ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವು ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡು ಮಾತನಾಡಿದ ಶುಭದರಾವ್ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಹಿಂದು ಸಂಘಟನೆಗಳು ಶುದ್ದೀಕರಣ ನಡೆಸಿರುವುದು ಖಂಡನೀಯ. ದೇಶ 80 ನೇ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸುತ್ತಿದ್ದರೂ ಇನ್ನೂ ಕೂಡ ದೇಶದಲ್ಲಿ ಅಸ್ಪ್ರಶ್ಯತೆಯನ್ನು ಆಚರಿಸುತ್ತಿರುವುದು ಅಘಾತಕಾರಿಯಾಗಿದೆ. ಸ್ವಾತಂತ್ರ್ಯ ಸಂಗ್ರಾಮವನ್ನು ನಡೆಸಿದಂತೆ ಅಸ್ಪ್ರಶ್ಯತೆಯ ವಿರುದ್ದವೂ ದೇಶದಲ್ಲಿ ಮತ್ತೊಮ್ಮೆ ಸ್ವಾತಂತ್ರ್ಯ ಹೋರಾಟದ ಮಾದರಿಯಲ್ಲಿ ಹೋರಾಟ ಅನಿವಾರ್ಯವಾಗಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೇ ಈ ಸ್ಥಿತಿ ಆದರೆ ಇನ್ನು ಸಾಮಾನ್ಯ ದಲಿತ ಬಂಧುವಿನ ಪರಿಸ್ಥಿತಿ ಹೇಗಿರಬಹುದು ಎಂದು ಊಹಿಸಿದರೆ ಆತಂಕವಾಗುತ್ತದೆ, ಈ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಸ್ಪೃಶ್ಯತೆಯ ವಿರುದ್ಧ ಹೋರಾಟವನ್ನು ಕೈಗೊಳ್ಳುವ ಸಂಕಲ್ಪವನ್ನು ನಾವೆಲ್ಲರೂ ದೃಢ ಮನಸ್ಸಿನಿಂದ ಮಾಡಬೇಕಾಗಿದೆ ಎಂದು ಕರೆ ನೀಡಿದರು.
ಧ್ವಜಾರೋಹಣ ನಡೆಸಿದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ನ್ಯಾಯವಾದಿಗಳಾದ ಶೇಖರ ಮಡಿವಾಳ ಅವರು ಮಾತನಾಡಿ ಬೇಠಿ ಬಚಾವೊ ಭೇಠಿ ಪಡಾವ್ ಎಂದು ಕರೆ ನೀಡುವು ಪ್ರಧಾನಿ ಮೋದಿಯವರು ನೀಟ್ ಅಕ್ರಮ ಖಂಡಿಸಿ ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳ ಮೇಲೆ ಲಾಠಿ ಬೀಜಾವೋ ಮಾಡಿದ್ದು ಸರಿಯೇ..? ಘೋಷಣೆಗಳು ಕೇವಲ ನಾಲಗೆಯಿಂದ ಮಾತ್ರಾ ಬರದೆ ಹೃದಯದಿಂದ ಹೊರಹೊಮ್ಮಿದಾಗ ಮಾತ್ರಾ ದೇಶದ ಪ್ರಜೆಗಳ ನೋವು ನಲಿವು ಅರ್ಥವಾಗಲು ಸಾಧ್ಯ ಎಂದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್ ನಕ್ರೆಯವರು ಮಾತನಾಡಿ ಬ್ರಿಟೀಷರು ಕೊಳ್ಳೆ ಹೊಡೆದು ಹೋದ ಭಾರತವನ್ನು ಸಶಕ್ತಶಾಲಿಯಾಗಿ ಜಗತ್ತಿನ ಮುಂದೆ ಕಟ್ಟಿಬೆಳೆಸಿದ ಕೀರ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲಬೇಕು ಎಂದರು.
ರಾಜ್ಯ ಸರ್ಕಾರದ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಂಜುನಾಥ ಪೂಜಾರಿ ಮುದ್ರಾಡಿ ಮಾತನಾಡಿ ಪ್ರಧಾನಿ ಮೋದಿ ಆಡಳಿತವು ಭಾರತ ಕಂಡ ಅತ್ಯಂತ ಕಳಪೆ ಆಡಳಿತ ಎಂದರು. ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋಪಿನಾಥ್ ಭಟ್, ತಾಲೂಕು ಗ್ಯಾರಂಟಿ ಸಮಿತಿ ಅದ್ಯಕ್ಷ ಅಜಿತ್ ಹೆಗ್ಡೆ ಮತ್ತು ಉಸ್ತುವಾರಿ ಭರತ್ ಮುಂಡೋಡಿ ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್, ಬ್ಲಾಕ್ ಉಪಾಧ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನೊ, ರಾಜ್ಯ ಕಿಸಾನ್ ಘಟಕದ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಹಿರ್ಗಾನ ಸೊಸೈಟಿ ಅಧ್ಯಕ್ಷರಾದ ಸಿರಿಯಣ್ಣ ಶೆಟ್ಟಿ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಸೇವಾದಳದ ಅಬ್ದುಲ್ ಸಾಣೂರು, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಭಾನು ಬಾಸ್ಕರ ಪೂಜಾರಿ, ನಗರ ಕಾಂಗ್ರೆಸ್ ಅಧ್ಯಕ್ಷ ರಾಜೇಂದ್ರ ದೇವಾಡಿಗ, ನಗರ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ರೀನಾ ಡಿಸೋಜ, ಪ್ರಚಾರ ಸಮಿತಿಯ ಅನಿಲ್ ಪೂಜಾರಿ ಮಾಳ, ಎಸ್ಸಿ ಘಟಕದ ಅದ್ಯಕ್ಷ ದೇವದಾಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಎಸ್.ಐ.ಆರ್ ಪ್ರಕ್ರೀಯೆಯಲ್ಲಿ ಶ್ರಮಿಸಿದ ಬಿ.ಎಲ್.ಎ 2 ,ಗಳಿಗೆ ಈ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ವಿವಿಧ ಘಟಕಗಳ ಅಧ್ಯಕ್ಷರು, ಚುನಾಯಿತ ಜನಪ್ರತಿನಿಧಿಗಳು, ನಾಮನಿರ್ದೇಶಿತ ಸದಸ್ಯರು, ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಬ್ಲಾಕ್ ಪಧಾದಿಕಾರಿಗಳು ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು. ಸಭೆಯ ಬಳಿಕ ವಿಹಾನ್ ಮೊಲೋಡಿಸ್ ತಂಡದಿಂದ ದೇಶಭಕ್ತಿ ಗೀತೆ ಕಾರ್ಯಕ್ರಮವು ನಡೆಯಿತು.
ಬ್ಲಾಕ್ ಅಲ್ಪ ಸಂಖ್ಯಾತ ಘಟಕದ ಅದ್ಯಕ್ಷ ಶೇಕ್ ಶಭೀರ್ ಮಿಯ್ಯಾರು ವಂದನಾರ್ಪಣೆಗೈದರು, ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರೂಪಿಸಿದರು.





