ಉಡುಪಿ | ಗುಡ್ಡೆಯಂಗಡಿಯಲ್ಲಿ ನಾಳೆ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್ ಉದ್ಘಾಟನೆ

Date:

ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನಾ ಸಮಾರಂಭವು ಸೋಮವಾರ ಮೇ 25ರಂದು ಸಂಜೆ 4 ಗಂಟೆಗೆ ನಡೆಯಲಿದೆ.

- Advertisement -

ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉದ್ಘಾಟಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮುಖ್ಯ ಅತಿಥಿಗಳಾಗಿ ಕುಂದಾಪುರ ಶಾಸಕ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಉದ್ಯಮಿ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಕಾರ್ಕಳದ ಚೇರ್ಮನ್ ಡಾ. ಸುಧಾಕರ್ ಶೆಟ್ಟಿ, ಮಂಗಳೂರಿನ ಲೆಕ್ಕ ಪರಿಶೋಧಕ CA ಎಸ್.ಎಸ್. ನಾಯಕ್, ಯಡಾಡಿ-ಮತ್ಯಾಡಿ ಪ್ರಥಮ ದರ್ಜೆ ಗುತ್ತಿಗೆದಾರ ಬಿ. ಅರುಣ್ ಕುಮಾರ್ ಹೆಗ್ಡೆ, ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಹಾಗೂ ಸುಜ್ಞಾನ ಎಜುಕೇಶನ್ ಟ್ರಸ್ಟ್ ಕುಂದಾಪುರದ ಚೇರ್ಮನ್ ಡಾ. ರಮೇಶ್ ಶೆಟ್ಟಿ ಭಾಗವಹಿಸಲಿದ್ದಾರೆ.

1010988298

ಡಾ.ಜಿ. ರಾಮಕೃಷ್ಣ ಆಚಾರ್ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷರು ಹಾಗೂ SKF ಎಲಿಕ್ಸರ್ ಇಂಡಿಯಾ ಪ್ರೈ. ಲಿ. ಚೇರ್ಮನ್ ಡಾ. ಜಿ. ರಾಮಕೃಷ್ಣ ಆಚಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಗೌರವ ಟ್ರಸ್ಟಿ ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಮತ್ತು ತಾಂತ್ರಿಕ ಸಲಹೆಗಾರ ಎ. ಬಾಲಕೃಷ್ಣ ಉಪಸ್ಥಿತವಿರುವ ಎಂದು ಸಂಘಟಕರು ತಿಳಿಸಿದ್ದಾರೆ.

ಉಚಿತ ತರಬೇತಿ – ದಾಖಲಾತಿ ಆರಂಭ

ಕುಂದಾಪುರ ತಾಲೂಕಿನ ಗುಡ್ಡೆಯಂಗಡಿ ಪ್ರದೇಶದಲ್ಲಿರುವ “SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್”ನಲ್ಲಿ 2026-27ನೇ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ. ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ SKF Elixer India Pvt. Ltd ವತಿಯಿಂದ ಈ ತರಬೇತಿ ಕೇಂದ್ರವನ್ನು ನಿರ್ವಹಿಸಲಾಗುತ್ತಿದೆ.

ಕೈಗಾರಿಕಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಉಚಿತ ತಾಂತ್ರಿಕ ತರಬೇತಿ ನೀಡುವ ಉದ್ದೇಶದಿಂದ ವಿವಿಧ ವೃತ್ತಿಪರ ಕೋರ್ಸ್‌ಗಳನ್ನು ಆರಂಭಿಸಲಾಗಿದೆ.

ಕೇಂದ್ರದಲ್ಲಿ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌, ಮೆಕ್ಯಾನಿಕ್ – ರೆಫ್ರಿಜರೇಷನ್, ಎಸಿ ಮತ್ತು ಪ್ಲಂಬಿಂಗ್‌ ಸೇರಿದಂತೆ ಹಲವು ತಾಂತ್ರಿಕ ಕೋರ್ಸ್‌ಗಳಿಗೆ ತರಬೇತಿ ನೀಡಲಾಗುತ್ತದೆ. ಜೊತೆಗೆ ಫ್ಯಾಷನ್ ಡಿಸೈನ್ ಕೋರ್ಸ್ ಕೂಡ ಲಭ್ಯವಿದೆ.

ಪ್ರತಿ ಬ್ಯಾಚ್‌ಗೆ 20 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದ್ದು, ತರಬೇತಿ ಅವಧಿ ಒಂದು ವರ್ಷವಾಗಿರುತ್ತದೆ. ಫ್ಯಾಷನ್ ಡಿಸೈನ್ ಕೋರ್ಸ್‌ಗೆ ಆರು ತಿಂಗಳ ಅವಧಿ ನಿಗದಿಪಡಿಸಲಾಗಿದೆ. ತರಬೇತಿಯ ಜೊತೆಗೆ ಇಂಟರ್ನ್‌ಶಿಪ್ ಹಾಗೂ ಉದ್ಯೋಗ ಮಾರ್ಗದರ್ಶನ ವ್ಯವಸ್ಥೆಯೂ ಕಲ್ಪಿಸಲಾಗಿದೆ.

SSLC ಪಾಸ್ ಅಥವಾ ಫೇಲ್ ಆದವರು, PUC ಹಾಗೂ ಪದವೀಧರರು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ 91874 92550 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಹಾವೇರಿ | ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ

ಭಾರತೀಯ ಅಂಚೆ ಇಲಾಖೆಯಲ್ಲಿ ಪೋಸ್ಟಲ್ ಲೈಫ್ ಇನ್ಸೂರೆನ್ಸ್ (ಪಿಎಲ್‌ಐ-ಅಂಚೆ ಜೀವವಿಮೆ) ಮತ್ತು...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...