ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಿದ ಗೂಡುದೀಪ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ವಿನೂತನ ಪ್ರಯೋಗ

Date:

ದೀಪಾವಳಿ ಹಬ್ಬದ ಸಂಭ್ರಮದ ನಡುವೆ ಮತದಾರರಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸುವ ವಿನೂತನ ಪ್ರಯತ್ನಕ್ಕೆ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದರಾವ್ ಮುಂದಾಗಿದ್ದಾರೆ.

- Advertisement -

ದೇಶಾದ್ಯಂತ ಕಾಂಗ್ರೆಸ್ ಪಕ್ಷವು ಮತಗಳ್ಳತನದ ವಿರುದ್ಧ ನಡೆಸುತ್ತಿರುವ ಹೋರಾಟಕ್ಕೆ ಬೆಂಬಲವಾಗಿ, ದೀಪಾವಳಿಯ ಗೂಡುದೀಪದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಯ ಕುರಿತು ಜಾಗೃತಿ ಸಂದೇಶಗಳನ್ನು ಬರೆದು ಸಾರ್ವಜನಿಕರ ಗಮನ ಸೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ನುಡಿ ನಮನ | ಪಿರಿಯಾಪಟ್ಟಣದ ಮಣ್ಣಿನಿಂದ ಕನ್ನಡ ಜ್ಞಾನಲೋಕದ...

ಕೆಲವರು ಹುಟ್ಟಿದ ಊರಿನ ಹೆಸರನ್ನು ತಮ್ಮೊಂದಿಗೆ ಹೊತ್ತುಕೊಂಡು ಬದುಕುತ್ತಾರೆ. ಇನ್ನು ಕೆಲವರು ತಾವು ಹುಟ್ಟಿದ ನೆಲದ ಹೆಸರನ್ನೇ ತಮ್ಮ ಸಾಧನೆಯ ಮೂಲಕ ನಾಡಿನಾದ್ಯಂತ ಪರಿಚಯಿಸುತ್ತಾರೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಂಪಲಾಪುರದಲ್ಲಿ ಹುಟ್ಟಿ,...

ಗೂಡುದೀಪದಲ್ಲಿ ‘ವೋಟ್ ಬಚಾವೋ–ದೇಶ್ ಬಚಾವೋ’, ‘ವೋಟ್ ಚೋರ್–ಗದ್ದಿ ಛೋಡ್’, ‘ಮತ ಮಾರಾಟಕ್ಕಿಲ್ಲ–ಮತ ಕಳ್ಳತನಕ್ಕಿಲ್ಲ’, ‘ನಮ್ಮ ಮತ–ನಮ್ಮ ಹಕ್ಕು’, ‘ಪ್ರಜಾಪ್ರಭುತ್ವ ರಕ್ಷಣೆ–ನಮ್ಮೆಲ್ಲರ ಹೊಣೆ’ ಮೊದಲಾದ ಘೋಷಣೆಗಳನ್ನು ಬರೆಯುವ ಮೂಲಕ ಮತದಾರರಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ದೀಪಾವಳಿಯ ಬೆಳಕಿನ ಹಬ್ಬವನ್ನು ಸಾಮಾಜಿಕ ಜಾಗೃತಿಯ ವೇದಿಕೆಯನ್ನಾಗಿ ಬಳಸಿಕೊಂಡಿರುವ ಶುಭದರಾವ್ ಅವರ ಈ ವಿಭಿನ್ನ ಪ್ರಯೋಗ ಸಾರ್ವಜನಿಕರ ಗಮನ ಸೆಳೆದಿದೆ.

ಇದಕ್ಕೂ ಮೊದಲು ಕೋವಿಡ್-19 ಸಾಂಕ್ರಾಮಿಕದ ಸಂದರ್ಭದಲ್ಲಿ ಸಾರ್ವಜನಿಕರು ವಹಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಗೂಡುದೀಪದ ಮೂಲಕವೇ ಹಲವು ಜಾಗೃತಿ ಸಂದೇಶಗಳನ್ನು ನೀಡಿದ್ದರು. ಇದೀಗ ಮತಗಳ್ಳತನದ ವಿರುದ್ಧ ಜಾಗೃತಿ ಮೂಡಿಸಲು ಗೂಡುದೀಪವನ್ನು ಬಳಸಿಕೊಂಡಿರುವುದು ಅವರ ಸಾಮಾಜಿಕ ಜಾಗೃತಿಯ ಪ್ರಯತ್ನಕ್ಕೆ ಮತ್ತೊಂದು ಉದಾಹರಣೆಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಸ್ಥಳೀಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡಲು ಪ್ರಜಾಸೇವಾ ಆಂದೋಲನ: ಸಚಿವ ರುದ್ರಪ್ಪ ಲಮಾಣಿ

"ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳೀಯವಾಗಿಯೇ...

ಗದಗ | ಪ್ರಕೃತಿ ವಿಕೋಪದ ಸಂಕಷ್ಟಕ್ಕೆ ರೈತರ ನೆರವಿಗೆ ಫಸಲ್ ಬಿಮಾ ಯೋಜನೆ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

"ಅತಿವೃಷ್ಟಿ, ಅನಾವೃಷ್ಟಿ, ಅಕಾಲಿಕ ಮಳೆ ಸೇರಿದಂತೆ ವಿವಿಧ ಪ್ರಕೃತಿ ವಿಕೋಪಗಳಿಂದ ಬೆಳೆ...

ಯಾದಗಿರಿ | ಮಕ್ಕಳ ಶಿಕ್ಷಣಕ್ಕೆ ಆದ್ಯತೆ: ಡಾ. ಕೆ.ಎಂ. ಸಂದೇಶ್ ಜನ್ಮದಿನ ಸಮಾಜಮುಖಿ ಆಚರಣೆ

ಅಂಬೇಡ್ಕರ್ ಸೇವಾ ಸಮಿತಿ (ರಿ) ಕರ್ನಾಟಕದ ಸಂಸ್ಥಾಪಕ ಹಾಗೂ ರಾಜ್ಯಾಧ್ಯಕ್ಷ ಡಾ....

ಕಲಬುರಗಿ | ಮೃತ ವಿದ್ಯಾರ್ಥಿ ಕುಟುಂಬಕ್ಕೆ ಪರಿಹಾರ ನೀಡುವಂತೆ ದಸಂಸ ಭೀಮಮಾರ್ಗ ಆಗ್ರಹ

ನಗರದ ಡಾ. ಬಿ.ಆರ್. ಅಂಬೇಡ್ಕರ್ ವಸತಿ ನಿಲಯದ ನಾಲ್ಕನೇ ಮಹಡಿಯಿಂದ ಬಿದ್ದು...