ಉಡುಪಿಯಲ್ಲಿ ‘ಸಮಾಧಾನ ಮಹೋತ್ಸವ’ಕ್ಕೆ ಅವಕಾಶ ನೀಡಿದರೆ ತೀವ್ರ ಹೋರಾಟ: ಹಿಂದೂ ಜಾಗರಣ ವೇದಿಕೆ ಎಚ್ಚರಿಕೆ

Date:

ಇದೇ ಮಾರ್ಚ್ 20, 21 ಮತ್ತು 22ರಂದು ಉಡುಪಿ ನಗರದ ಮಿಷನ್ ಕಾಂಪೌಂಡ್ ಪರಿಸರದಲ್ಲಿ ತಮಿಳುನಾಡಿನ ವಿವಾದಾತ್ಮಕ ಮಿಷನರಿ ಮೋಹನ್ ಸಿ. ಲಾಝರಸ್ ನೇತೃತ್ವದಲ್ಲಿ ಆಯೋಜಿಸಲಾಗಿರುವ ‘ಸಮಾಧಾನ ಮಹೋತ್ಸವ’ ಕಾರ್ಯಕ್ರಮಕ್ಕೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣ ವೇದಿಕೆ ಆಗ್ರಹಿಸಿದೆ. ಈ ಕಾರ್ಯಕ್ರಮಕ್ಕೆ ಜಿಲ್ಲಾಡಳಿತ ಅನುಮತಿ ನೀಡಿದರೆ ಜಿಲ್ಲೆಯಾದ್ಯಂತ ತೀವ್ರ ಸ್ವರೂಪದ ಪ್ರತಿಭಟನೆ ನಡೆಸುವುದಾಗಿ ಸಂಘಟನೆಯು ಎಚ್ಚರಿಕೆ ನೀಡಿದೆ.

- Advertisement -

ಉಡುಪಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಶ್ರೀಕಾಂತ್ ಶೆಟ್ಟಿ ಕಾರ್ಕಳ, “ಸಮಾಧಾನದ ಹೆಸರಿನಲ್ಲಿ ನಡೆಯುತ್ತಿರುವ ಈ ಕಾರ್ಯಕ್ರಮವು ಮತಾಂತರಕ್ಕೆ ಪ್ರಚೋದನೆ ನೀಡುವ ಷಡ್ಯಂತ್ರವಾಗಿದ್ದು, ಜಿಲ್ಲೆಯಲ್ಲಿ ಧಾರ್ಮಿಕ ಅಶಾಂತಿ ಉಂಟುಮಾಡುವ ಸಾಧ್ಯತೆ ಇದೆ. ಆದ್ದರಿಂದ ಜಿಲ್ಲಾಡಳಿತವು ಕೂಡಲೇ ಈ ಕಾರ್ಯಕ್ರಮಕ್ಕೆ ತಡೆ ನೀಡಬೇಕು” ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

GMPL ಘಟಕದಿಂದ ಪರಿಸರಕ್ಕೆ ಕುತ್ತು: ಜನವಸತಿ ಪ್ರದೇಶದಲ್ಲಿ ವಿಷ...

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲ್ಲೂಕಿನ ಬಜ್ಪೆ ಶಾಂತಿಗುಡ್ಡೆ ಪರಿಸರದ ಜನರು ಕೆಲವು ದಿನಗಳಿಂದ ಆತಂಕದಿಂದಲೇ ಬದುಕನ್ನು ಸಾಗಿಸುವಂತಾಗಿದೆ. ತಮ್ಮ ಪರಿಸರ ವಿಶೇಷ ಆರ್ಥಿಕ ವಲಯವಾಗಿದ್ದರೂ, ಪರಿಸರದ ಮನೆಗಳ ಅಂಗಳ, ಬಾವಿಗಳ ನೀರಿಗೂ...

ಮೋಹನ್ ಸಿ. ಲಾಝರಸ್ ಅವರು ಈ ಹಿಂದೆ ಹಿಂದೂ ದೇವಾಲಯಗಳನ್ನು “ಸೈತಾನನ ನೆಲೆಗಳು” ಎಂದು ಹೇಳುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿದ ಅವರು, ಈ ಸಂಬಂಧ ತಮಿಳುನಾಡಿನ ಹಲವು ಪೊಲೀಸ್ ಠಾಣೆಗಳಲ್ಲಿ ಐಪಿಸಿ ಸೆಕ್ಷನ್ 153A ಮತ್ತು 295A ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದರು.

