ಪ್ರಕರಣವನ್ನು ನೋಡುವ ಪರಿಸ್ಥಿತಿ ಇದೆ. ಇಂತಹ ಧೋರಣೆಯಿಂದ ದಲಿತರಿಗೆ ನ್ಯಾಯ ದೊರೆಯುವುದು ಕಷ್ಟವಾಗುತ್ತಿದೆ ಎಂದು ಹೇಳಿದರು.

WhatsApp Image 2026 09 21 at 10.04.39 PM

ಚಿಂತಕ ಪ್ರೊ. ಹಯವದನ ಮೂಡಸಗ್ರಿ ಮಾತನಾಡಿ, “ಸ್ವಾತಂತ್ರ್ಯ ದೊರೆತು 80 ವರ್ಷಗಳು ಕಳೆದರೂ ಸಮಾಜದಲ್ಲಿ ಸಮಾನತೆ ಸಂಪೂರ್ಣವಾಗಿ ನೆಲೆಸಿಲ್ಲ. ಇಂದಿಗೂ ಮೂಢನಂಬಿಕೆ, ಜಾತೀಯತೆ, ಮೇಲು–ಕೀಳು ಎಂಬ ಭಾವನೆಗಳು ಮುಂದುವರಿದಿರುವುದು ವಿಷಾದನೀಯ. ಬಡವರು ಮತ್ತು ದಲಿತರ ಪರವಾಗಿ ನಿಲ್ಲಬೇಕಾದ ವ್ಯವಸ್ಥೆ ಉಳ್ಳವರು ಹಾಗೂ ಹಣವಂತರ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂಬ ಭಾವನೆ ಜನರಲ್ಲಿ ಮೂಡಿದೆ” ಎಂದು ಹೇಳಿದರು.

“ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿ ಎಸ್‌ಪಿ, ಡಿಸಿ ಸೇರಿದಂತೆ ಉನ್ನತ ಹುದ್ದೆಗಳಿಗೆ ಬರುವ ಅಧಿಕಾರಿಗಳಿಗೆ ಕೇವಲ ಆಡಳಿತ ಮತ್ತು ಸ್ಪರ್ಧಾತ್ಮಕ ಪರೀಕ್ಷೆಯ ಪಾಠವಷ್ಟೇ ಸಾಕಾಗುವುದಿಲ್ಲ. ಅವರಿಗೆ ಮೊದಲು ಸಂವಿಧಾನದ ಆಶಯಗಳು ಹಾಗೂ ಮನುಷ್ಯತ್ವದ ಪಾಠವನ್ನು ಕಲಿಸಬೇಕು. ಅಧಿಕಾರಿಗಳಾಗಿ ದೊಡ್ಡ ಹುದ್ದೆಯಲ್ಲಿರುವ ಕೆಲವರು ನ್ಯಾಯಕ್ಕಾಗಿ ತಮ್ಮ ಬಳಿ ಬರುವ ಜನರನ್ನು ಬೈದು, ಅವಮಾನಿಸುವಂತಹ ಘಟನೆಗಳು ನಡೆಯುತ್ತಿವೆ. ಹೀಗಾಗಿ ಮೊದಲು ಮನುಷ್ಯರಾಗಿ, ಮನುಷ್ಯತ್ವವನ್ನು ಮೈಗೂಡಿಸಿಕೊಂಡು ಬಳಿಕ ಅಧಿಕಾರಿಗಳಾಗಬೇಕು” ಎಂದು ಅವರು ಹೇಳಿದರು.

WhatsApp Image 2026 09 21 at 10.11.23 PM

ಪ್ರತಿಭಟನಾ ಸ್ಥಳದಿಂದ ಜಿಲ್ಲಾಧಿಕಾರಿ ಕಛೇರಿವರೆಗೆ ಮೆರವಣೆಗೆ ನಡೆಸಿ ಅಪರ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ದಲಿತ ಹಕ್ಕುಗಳ ಸಮಿತಿ ಉಡುಪಿ ಜಿಲ್ಲಾ ಕಾರ್ಯದರ್ಶಿ ರವಿ. ವಿ. ಎಂ., ಮುಖಂಡರಾದ ಅಶ್ವಿನಿ ಲಾರೆನ್ಸ್ ಮೂಡುಬೆಳ್ಳೆ, ಮನೋಜ್ ಕುಮಾರ್, ಸುಶೀಲಾ ಬಳ್ಕೂರು, ಅಣ್ಣಪ್ಪ ಬಳ್ಕೂರು, ಬಾಬು ಬಳ್ಕೂರು, ದಯಾನಂದ ಮಲ್ಪೆ ಹಾಗೂ ರಾಮ ಕಾರ್ಕಡ ಉಪಸ್ಥಿತರಿದ್ದರು.

WhatsApp Image 2026 09 21 at 10.11.24 PM 1

ಸಿಐಟಿಯು ಉಡುಪಿ ಜಿಲ್ಲಾ ಅಧ್ಯಕ್ಷ ಶಶಿಧರ್ ಗೊಲ್ಲ, ಕೋಶಾಧಿಕಾರಿ ಕವಿರಾಜ್ ಎಸ್. ಕಾಂಚನ್, ಉಪಾಧ್ಯಕ್ಷ ಎಚ್. ನರಸಿಂಹ, ಸಿಐಟಿಯು ರಾಜ್ಯ ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ, ರಾಜ್ಯ ಕಾರ್ಯದರ್ಶಿ ಸುರೇಶ್ ಕಲ್ಲಾಗಾರ, ಡಿವೈಎಫ್‌ಐ ಮುಖಂಡರಾದ ಸೈಯಾದ್ ಮತ್ತು ಮುರಳಿ, ಜನವಾದಿ ಮಹಿಳಾ ಸಂಘದ ಜಿಲ್ಲಾ ಕಾರ್ಯದರ್ಶಿ ಶೀಲಾವತಿ, ಮುಖಂಡರಾದ ಬಲ್ಕೀಸ್ ಹಾಗೂ ಸುನೀತಾ ಶೆಟ್ಟಿ, ಕೃಷಿಕೂಲಿಕಾರರ ಸಂಘದ ಜಿಲ್ಲಾ ಮುಖಂಡೆ ನಾಗರತ್ನ ನಾಡ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ದಲಿತರ ಕೇರಿಗೆ ಹೋದರೆ ‘ನಾನು ಸಾಯ್ತೀನಿ’: ಉದ್ಧಟತನ ಮೆರೆದ ಪೂಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯ ಪಿಡಚಲಹಳ್ಳಿ ಗ್ರಾಮದಲ್ಲಿ ದಲಿತರ ಕೇರಿಗೆ ದೇವರ ಮೂರ್ತಿ ಹೋಗುವುದನ್ನು...

ಮೈಸೂರು | ದಸರಾ ವೀಕ್ಷಣೆಗೆ ಗೋಲ್ಡ್ ಕಾರ್ಡ್, ಆನ್ಲೈನ್‌ ಟಿಕೆಟ್ ಬುಕಿಂಗ್‌ ಆರಂಭ

ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಮೈಸೂರು ಜಿಲ್ಲಾಡಳಿತ ಇಂದಿನಿಂದ (ಸೆಪ್ಟೆಂಬರ್ 21)...

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...