ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನ; ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Date:

ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಇಂದ್ರಾಳಿಯ ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಮಣಿಪಾಲ ಹಾಗೂ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲ (ಕೆಎಂಸಿ ಮಣಿಪಾಲದ ಬೋಧನಾ ಆಸ್ಪತ್ರೆ, MAHE ಘಟಕ) ಸಹಯೋಗದಲ್ಲಿ ಉಚಿತ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

- Advertisement -
WhatsApp Image 2026 09 01 at 10.06.30 PM

ಶಿಬಿರವನ್ನು ಖ್ಯಾತ ಉದ್ಯಮಿ ಅಮ್ಮುಂಜೆ ವಸಂತ ನಾಯಕ್ ಉದ್ಘಾಟಿಸಿ ಮಾತನಾಡಿ, 1964ರಲ್ಲಿ ಇಂಡಿಯನ್ ಆಯಿಲ್ ಸಂಸ್ಥೆ ಸ್ಥಾಪನೆಯಾಯಿತು. ಭಾರತಕ್ಕೆ ಸ್ವಂತ ತೈಲ ಕಂಪನಿಗಳ ಅಗತ್ಯವಿದೆ ಎಂಬ ದೂರದೃಷ್ಟಿಯಿಂದ ಅಂದಿನ ನಾಯಕ ಎಸ್. ನಿಜಲಿಂಗಪ್ಪ ಅವರು ಪ್ರಧಾನಮಂತ್ರಿಯವರೊಂದಿಗೆ ಸಮಾಲೋಚನೆ ನಡೆಸಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸ್ಥಾಪನೆಗೆ ಪ್ರಮುಖ ಕಾರಣಕರ್ತರಾಗಿದ್ದರು ಎಂದು ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...
WhatsApp Image 2026 09 01 at 10.06.41 PM

ದೇಶದ ಅಭಿವೃದ್ಧಿಯಲ್ಲಿ ಇಂಧನ ಕ್ಷೇತ್ರದ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಇಂತಹ ಪ್ರಮುಖ ಸಂಸ್ಥೆಯ ಸಂಸ್ಥಾಪನಾ ದಿನದ ಅಂಗವಾಗಿ ಸಾರ್ವಜನಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ವಸಂತ ನಾಯಕ್ ಅಭಿಪ್ರಾಯಪಟ್ಟರು.

ಶ್ರೀಕೃಷ್ಣ ಪೆಟ್ರೋಲಿಯಂನ ಮಾಲೀಕರಾದ ಲಕ್ಷ್ಮೀಕಾಂತ್ ಬೆಸ್ಕೂರು ಪ್ರಾಸ್ತಾವಿಕವಾಗಿ ಮಾತನಾಡಿ, 1959ರಲ್ಲಿ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಪೂರ್ಣ ಪ್ರಮಾಣದಲ್ಲಿ ಉದ್ಘಾಟನೆಗೊಂಡಿತು. ಕರ್ನಾಟಕದ ಅಂದಿನ ಮುಖ್ಯಮಂತ್ರಿಯಾಗಿದ್ದ ಎಸ್. ನಿಜಲಿಂಗಪ್ಪ ಅವರು 1959ರಿಂದ 1962ರವರೆಗೆ ಈ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು ಎಂದು ತಿಳಿಸಿದರು.

ಪ್ರಸ್ತುತ ದೇಶಾದ್ಯಂತ ಸುಮಾರು 42 ಸಾವಿರ ಪೆಟ್ರೋಲ್ ಬಂಕ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಗ್ರಾಹಕರಿಗೆ ಅಗತ್ಯ ತೈಲ ಉತ್ಪನ್ನಗಳನ್ನು ಪೂರೈಸುತ್ತಿವೆ. ಪ್ರತಿವರ್ಷ ಸೆಪ್ಟೆಂಬರ್ 1ರಂದು ಇಂಡಿಯನ್ ಆಯಿಲ್ ಸಂಸ್ಥಾಪನಾ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಇದರ ಅಂಗವಾಗಿ ಇಂದ್ರಾಳಿಯ ಶ್ರೀಕೃಷ್ಣ ಪೆಟ್ರೋಲಿಯಂನಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಉಚಿತ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಹೇಳಿದರು.

WhatsApp Image 2026 09 01 at 10.07.05 PM

ಈ ಸಂದರ್ಭದಲ್ಲಿ ಇಂಡಿಯನ್ ಆಯಿಲ್ ಉಡುಪಿ ಸೇಲ್ಸ್ ಆಫೀಸರ್ ಅಭಿಷೇಕ್ ಸಿಂಗ್, ಡಾ. ಶರ್ಮಿನ್ ಕುಮಾರಿ,‌ ಡಾ ಮಾಧವ್‌, ಡಾ ಕುಮಾರಿ ರಶ್ಮಿಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಿಬಿರದಲ್ಲಿ ಸಾರ್ವಜನಿಕರಿಗೆ ವಿವಿಧ ಆರೋಗ್ಯ ತಪಾಸಣೆಗಳನ್ನು ಉಚಿತವಾಗಿ ನಡೆಸಲಾಯಿತು. ಅಧಿಕ ರಕ್ತದೊತ್ತಡ, ಮಧುಮೇಹ, ಕ್ಷಯರೋಗ, ಮಲೇರಿಯಾ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳ ಕುರಿತು ತಪಾಸಣೆ ಹಾಗೂ ಅಗತ್ಯ ಸಲಹೆಗಳನ್ನು ನೀಡಲಾಯಿತು.

ಕೆಎಂಸಿ ಮಣಿಪಾಲದ ನೇತ್ರ ವಿಜ್ಞಾನ ವಿಭಾಗದ ‘ದೃಷ್ಟಿ ಚಕ್ರ’ ವಾಹನದ ಮೂಲಕ ವಿಶೇಷ ನೇತ್ರ ತಪಾಸಣೆಯನ್ನೂ ನಡೆಸಲಾಯಿತು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶಿಬಿರದ ಪ್ರಯೋಜನ ಪಡೆದುಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...