ಇದಲ್ಲದೆ, ಲಾಝರಸ್ ಅವರ ‘ಜೀಸಸ್ ರಿಡೀಮ್ಸ್’ ಸಂಸ್ಥೆಯು ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆ (FCRA) ಉಲ್ಲಂಘಿಸಿ ವಿದೇಶಿ ಹಣವನ್ನು ಕೋಮು ಸೌಹಾರ್ದತೆಗೆ ಧಕ್ಕೆ ತರುವ ಚಟುವಟಿಕೆಗಳಿಗೆ ಬಳಸಿದ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು 2024ರ ಮಾರ್ಚ್‌ನಲ್ಲಿ ಸಂಸ್ಥೆಯ ಪರವಾನಗಿಯನ್ನು ಅಮಾನತುಗೊಳಿಸಿದೆ ಎಂಬುದನ್ನೂ ಅವರು ಉಲ್ಲೇಖಿಸಿದರು.

1010036681 2
ಜಾಹಿರಾತು

ಸಮಾಧಾನದ ಹೆಸರಿನಲ್ಲಿ ಜನರನ್ನು ಸೇರಿಸಿ ರೋಗವಾಸಿ ಮಾಡುವುದಾಗಿ ಹೇಳುವುದು ಅಥವಾ ವಿವಿಧ ಆಮಿಷಗಳನ್ನು ಒಡ್ಡಿ ಮತಾಂತರಕ್ಕೆ ಪ್ರೇರೇಪಿಸುವ ಚಟುವಟಿಕೆಗಳಲ್ಲಿ ಈ ಸಂಘಟನೆ ತೊಡಗಿದೆ ಎಂಬ ಮಾಹಿತಿಯೂ ಲಭ್ಯವಾಗಿದೆ ಎಂದು ಹೇಳಿದರು.

ಈ ಬಗ್ಗೆ ಈಗಾಗಲೇ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಿ ಕಾರ್ಯಕ್ರಮವನ್ನು ತಕ್ಷಣವೇ ರದ್ದುಗೊಳಿಸುವಂತೆ ಆಗ್ರಹಿಸಲಾಗಿದೆ. ಒಂದು ವೇಳೆ ಜಿಲ್ಲಾಡಳಿತವು ಈ ಕಾರ್ಯಕ್ರಮಕ್ಕೆ ಅನುಮತಿ ನೀಡಿದರೆ ಅಥವಾ ಮೋಹನ್ ಸಿ. ಲಾಝರಸ್ ಅವರನ್ನು ಜಿಲ್ಲೆಗೆ ಪ್ರವೇಶಿಸಲು ಅವಕಾಶ ನೀಡಿದರೆ ಜಿಲ್ಲೆಯಾದ್ಯಂತ ತೀವ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

ಈ ಮೂಲಕ ಉಂಟಾಗುವ ಯಾವುದೇ ಅಹಿತಕರ ಘಟನೆಗಳಿಗೆ ಜಿಲ್ಲಾಡಳಿತ ಮತ್ತು ಕಾರ್ಯಕ್ರಮದ ಆಯೋಜಕರೇ ಹೊಣೆಗಾರರಾಗಿರುತ್ತಾರೆ ಎಂದು ಅವರು ಹೇಳಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ವಿದ್ಯಾರ್ಥಿಗಳು ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಸಾಧನೆ ಮಾಡಬೇಕು: ಜಾನ್ ಆರ್. ಡಿಸಿಲ್ವ

ಇಂದು ವಿದ್ಯಾರ್ಥಿಗಳಿಗೆ ಸಾಧನೆ ಮಾಡಲು ವಿಪುಲ ಅವಕಾಶಗಳಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳುವ ಚಾಕಚಕ್ಯತೆಯನ್ನು...

ರಾಯಚೂರು | ಹಿರಿಯ ನ್ಯಾಯವಾದಿ ಸೈಯದ್ ಜಾವೀದ್ ಉಲ್ ಹಕ್ ನಿಧನ

ನಗರದ ಹಿರಿಯ ನ್ಯಾಯವಾದಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಸೈಯದ್‌...

ಉಡುಪಿ | ಮಣಿಪಾಲದಲ್ಲಿ ಯುವಕರ ಗುಂಪು ಘರ್ಷಣೆ ; 11 ಮಂದಿ ವಿರುದ್ಧ ಪ್ರಕರಣ ದಾಖಲು

ಈಶ್ವರನಗರದ ಎಪಿಕೋಡ್ ಸೆಂಟರ್ ಎದುರು ರಾಷ್ಟ್ರೀಯ ಹೆದ್ದಾರಿ 169(A)ರ ಪಕ್ಕದಲ್ಲಿ ಗುಂಪು...

ಉಡುಪಿ | ಮಣಿಪಾಲದಲ್ಲಿ ಪೊಲೀಸರ ಮೇಲೆಯೇ ಪಟಾಕಿ ಎಸೆದು ಬೆದರಿಕೆ: ಪ್ರಕರಣ ದಾಖಲು

ತಡರಾತ್ರಿ ಸಾರ್ವಜನಿಕ ರಸ್ತೆಯಲ್ಲಿ ಪಟಾಕಿ ಸಿಡಿಸಿ, ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ...