ಟೀಮ್ ಮಲೆನಾಡು ಹ್ಯೂಮೇನಿಟೆರಿಯನ್ ಟ್ರಸ್ಟ್ ಬೆಳ್ವೆ ಇದರ ನೂತನ ಅಧ್ಯಕ್ಷರಾಗಿ ಅಬ್ದುಲ್ ಶುಕುರ್ ಬೆಳ್ವೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಪೀರು ಸಾಹೇಬ್ ಉಡುಪಿ, ಪ್ರಧಾನ ಕಾರ್ಯದರ್ಶಿಯಾಗಿ ಮೊಹಮ್ಮದ್ ರಫೀಕ್ ಅಜೆಕಾರು, ಕೋಶಾಧಿಕಾರಿಯಾಗಿ ಮೊಹಮ್ಮದ್ ಆಸೀಫ್ ಅಲ್ಬಾಡಿ ಹಾಗೂ ಜೊತೆ ಕಾರ್ಯದರ್ಶಿಯಾಗಿ ಮೊಹಮ್ಮದ್ ಇಲ್ಯಾಸ್ ಬೆಳ್ವೆ ಆಯ್ಕೆಯಾಗಿದ್ದಾರೆ.
ಟ್ರಸ್ಟ್‌ನ ಸರ್ವ ಟ್ರಸ್ಟಿಗಳ ವಾರ್ಷಿಕ ಸಭೆಯು ಇಂದು ಬೆಳ್ವೆಯ ಶ್ರೀ ಸಂದೇಶ ಕಿಣಿ ಮೆಮೋರಿಯಲ್ ಸಭಾಂಗಣದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಟ್ರಸ್ಟ್‌ನ ಅಧ್ಯಕ್ಷ ಮುಸ್ತಾಕ್ ಅಹ್ಮದ್ ಬೆಳ್ವೆ ವಹಿಸಿದ್ದರು.

ಟ್ರಸ್ಟಿಗಳಾದ ನಝೀರ್ ಶಾ, ಇಲ್ಯಾಸ್ ಬೆಳ್ವೆ, ಮೊಹಮ್ಮದ್ ರೆಯಾನ್ ಹಾಗೂ ಪೀರು ಸಾಹೇಬ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ರಫೀಕ್ ಅಜೆಕಾರು ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟಿ ಮೊಹಮ್ಮದ್ ರೆಯಾನ್ ಕಿರಾತ್ ಪಠಿಸಿದರು. ಟ್ರಸ್ಟಿ ಅರಾಫತ್ ಅಲ್ಬಾಡಿ ಸ್ವಾಗತಿಸಿದರು.
ಕೋಶಾಧಿಕಾರಿ ಮೊಹಮ್ಮದ್ ಆಸೀಫ್ ವಾರ್ಷಿಕ ವರದಿ ಮಂಡಿಸಿದರು. ಉಪಾಧ್ಯಕ್ಷ ಅಬ್ದುಲ್ ಶುಕುರ್ ಬೆಳ್ವೆ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.





