ಉಡುಪಿ | ಕೋಮು ಗಲಭೆ ಸೃಷ್ಟಿಸಲು ಹುನ್ನಾರ, ಶ್ರೀಕಾಂತ ಶೆಟ್ಟಿಯನ್ನು ಜೈಲಿಗಟ್ಟಲು ಆಗ್ರಹ

Date:

ಈ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ತಮ್ಮ ಧರ್ಮವನ್ನು ಆಚರಿಸುವುದು ಹಾಗೂ ಪ್ರಚಾರ ಮಾಡುವ ಹಕ್ಕು ಇದೆ. ಧಾರ್ಮಿಕ ಆಚರಣೆಗಳು ಮತ್ತು ಕಾರ್ಯಕ್ರಮಗಳಿಗೆ ತಡೆಯೊಡ್ಡುವುದು ಕಾನೂನುಬಾಹಿರವಾಗಿದ್ದು, ಸಂವಿಧಾನ ವಿರೋಧಿಯಾಗಿದೆ ಎಂದು ಸುಂದರ ಮಾಸ್ತರ್ ತಿಳಿಸಿದ್ದಾರೆ.

- Advertisement -

ಈದಿನ.ಕಾಮ್ ಜೊತೆ ಮಾತನಾಡಿದ ಅವರು, ಕಳೆದ ಬಾರಿ ಕಾರ್ಕಳದಲ್ಲಿ ಪ್ರಾರ್ಥನಾ ಮಂದಿರಕ್ಕೆ ಅತಿಕ್ರಮವಾಗಿ ನುಗ್ಗಿ ದಾಂಧಲೆ ನಡೆಸಿದ ಶ್ರೀಕಾಂತ ಶೆಟ್ಟಿ, ಇದೀಗ ಮತ್ತೊಂದು ಗೂಂಡಾ ಕೃತ್ಯಕ್ಕೆ ತಯಾರಿ ನಡೆಸುತ್ತಿದ್ದಾನೆ ಎಂದು ಆರೋಪಿಸಿದ್ದಾರೆ. ಇಂತಹವರನ್ನು ಗೂಂಡಾ ಕಾಯ್ದೆಯಡಿ ಗಡಿಪಾರು ಮಾಡಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳದಿದ್ದರೆ ಉಡುಪಿ ಜಿಲ್ಲೆಯಲ್ಲೂ ಕೋಮು ಸಂಘರ್ಷ ಉಂಟಾಗುವ ಸಾಧ್ಯತೆ ಇದೆ ಎಂದು ಎಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಮೌಢ್ಯ ವಿಚಾರವನ್ನು ಉಲ್ಲೇಖಿಸಿದ ಅವರು, “ಕಲ್ಲಿನ ಮೂರ್ತಿಗೆ ಲೀಟರ್‌ಗಟ್ಟಲೆ ಹಾಲು ಸುರಿಸುವುದೋ, ಹೋಮ-ಹವನದ ಹೆಸರಿನಲ್ಲಿ ತುಪ್ಪ, ತೆಂಗಿನಕಾಯಿ, ಬಾಳೆಹಣ್ಣುಗಳನ್ನು ಬೆಂಕಿಗೆ ಹಾಕುವುದೋ, ಅಥವಾ ತಾಯಿತ ಕಟ್ಟಿಕೊಳ್ಳುವುದೋ—ಇವುಗಳಲ್ಲಿ ಯಾವುದು ಮೌಢ್ಯ?” ಎಂದು ಪ್ರಶ್ನಿಸಿದರು. ಪೂಜೆ, ಹೋಮ, ಹವನಗಳಿಂದ ರೋಗಗಳು ಗುಣವಾಗುತ್ತಿದೆಯಾದರೆ ಆಸ್ಪತ್ರೆಗಳ ಅಗತ್ಯವೇನು ಎಂದು ಪ್ರಶ್ನಿಸಿದ್ದಾರೆ.

Untitled design 20260315 161436 0000
ಜಾಹಿರಾತು

ಸೌಹಾರ್ದತೆಗೆ ಹೆಸರಾಗಿರುವ ಉಡುಪಿ ಜಿಲ್ಲೆಯಲ್ಲಿ ಶಾಂತಿ ಭಂಗಗೊಳಿಸುವ ಪ್ರಯತ್ನಗಳನ್ನು ತಡೆಯಬೇಕು. ಪ್ರತಿಯೊಬ್ಬರೂ ತಮ್ಮ ತಮ್ಮ ಧಾರ್ಮಿಕ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದರು. ಕೋಮು ದ್ವೇಷ ಹರಡುವವರನ್ನು ತಕ್ಷಣ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಉಡುಪಿ ನಗರದಲ್ಲಿ ತಲವಾರು ಬೀಸುತ್ತಾ, ತ್ರಿಶೂಲ ಪ್ರದರ್ಶಿಸುತ್ತಾ ಮೆರವಣಿಗೆ ನಡೆಸುವಂತಹ ಘಟನೆಗಳನ್ನು ಈಗಲೇ ನಿಯಂತ್ರಿಸದಿದ್ದರೆ ಭವಿಷ್ಯದಲ್ಲಿ ಗಂಭೀರ ಪರಿಣಾಮ ಎದುರಾಗಬಹುದು ಎಂದು ಎಚ್ಚರಿಸಿದರು.

ಈ ಹಿನ್ನೆಲೆಯಲ್ಲಿ ಶ್ರೀಕಾಂತ ಶೆಟ್ಟಿಯನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಬೇಕು. ಉಡುಪಿ ಜಿಲ್ಲೆಯಲ್ಲಿ ಎಲ್ಲಾ ಧರ್ಮದ ಜನರು ತಮ್ಮ ತಮ್ಮ ಆಚರಣೆಗಳನ್ನು ಶಾಂತಿಯುತವಾಗಿ ನಡೆಸಲು ಅವಕಾಶ ಕಲ್ಪಿಸಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ಹಾಗೂ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...