ಹುಲಿಕಲ್ ಘಾಟ್ ಸಮಸ್ಯೆ ಪರಿಹಾರಕ್ಕೆ ಇಲಾಖೆ ಬದ್ಧ: ಸಚಿವ ಸತೀಶ್ ಜಾರಕಿಹೊಳಿ

Date:

ಕರಾವಳಿ ಹಾಗೂ ಮಲೆನಾಡನ್ನು ಸಂಪರ್ಕಿಸುವ ಪ್ರಮುಖ ಹುಲಿಕಲ್ ಘಾಟ್‌ನಲ್ಲಿ ಆಗಾಗ ಎದುರಾಗುವ ರಸ್ತೆ ಸಮಸ್ಯೆಗಳು ಲೋಕೋಪಯೋಗಿ ಇಲಾಖೆಗೆ ದೊಡ್ಡ ಸವಾಲಾಗಿದ್ದರೂ, ಶಾಶ್ವತ ಪರಿಹಾರ ಕಲ್ಪಿಸಲು ಇಲಾಖೆ ಬದ್ಧವಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

- Advertisement -

ಮಂಗಳವಾರ ಸಂಜೆ ಹುಲಿಕಲ್ ಘಾಟ್‌ನಲ್ಲಿ ನಿರ್ಮಾಣವಾಗುತ್ತಿರುವ ರೀಟೇನಿಂಗ್ ವಾಲ್ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಮಸ್ಯೆ ಪರಿಹಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಹಿರಿಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಅಗತ್ಯ ವಾಹನಗಳ ಸುರಕ್ಷಿತ ಸಂಚಾರಕ್ಕೆ ಬೇಕಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ನಿರಂತರ ಮಳೆಯಿಂದ ಕೆಲ ಕಾಮಗಾರಿಗಳು ವಿಳಂಬವಾಗಿದ್ದರೂ, ಹುಲಿಕಲ್ ಘಾಟ್ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇಲಾಖೆ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.

ಬೈಂದೂರು–ರಾಣಿಬೆನ್ನೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಹಾಗೂ ಆಗುಂಬೆ ಹೆದ್ದಾರಿ ಅಭಿವೃದ್ಧಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆಗಳ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಲೋಕೋಪಯೋಗಿ ಇಲಾಖೆಯ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯ ವೇತನ ಸಮಸ್ಯೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಗುತ್ತಿಗೆದಾರರಿಂದ ಬಿಲ್ ಸಲ್ಲಿಕೆಯಲ್ಲಿ ಉಂಟಾದ ವಿಳಂಬದಿಂದ ಸಮಸ್ಯೆ ಎದುರಾಗಿದೆ. ಈ ವರ್ಷದಿಂದಲೇ ಸಿಬ್ಬಂದಿಯನ್ನು ನೇರವಾಗಿ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡು ಸರ್ಕಾರದಿಂದಲೇ ವೇತನ ಪಾವತಿಸುವ ವ್ಯವಸ್ಥೆ ಜಾರಿಗೆ ತರಲಾಗುವುದು ಎಂದು ತಿಳಿಸಿದರು.

ಕುಂದಾಪುರ ಪಿಡಬ್ಲ್ಯೂಡಿ ಐಬಿ ಕಾಮಗಾರಿ ಪ್ರಗತಿಯಲ್ಲಿದೆ

ಕುಂದಾಪುರ ಲೋಕೋಪಯೋಗಿ ಇಲಾಖೆ ನಿರೀಕ್ಷಣಾ ಮಂದಿರ (ಪಿಡಬ್ಲ್ಯೂಡಿ ಐಬಿ) ಕಾಮಗಾರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಸತೀಶ್ ಜಾರಕಿಹೊಳಿ, ತಾವು ಸಚಿವರಾಗಿದ್ದ ಅವಧಿಯಲ್ಲೇ ಈ ಯೋಜನೆಗೆ ಅನುದಾನ ಮಂಜೂರು ಮಾಡಲಾಗಿತ್ತು. ಕೆಳ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಮೇಲಂತಸ್ತಿನ ಕಾಮಗಾರಿಗೆ ಅಗತ್ಯ ಅನುದಾನ ಬಿಡುಗಡೆ ಪ್ರಕ್ರಿಯೆ ನಡೆಯುತ್ತಿದೆ. ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆಂಧ್ರಪ್ರದೇಶ ರಾಜ್ಯಪಾಲರಿಗೆ ಮನವಿ

ಕರಾವಳಿ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿರುವ ಕರಾವಳಿ ಹೈಕೋರ್ಟ್ ಪೀಠ ಸ್ಥಾಪನೆಗೆ...

ಯಾದಗಿರಿ | ಬಂಡೋಳ್ಳಿಯಲ್ಲಿ ವಾಲ್ಮೀಕಿ ಶಾಖಾ ಮಠಕ್ಕೆ ಅಡಿಗಲ್ಲು; ಶಿಕ್ಷಣಕ್ಕೆ ₹25 ಕೋಟಿ ಅನುದಾನ

ಸುರಪುರ ಸಂವಿಧಾನ ಒದಗಿಸಿರುವ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಶಿಕ್ಷಣ ಹಾಗೂ ಸರ್ಕಾರದ ವಿವಿಧ...

ರಾಯಚೂರು | ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವಕ್ಕೆ ಎನ್‌.ಎಸ್.ಬೋಸರಾಜು ಶುಭ ಹಾರೈಕೆ

ನಾಳೆ ನ. 29ರಂದು ನಡೆಯಲಿರುವ ರಾಯಚೂರು ರಿಪೋರ್ಟಸ ಗಿಲ್ಡ್‌ನ 25ನೇ ವರ್ಷದ...