ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಹೂಡೆ ಗ್ರಾಮ ಸಮಿತಿ ವತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಗ್ರಾಮ ಸಮಿತಿ ಕಚೇರಿ ಮುಂಭಾಗದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಗ್ರಾಮ ಸಮಿತಿಯ ಅಧ್ಯಕ್ಷ ಅಲ್ತಾಫ್ ಅವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಎಸ್ ಡಿಪಿಐ ಉಡುಪಿ ಜಿಲ್ಲಾ ಸಮಿತಿ ಸದಸ್ಯ ಮೊಹಮ್ಮದ್ ಶಫೀಕ್ ಅವರು ಸಂಸ್ಥಾಪನಾ ದಿನದ ಸಂದೇಶ ನೀಡಿ ಪಕ್ಷದ ಬೆಳವಣಿಗೆ ಹಾಗೂ ಸಾಮಾಜಿಕ ಸೇವಾ ಕಾರ್ಯಗಳ ಕುರಿತು ಮಾತನಾಡಿದರು.
ಪಡುತೋನ್ಸೆ ಗ್ರಾಮ ಪಂಚಾಯತ್ ಸದಸ್ಯ ಹೈದರ್ ಅವರು ಅತಿಥಿಯಾಗಿ ಭಾಗವಹಿಸಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಮಲ್ಪೆ ಮತ್ತು ವಡಬಂಡೇಶ್ವರ ಬ್ರಾಂಚ್ ಅಧ್ಯಕ್ಷರಾದ ಅನ್ಸಾರ್ ಹಾಗೂ ಮುನೀರ್, ಉಡುಪಿ ಕ್ಷೇತ್ರ ಸಮಿತಿ ಸದಸ್ಯ ಮುಝಕ್ಕಿರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.






