ಉಡುಪಿ | ಅರ್ಹ ಮತದಾರರ ಹೆಸರು ಕೈಬಿಡಲು ಅವಕಾಶ ನೀಡಬಾರದು: ಎಸ್‌ಡಿಪಿಐ ಆಗ್ರಹ

Date:

ಉಡುಪಿ ಜಿಲ್ಲೆಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಮೊದಲ ಹಂತ ಪೂರ್ಣಗೊಂಡಿದ್ದು, 2025ರ ಮತದಾರರ ಪಟ್ಟಿಯಲ್ಲಿದ್ದ 10,63,876 ಮತದಾರರ ಪೈಕಿ 63,331 ಮಂದಿಯ ಹೆಸರುಗಳು ವಿವಿಧ ಕಾರಣಗಳಿಂದ ASDDO ಪಟ್ಟಿಗೆ ಸೇರಿರುವುದು ಗಂಭೀರ ವಿಚಾರವಾಗಿದೆ. ಈ ಕುರಿತು ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತವು ಅತ್ಯಂತ ಪಾರದರ್ಶಕವಾಗಿ ಮತ್ತು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಆಗ್ರಹಿಸಿದ್ದಾರೆ.

- Advertisement -

ASDDO ಪಟ್ಟಿಗೆ ಸೇರಿದವರಲ್ಲಿ ಮೃತರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಗೈರುಹಾಜರಾದವರು ಹಾಗೂ ಪುನರಾವರ್ತಿತ ಮತದಾರರು ಸೇರಿದ್ದಾರೆ ಎಂದು ಅಧಿಕಾರಿಗಳ ಅಂಕಿಅಂಶಗಳು ತಿಳಿಸುತ್ತವೆ. ಆದರೆ, ಈ ಪಟ್ಟಿಯಲ್ಲಿ ಅರ್ಹ ಹಾಗೂ ಜೀವಂತ ಮತದಾರರ ಹೆಸರುಗಳು ತಪ್ಪಾಗಿ ಸೇರ್ಪಡೆಯಾಗಿರುವ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕಲು ಸಾಧ್ಯವಿಲ್ಲ. ಇಂತಹ ಯಾವುದೇ ತಪ್ಪಿನಿಂದ ಒಬ್ಬ ಅರ್ಹ ನಾಗರಿಕನ ಮತದಾನದ ಹಕ್ಕು ಕಳೆದುಹೋಗುವುದೂ ಪ್ರಜಾಪ್ರಭುತ್ವದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಆದ್ದರಿಂದ ASDDO ಪಟ್ಟಿಗೆ ಸೇರ್ಪಡೆಯಾಗಿರುವ ಪ್ರತಿಯೊಬ್ಬ ಮತದಾರರ ಹೆಸರನ್ನು ವೈಯಕ್ತಿಕವಾಗಿ ಪರಿಶೀಲಿಸಿ, ಅರ್ಹರೆಂದು ದೃಢಪಟ್ಟವರ ಹೆಸರನ್ನು ಯಾವುದೇ ವಿಳಂಬವಿಲ್ಲದೆ ಮತದಾರರ ಪಟ್ಟಿಗೆ ಮರುಸೇರ್ಪಡೆಗೊಳಿಸಬೇಕು. ದಾಖಲೆಗಳ ಕೊರತೆ, BLO ಮಟ್ಟದ ಲೋಪ ಅಥವಾ ತಾಂತ್ರಿಕ ಕಾರಣಗಳಿಂದ ಅರ್ಹ ಮತದಾರರ ಹೆಸರು ಕೈಬಿಡದಂತೆ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.

ಅದೇ ರೀತಿ, ಕರಡು ಮತದಾರರ ಪಟ್ಟಿ ಪ್ರಕಟವಾದ ಬಳಿಕ ಮತದಾರರಿಗೆ ತಮ್ಮ ಹೆಸರು ಪರಿಶೀಲಿಸಲು ಸಾಕಷ್ಟು ಸಮಯ ಮತ್ತು ಅಗತ್ಯ ಮಾರ್ಗದರ್ಶನ ಒದಗಿಸಬೇಕು. ಹೆಸರು ಕೈಬಿಡಲ್ಪಟ್ಟಿರುವ ಅರ್ಹ ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಸುಲಭವಾದ ವ್ಯವಸ್ಥೆ ಕಲ್ಪಿಸಬೇಕು.

ಅರ್ಹ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಅಥವಾ ನಿರ್ಲಕ್ಷ್ಯದಿಂದ ಕೈಬಿಡಲಾಗಿರುವುದು ಪರಿಶೀಲನೆಯಲ್ಲಿ ಕಂಡುಬಂದರೆ, ಅಂತಹ ಅಧಿಕಾರಿಗಳು ಅಥವಾ ಸಿಬ್ಬಂದಿಯ ವಿರುದ್ಧ ಸೂಕ್ತ ತನಿಖೆ ನಡೆಸಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಯಾವುದೇ ರಾಜಕೀಯ, ಸಾಮಾಜಿಕ ಅಥವಾ ಇತರ ಪೂರ್ವಾಗ್ರಹಗಳಿಗೆ ಒಳಗಾಗದೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಯಬೇಕು.

ಮತದಾನದ ಹಕ್ಕು ಪ್ರತಿಯೊಬ್ಬ ಅರ್ಹ ಭಾರತೀಯ ನಾಗರಿಕನ ಸಂವಿಧಾನಾತ್ಮಕ ಹಕ್ಕಾಗಿದ್ದು, ಮತದಾರರ ಪಟ್ಟಿಯ ಪರಿಷ್ಕರಣೆಯ ಹೆಸರಿನಲ್ಲಿ ಒಬ್ಬ ಅರ್ಹ ನಾಗರಿಕನ ಹಕ್ಕಿಗೂ ಧಕ್ಕೆಯಾಗಬಾರದು. ಚುನಾವಣಾ ಆಯೋಗ ಮತ್ತು ಜಿಲ್ಲಾಡಳಿತವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ASDDO ಪಟ್ಟಿಯಲ್ಲಿರುವ ಅರ್ಹ ಮತದಾರರ ಹೆಸರುಗಳನ್ನು ಮರುಸೇರ್ಪಡೆಗೊಳಿಸಲು ತುರ್ತು ಕ್ರಮಗಳನ್ನು ಕೈಗೊಳ್ಳಬೇಕು ಎಂದು ಎಸ್‌ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ ಆಸಿಫ್ ಕೋಟೇಶ್ವರ ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...