ಉಡುಪಿ | ಹುಟ್ಟೂರಿನ ಯುವಕರಿಗೆ ಸ್ವಾವಲಂಬಿ ಬದುಕಿನ ದಾರಿ: ಡಾ. ರಾಮಕೃಷ್ಣ ಆಚಾರ್

Date:

ಕುಂದಾಪುರ ತಾಲೂಕಿನ ಯಡಾಡಿ-ಮತ್ಯಾಡಿ ಸಮೀಪದ ಗುಡ್ಡೆಯಂಗಡಿಯಲ್ಲಿ ಡಾ. ಜಿ. ರಾಮಕೃಷ್ಣ ಆಚಾರ ಚಾರಿಟೇಬಲ್ ಟ್ರಸ್ಟ್ ಹಾಗೂ ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ.ಲಿ. ವತಿಯಿಂದ ನಿರ್ಮಾಣಗೊಂಡಿರುವ ನೂತನ SKF ಇಂಡಸ್ಟ್ರಿಯಲ್ ಟ್ರೈನಿಂಗ್ ಸೆಂಟರ್‌ನ ಉದ್ಘಾಟನಾ ಸಮಾರಂಭವು ಸೋಮವಾರ ಸಂಸ್ಥೆಯ ಕ್ಯಾಂಪಸ್‌ನಲ್ಲಿ ವಿಜೃಂಭಣೆಯಿಂದ ನಡೆಯಿತು.

- Advertisement -
1011026235

ಕಾರ್ಯಕ್ರಮವನ್ನು ಮೂಡಬಿದಿರೆಯ ಆಳ್ವಾಸ್ ಎಜುಕೇಶನ್ ಫೌಂಡೇಶನ್ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ಉದ್ಘಾಟಿಸಿ ಮಾತನಾಡಿ, “ನಾನು ಮತ್ತು ಡಾ. ಜಿ. ರಾಮಕೃಷ್ಣ ಆಚಾರ್ ಇಬ್ಬರೂ ಜೀವನದಲ್ಲಿ ಅಪಾರ ಕಷ್ಟಗಳನ್ನು ಎದುರಿಸಿ ಮೇಲೆ ಬಂದವರು. ಇಂದು ಅವರು ತಮ್ಮ ಸಂಸ್ಥೆಗಳ ಮೂಲಕ ದೇಶ-ವಿದೇಶಗಳಲ್ಲಿ ಸಾವಿರಾರು ಮಂದಿಗೆ ಉದ್ಯೋಗ ಕಲ್ಪಿಸಿದ್ದಾರೆ. ಇದೀಗ ಹುಟ್ಟೂರಿನ ಯುವಕರಿಗೆ ಕೌಶಲಾಧಾರಿತ ಶಿಕ್ಷಣ ನೀಡಿ ಉದ್ಯೋಗ ನೀಡಲು ಮುಂದಾಗಿರುವುದು ಶ್ಲಾಘನೀಯ ಕಾರ್ಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

“ಸುಮಾರು 23 ದೇಶಗಳಲ್ಲಿ ಸಂಸ್ಥೆಯನ್ನು ಬೆಳೆಸಿರುವ ಡಾ. ರಾಮಕೃಷ್ಣ ಆಚಾರ್ ಇದೀಗ ತಮ್ಮ ಊರಿನ ಯುವಕರಿಗೆ ಉಚಿತ ತರಬೇತಿ ನೀಡಿ ಸ್ವಾವಲಂಬಿ ಬದುಕು ಕಟ್ಟಿಕೊಡಲು ಮುಂದಾಗಿದ್ದಾರೆ. ಹುಟ್ಟೂರಿಗೆ ಇದಕ್ಕಿಂತ ದೊಡ್ಡ ಕೊಡುಗೆ ಮತ್ತೊಂದಿಲ್ಲ” ಎಂದು ಅವರು ಹೇಳಿದರು.

