ಉಡುಪಿ | ಮನುವಾದಿಗಳ ಕಪಿಮುಷ್ಠಿಯಲ್ಲಿ ದಲಿತರು, ಅಲ್ಪಸಂಖ್ಯಾತರು : ಶ್ಯಾಮ್‌ರಾಜ್ ಬಿರ್ತಿ

Date:

ಬ್ರಿಟಿಷರಿಂದ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದರೂ ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮನುವಾದಿಗಳ ಕಪಿಮುಷ್ಠಿಯಲ್ಲಿ ಶೋಷಣೆಗೆ ಒಳಗಾಗುತ್ತಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಶ್ಯಾಮ್‌ರಾಜ್ ಬಿರ್ತಿ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಘಟಕದ ವತಿಯಿಂದ ಹೂಡೆಯ ಆದರ್ಶ್ ಇಸ್ಲಾಮಿಕ್ ಸೆಂಟರ್ ಬಳಿ ಆಯೋಜಿಸಿದ್ದ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನ ರಚಿಸದೇ ಹೋಗಿದ್ದರೆ ನಮ್ಮ ಬದುಕು ನಿರಂತರ ಶೋಷಣೆಯಲ್ಲೇ ಮುಳುಗಿರುತ್ತಿತ್ತು. ಇಂದು ನಾವು ತಲೆಯೆತ್ತಿ ಸ್ವಾಭಿಮಾನದಿಂದ ಬದುಕಲು ಅಂಬೇಡ್ಕರ್ ನೀಡಿದ ಸಂವಿಧಾನವೇ ಕಾರಣವಾಗಿದೆ ಎಂದರು.

ಕಳೆದ 20 ವರ್ಷಗಳಿಂದ ದೇಶಕ್ಕಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟ ಮಹಾತ್ಮ ಗಾಂಧೀಜಿಯವರನ್ನು ದೇಶದ್ರೋಹಿಯಂತೆ ಬಿಂಬಿಸುವ ಹಾಗೂ ಅವರ ಹಂತಕ ನಾಥೂರಾಮ್ ಗೋಡ್ಸೆಯನ್ನು ಹೀರೋ ಮಾಡುವ ವ್ಯವಸ್ಥಿತ ಪ್ರಯತ್ನಗಳು ನಡೆಯುತ್ತಿವೆ ಎಂದು ಆರೋಪಿಸಿದರು.

ದೇಶದಲ್ಲಿ ನಾಥೂರಾಮ್ ಗೋಡ್ಸೆಯ ಸಂತಾನಗಳು ಆಡಳಿತ ನಡೆಸುತ್ತಿದ್ದು, ದಲಿತರು ಹಾಗೂ ಅಲ್ಪಸಂಖ್ಯಾತರ ಮೇಲೆ ನಿರಂತರ ದೌರ್ಜನ್ಯಗಳು ನಡೆಯುತ್ತಿವೆ. ಜಾತ್ಯತೀತ ಮೌಲ್ಯಗಳನ್ನು ಬದಿಗೊತ್ತಿ ಪೌರತ್ವವನ್ನು ಕಸಿದುಕೊಳ್ಳುವ ಹುನ್ನಾರಗಳು ನಡೆಯುತ್ತಿವೆ. ಇಂತಹ ಬೆಳವಣಿಗೆಗಳನ್ನು ಎದುರಿಸಲು ದಲಿತರು ಮತ್ತು ಅಲ್ಪಸಂಖ್ಯಾತರು ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾಧ್ಯಕ್ಷ ಇದ್ರೀಸ್ ಹೂಡೆ ವಹಿಸಿದ್ದರು.

ಈ ಸಂದರ್ಭದಲ್ಲಿ ಸಯ್ಯದ್ ಫರೀದ್, ಶಹಜಾನ್, ಸಮಾಜಸೇವಕ ಸಾಧು, ಸಲಾಹುದ್ದಿನ್ ನಾಯರ್‌ಕೆರೆ, ರಿಯಾಝ್ ಕುಕ್ಕಿಕಟ್ಟೆ, ನಕ್ವಾ ಅಬ್ದುಲ್ ರಝಾಕ್, ಸಾಕೀಬ್ ಹೂಡೆ, ನಿಸಾರ್ ಉಡುಪಿ, ನಿಹಾಲ್ ಕಿದಿಯೂರು, ಜಮೀಲಾ ಸದೀದಾ, ಮಮ್ತಾಝ್ ಬೇಗಮ್ ಹೂಡೆ, ಝೈನುಲ್ಲಾ ಹೂಡೆ, ಅಫ್ವಾನ್ ಬಿ. ಹೂಡೆ ಸೇರಿದಂತೆ ಹಲವು ಮುಖಂಡರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಝ್ ಉದ್ಯಾವರ ಕಾರ್ಯಕ್ರಮ ನಿರೂಪಿಸಿ, ಧನ್ಯವಾದ ಸಲ್ಲಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಶ್ರೀ ದುರ್ಗಾಂಬ ಬಸ್ ಕಳವು ಪ್ರಕರಣ: ಬಸ್ ಪತ್ತೆ

ಹನುಮಾನ್ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿ ನಿಲ್ಲಿಸಿದ್ದ ಸುಮಾರು ₹40 ಲಕ್ಷ ಮೌಲ್ಯದ...

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...