ಆಗುಂಬೆ ಘಾಟ್ ಸುರಕ್ಷತೆಗೆ ವೈಜ್ಞಾನಿಕ ರಸ್ತೆ ಅಭಿವೃದ್ಧಿ: ಸಚಿವ ಸತೀಶ ಜಾರಕಿಹೊಳಿ

Date:

ಮಲೆನಾಡು, ಅರೆ ಮಲೆನಾಡು ಹಾಗೂ ಬಯಲುಸೀಮೆಯನ್ನು ಕರಾವಳಿ ಭಾಗದೊಂದಿಗೆ ಸಂಪರ್ಕಿಸುವ ಪ್ರಮುಖ ಆಗುಂಬೆ ಘಾಟ್ ರಸ್ತೆಯ ಸರ್ವಾಂಗೀಣ ಅಭಿವೃದ್ಧಿಗೆ ಚಾಲನೆ ನೀಡುವ ಉದ್ದೇಶದಿಂದ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಬುಧವಾರ ಅಧಿಕಾರಿಗಳ ತಂಡದೊಂದಿಗೆ ಸ್ಥಳ ಪರಿಶೀಲನೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅಗತ್ಯವಿರುವ ಕಾಮಗಾರಿಗಳ ಕುರಿತು ಸಮಗ್ರ ಚರ್ಚೆ ನಡೆಸಿದರು.

- Advertisement -

ಆಗುಂಬೆ ಘಾಟ್‌ನಲ್ಲಿ ಪ್ರತಿನಿತ್ಯ ಸಾವಿರಾರು ಲಘು ವಾಹನಗಳು, ಮಿನಿ ಬಸ್‌ಗಳು ಹಾಗೂ ಸಾರ್ವಜನಿಕರು ಸಂಚರಿಸುತ್ತಿದ್ದು, ವಿಶೇಷವಾಗಿ ಆರೋಗ್ಯ ಸೇವೆ ಮತ್ತು ಶಿಕ್ಷಣಕ್ಕಾಗಿ ಮಲೆನಾಡಿನ ಜನರು ಇದೇ ಮಾರ್ಗವನ್ನು ಹೆಚ್ಚಾಗಿ ಅವಲಂಬಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಸ್ತೆಯ ಕೆಲವೆಡೆ ಅಗಲೀಕರಣ, ರಕ್ಷಣಾ ಗೋಡೆ ನಿರ್ಮಾಣ ಹಾಗೂ ವೈಜ್ಞಾನಿಕ ರೀತಿಯ ರಸ್ತೆ ಸುಧಾರಣಾ ಕಾಮಗಾರಿಗಳನ್ನು ಕೈಗೊಳ್ಳುವ ಅಗತ್ಯವಿದೆ ಎಂದು ಸಚಿವರು ಅಧಿಕಾರಿಗಳೊಂದಿಗೆ ಪರಿಶೀಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಶಿವಮೊಗ್ಗ ಕಡೆಯಿಂದ ಆರಂಭವಾಗುವ ಘಾಟ್ ರಸ್ತೆಯ ಪ್ರವೇಶ ಭಾಗ ಸೇರಿದಂತೆ 5, 6 ಮತ್ತು 7ನೇ ತಿರುವುಗಳಲ್ಲಿ ರಸ್ತೆ ಅಗಲೀಕರಣ ಅಗತ್ಯವಿದ್ದು, ಈ ಕುರಿತು ಅಭಿಯಂತರರಿಂದ ಮಾಹಿತಿ ಪಡೆದರು. ಮಳೆಗಾಲದಲ್ಲಿ ಭೂಕುಸಿತವಾಗದಂತೆ ತಡೆಯುವ ಶಾಶ್ವತ ಕ್ರಮಗಳ ಬಗ್ಗೆಯೂ ಅಧಿಕಾರಿಗಳೊಂದಿಗೆ ಚರ್ಚಿಸಿದರು.

PWD MINISTER AGUMBE GHAT VISIT

ಆಗುಂಬೆ ಸುರಂಗ ಮಾರ್ಗ ನಿರ್ಮಾಣ ಕುರಿತು ಈಗಾಗಲೇ ಎರಡು ಬಾರಿ ನೀಲನಕ್ಷೆ (ಡಿಪಿಆರ್) ಸಿದ್ಧಪಡಿಸಲು ಟೆಂಡರ್ ಕರೆಯಲಾಗಿದ್ದರೂ ಯಾವುದೇ ಸಂಸ್ಥೆಗಳು ಮುಂದೆ ಬಂದಿಲ್ಲ. ಸುರಂಗ ನಿರ್ಮಾಣ ಅತ್ಯಂತ ದುಬಾರಿ ಯೋಜನೆಯಾಗಿದ್ದು, ಕಳೆದ ಹಲವು ದಶಕಗಳಿಂದ ವಿವಿಧ ಡಿಪಿಆರ್‌ಗಳು ಸಿದ್ಧವಾದರೂ ಅವು ಅನುಷ್ಠಾನಕ್ಕೆ ಬಂದಿಲ್ಲ ಎಂದು ಸಚಿವರು ತಿಳಿಸಿದರು.

