ಉಡುಪಿ | ಬಾಕಿ ಸರ್ವೀಸ್ ರಸ್ತೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಕೋಟ ಶ್ರೀನಿವಾಸ ಪೂಜಾರಿ

Date:

ಉಡುಪಿ ಜಿಲ್ಲೆಯಲ್ಲಿ ಸಾರ್ವಜನಿಕರ ಸುರಕ್ಷತೆ, ಸುಗಮ ಸಂಚಾರ ಹಾಗೂ ರಸ್ತೆ ಅಪಘಾತಗಳನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸರ್ವೀಸ್ ರಸ್ತೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದರು.

- Advertisement -

ಮಣಿಪಾಲದ ರಜತಾದ್ರಿಯ ಸಂಸದರ ಕಚೇರಿಯಲ್ಲಿ ಮಂಗಳವಾರ ನಡೆದ ರಾಷ್ಟ್ರೀಯ ಹೆದ್ದಾರಿ 66ರ ಸರ್ವೀಸ್ ರಸ್ತೆ, ಮೇಲ್ಸೇತುವೆ, ಅಂಡರ್‌ಪಾಸ್ ಸೇರಿದಂತೆ ವಿವಿಧ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಿಲ್ಲೆಯಲ್ಲಿ ಕೋಟೇಶ್ವರ ಜಂಕ್ಷನ್‌ನಿಂದ ಬೀಜಾಡಿ ಕ್ರಾಸ್‌ವರೆಗೆ ಸುಮಾರು 830 ಮೀಟರ್, ಅನ್ನಪೂರ್ಣ ಹೋಟೆಲ್‌ನಿಂದ ಬೀಜಾಡಿ–ಕುಂಭಾಶಿ–ತೆಕ್ಕಟ್ಟೆ ಭಾಗದಲ್ಲಿ ಎರಡೂ ಬದಿಯಲ್ಲಿ ಸುಮಾರು 3,500 ಮೀಟರ್, ತೆಕ್ಕಟ್ಟೆಯಲ್ಲಿ 1,020 ಮೀಟರ್, ಬ್ರಹ್ಮಾವರದಲ್ಲಿ 400 ಮೀಟರ್, ಸಂತೆಕಟ್ಟೆಯಲ್ಲಿ 1,000 ಮೀಟರ್ ಹಾಗೂ ಉದ್ಯಾವರ ಜಂಕ್ಷನ್‌ನಲ್ಲಿ 325 ಮೀಟರ್ ಸೇರಿದಂತೆ ವಿವಿಧ ಕಡೆಗಳಲ್ಲಿ ಸರ್ವೀಸ್ ರಸ್ತೆ ಕಾಮಗಾರಿಗಳು ಬಾಕಿ ಉಳಿದಿವೆ. ಇವುಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಿ ಸಾರ್ವಜನಿಕ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ಸೂಚಿಸಿದರು.

ರಾಷ್ಟ್ರೀಯ ಹೆದ್ದಾರಿಯ ಕೆಲವು ಭಾಗಗಳಲ್ಲಿ ಸರ್ವೀಸ್ ರಸ್ತೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಹಲವು ಕಡೆ ಚರಂಡಿ ವ್ಯವಸ್ಥೆಯೂ ಸಮರ್ಪಕವಾಗಿಲ್ಲ. ಸರ್ವೀಸ್ ರಸ್ತೆ ನಿರ್ಮಾಣದ ವೇಳೆ ಕಾಮಗಾರಿಯ ಗುಣಮಟ್ಟ ಹಾಗೂ ಸಂಚಾರ ಸುರಕ್ಷತಾ ಕ್ರಮಗಳಿಗೆ ಆದ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಉಡುಪಿಯ ನಿಟ್ಟೂರು ಹಾಗೂ ಬ್ರಹ್ಮಾವರದ ಮಹೇಶ್ ಆಸ್ಪತ್ರೆ ಬಳಿ ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರ ಅಭಿಪ್ರಾಯ ಪಡೆದು ಫುಟ್‌ಓವರ್‌ಬ್ರಿಡ್ಜ್ ನಿರ್ಮಾಣಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಂತೆಕಟ್ಟೆ ಪೆಟ್ರೋಲ್ ಬಂಕ್‌ನಿಂದ ಅಂಬಾಗಿಲು ಜಂಕ್ಷನ್‌ವರೆಗೆ ಸುಮಾರು ಒಂದು ಕಿ.ಮೀ. ವ್ಯಾಪ್ತಿಯಲ್ಲಿ ಸರ್ವೀಸ್ ರಸ್ತೆ ನಿರ್ಮಾಣಕ್ಕೆ ಸಂಬಂಧಿಸಿದ ಮರಗಳ ತೆರವು ಕಾರ್ಯ ಆರಂಭವಾಗಿದೆ. ಕಿನ್ನಿಮೂಲ್ಕಿಯಿಂದ ಅಂಬಲಪಾಡಿ ಸಂಪರ್ಕಿಸುವ ರಸ್ತೆ ಹದಗೆಟ್ಟಿರುವ ಕುರಿತು ವರದಿಗಳು ಬಂದಿದ್ದು, ಈ ರಸ್ತೆಗೆ ತುರ್ತಾಗಿ ತಾತ್ಕಾಲಿಕ ದುರಸ್ತಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಕುಂದಾಪುರ–ತಲಪಾಡಿ ಅಪಘಾತ ರಹಿತ ರಸ್ತೆ: ಕೇರಳ ಮಾದರಿಯನ್ನು ಗಮನದಲ್ಲಿಟ್ಟುಕೊಂಡು ಕುಂದಾಪುರದಿಂದ ತಲಪಾಡಿವರೆಗೆ ಅಪಘಾತ ರಹಿತ ರಸ್ತೆ ನಿರ್ಮಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಕಟಪಾಡಿ ಅಂಡರ್‌ಪಾಸ್ ಕಾಮಗಾರಿ ಪ್ರಗತಿಯಲ್ಲಿದ್ದು, ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಇದರಿಂದ ವಾಹನ ದಟ್ಟಣೆ ಉಂಟಾಗುತ್ತಿದ್ದು, ಇನ್ನೊಂದು ಬದಿಯ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ ಎರಡೂ ಬದಿಯಲ್ಲಿ 75 ಮೀಟರ್ ವ್ಯಾಪ್ತಿಯಲ್ಲಿ ವಾಣಿಜ್ಯ ಕಟ್ಟಡ ನಿರ್ಮಿಸಬಾರದು ಎಂಬ ಕೇಂದ್ರ ಸರ್ಕಾರದ ಸುತ್ತೋಲೆ ಹಾಗೂ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ, ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಕರೆದು ಕಾನೂನು ಚೌಕಟ್ಟಿನೊಳಗೆ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಆಜ್ಮಿ, ಕನ್ಸಲ್ಟೆಂಟ್ ಪ್ರೆಸಿಡೆಂಟ್ ಇಂಜಿನಿಯರ್ ಅಲೋಕ್ ಎಂ., ಕನ್ಸಲ್ಟೆಂಟ್ ಟೀಮ್ ಲೀಡರ್ ಎನ್.ಆರ್. ಗೋಸ್ವಾಮಿ, ಧ್ರುವ್ ಕನ್ಸಲ್ಟೆನ್ಸಿಯ ಎ.ಎಚ್.ಇ. ವಿಘ್ನೇಶ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...