ಇತ್ತೀಚೆಗೆ ಬಾಳೆಬಾರೆ ಘಾಟ್‌ನಲ್ಲಿ ಭೂಕುಸಿತ ಉಂಟಾದ ಹಿನ್ನೆಲೆಯಲ್ಲಿ ಭಾರೀ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಇದರ ಪರಿಣಾಮವಾಗಿ ಆಗುಂಬೆ ಘಾಟ್‌ನಲ್ಲಿ ವಾಹನ ದಟ್ಟಣೆ ಹೆಚ್ಚಿದ್ದು, ಕಿರಿದಾದ ರಸ್ತೆ ಹಾಗೂ ಮಳೆಗಾಲದ ಪರಿಸ್ಥಿತಿಯಿಂದ ಸಾರ್ವಜನಿಕರಲ್ಲಿ ಸುರಕ್ಷತೆ ಕುರಿತ ಆತಂಕ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಅಗತ್ಯ ದುರಸ್ತಿ ಮತ್ತು ಶಾಶ್ವತ ಅಭಿವೃದ್ಧಿ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಆಗುಂಬೆ ಘಾಟ್ ಪ್ರದೇಶ ಅರಣ್ಯ ಹಾಗೂ ವನ್ಯಜೀವಿ ವ್ಯಾಪ್ತಿಗೆ ಒಳಪಡುವುದರಿಂದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ತೊಡಕು ಉಂಟಾಗುತ್ತಿದೆ. ಈ ಸಮಸ್ಯೆಗಳನ್ನು ಶೀಘ್ರ ಪರಿಹರಿಸಲು ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಮತ್ತು ಅರಣ್ಯ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿ, ಯಾವ ರೀತಿಯ ರಸ್ತೆ ಅಭಿವೃದ್ಧಿ ಕೈಗೊಳ್ಳಬೇಕೆಂಬುದರ ಕುರಿತು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯಷ್ಟು ಮಳೆ ದಾಖಲಾಗಿಲ್ಲ. ಇದುವರೆಗೆ ಸಂಗ್ರಹವಾಗಿರುವ ನೀರು ಮುಂದಿನ ವರ್ಷದ ಜೂನ್‌ವರೆಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಸಾಕಾಗಬಹುದು. ಆದರೆ ಮುಂದಿನ ಹತ್ತು ದಿನಗಳಲ್ಲಿ ಸಮರ್ಪಕ ಮಳೆಯಾಗದಿದ್ದರೆ ಕೃಷಿ ಬೆಳೆಗಳಿಗೆ ಹಾನಿಯಾಗುವ ಸಾಧ್ಯತೆ ಇದೆ ಎಂದು ಅವರು ಎಚ್ಚರಿಸಿದರು.

ಕಾಡಂಚಿನ ಗ್ರಾಮಗಳ ಸಂಪರ್ಕ ಸುಧಾರಣೆಗೆ ಜಿಲ್ಲೆಯಲ್ಲಿ ಈಗಾಗಲೇ 600ಕ್ಕೂ ಹೆಚ್ಚು ಕಾಲುಸಂಕಗಳನ್ನು ನಿರ್ಮಿಸಲಾಗಿದ್ದು, ಹೆಬ್ರಿ ತಾಲೂಕೊಂದರಲ್ಲೇ 60ಕ್ಕೂ ಹೆಚ್ಚು ಕಾಲುಸಂಕಗಳು ನಿರ್ಮಾಣಗೊಂಡಿವೆ. ಮುಂದಿನ ಹಂತದಲ್ಲಿ ಇನ್ನೂ 30 ಕಾಲುಸಂಕಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆಯ ರಸ್ತೆಗಳಲ್ಲಿ ಮಳೆ ಸೇರಿದಂತೆ ವಿವಿಧ ಕಾರಣಗಳಿಂದ ಉಂಟಾಗುವ ಗುಂಡಿಗಳನ್ನು ಆದ್ಯತೆಯ ಮೇಲೆ ದುರಸ್ತಿಪಡಿಸಲಾಗುತ್ತಿದೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಎಲ್ಲಾ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಿ ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ವೇಳೆ ಸ್ಥಳೀಯರು ಹೆಬ್ರಿ ಕೆಳಪೇಟೆಯಿಂದ ಪೊಲೀಸ್ ಕ್ವಾಟ್ರರ್ಸ್‌ವರೆಗೆ ರಾಷ್ಟ್ರೀಯ ಹೆದ್ದಾರಿ 169ಎ ಅನ್ನು ನಾಲ್ಕು ಪಥಗಳ ರಸ್ತೆಯಾಗಿ ಅಭಿವೃದ್ಧಿಪಡಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಶಿಫಾರಸು ಮಾಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಉಡುಪಿ–ಹೆಬ್ರಿ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ವಾಹನ ಸಂಚಾರದಿಂದ ಹೆಬ್ರಿ ವೃತ್ತದಲ್ಲಿ ಪ್ರತಿದಿನ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದ್ದು, ವಾಹನ ಸವಾರರು, ಆಂಬುಲೆನ್ಸ್, ಶಾಲಾ ಮಕ್ಕಳು ಹಾಗೂ ಪಾದಚಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸ್ಥಳ ಪರಿಶೀಲನೆ ವೇಳೆ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ, ಸ್ಥಳೀಯ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ, ರಾಷ್ಟ್ರೀಯ ಹೆದ್ದಾರಿ ಇಲಾಖೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...