1011026384

ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈ. ಲಿ. ಚೇರ್ಮನ್ ಹಾಗೂ ಡಾ. ಜಿ. ರಾಮಕೃಷ್ಣ ಆಚಾರ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಜಿ. ರಾಮಕೃಷ್ಣ ಆಚಾರ್ ಮಾತನಾಡಿ, “ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಫೇಲಾದ ಮಕ್ಕಳಿಗೂ ಇಲ್ಲಿ ತರಬೇತಿ ನೀಡಿ ಉದ್ಯೋಗಾವಕಾಶ ಕಲ್ಪಿಸಲಾಗುವುದು. ನಾನು ಜೀವನದಲ್ಲಿ ಕಷ್ಟಪಟ್ಟು ಮೇಲೆ ಬಂದವನಾಗಿದ್ದರಿಂದ ಯುವಕರಿಗೆ ನೆರವಾಗುವ ಉದ್ದೇಶದಿಂದ ಈ ಸಂಸ್ಥೆ ಆರಂಭಿಸಲಾಗಿದೆ” ಎಂದರು.

“ಇಲ್ಲಿ ವಿವಿಧ ತಾಂತ್ರಿಕ ವಿಭಾಗಗಳಲ್ಲಿ ಉಚಿತ ತರಬೇತಿ ನೀಡಲಾಗುವುದು. ತರಬೇತಿ ಪೂರ್ಣಗೊಳಿಸಿದವರಿಗೆ ನಮ್ಮದೇ ಸಂಸ್ಥೆಯಲ್ಲಿ ಉದ್ಯೋಗ ಕಲ್ಪಿಸುವ ವ್ಯವಸ್ಥೆಯೂ ಇದೆ” ಎಂದು ತಿಳಿಸಿದರು.

1011026234

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಕಚೇರಿ ವಿಭಾಗವನ್ನು ಉದ್ಘಾಟಿಸಿದರು.

ಎಲೆಕ್ಟ್ರಿಕ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗವನ್ನು ಉದ್ಯಮಿ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ಕಂಪ್ಯೂಟರ್ ವಿಭಾಗವನ್ನು ಕಾರ್ಕಳ ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾ. ಸುಧಾಕರ್ ಶೆಟ್ಟಿ, ಫ್ಯಾಶನ್ ಡಿಸೈನಿಂಗ್ ವಿಭಾಗವನ್ನು ಮಂಗಳೂರಿನ ಲೆಕ್ಕ ಪರಿಶೋಧಕ ಸಿಎ ಎಸ್.ಎಸ್. ನಾಯಕ್ ಉದ್ಘಾಟಿಸಿದರು.

1011026297

ತರಗತಿ ಕೊಠಡಿಗಳನ್ನು ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಎಂಆರ್ ಎಸಿ ಹಾಗೂ ಪ್ಲಂಬಿಂಗ್ ವಿಭಾಗವನ್ನು ಪ್ರಥಮ ದರ್ಜೆ ಗುತ್ತಿಗೆದಾರ ಬಿ. ಅರುಣ್ ಕುಮಾರ್ ಹೆಗ್ಡೆ ಹಾಗೂ ಫಿಟ್ಟಿಂಗ್ ಮತ್ತು ವೆಲ್ಡಿಂಗ್ ವಿಭಾಗವನ್ನು ಸುಜ್ಞಾನ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾ. ರಮೇಶ್ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉದ್ಯಮಿ ಎಂ. ದಿನೇಶ್ ಹೆಗ್ಡೆ ಮೊಳಹಳ್ಳಿ, ಪದ್ಮಗೋಪಾಲ್ ಎಜುಕೇಶನ್ ಟ್ರಸ್ಟ್ ಚೇರ್ಮನ್ ಡಾ. ಸುಧಾಕರ್ ಶೆಟ್ಟಿ, ಮಂಗಳೂರಿನ ಲೆಕ್ಕ ಪರಿಶೋಧಕ ಎಸ್.ಎಸ್. ನಾಯಕ್, ಯಡಾಡಿ-ಮತ್ಯಾಡಿಯ ಪ್ರಥಮ ದರ್ಜೆ ಗುತ್ತಿಗೆದಾರ ಬಿ. ಅರುಣ್ ಕುಮಾರ್ ಹೆಗ್ಡೆ, ಮೊಳಹಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಹಾಗೂ ಸುಜ್ಞಾನ ಎಜುಕೇಶನ್ ಟ್ರಸ್ಟ್ ಕುಂದಾಪುರದ ಚೇರ್ಮನ್ ಡಾ. ರಮೇಶ್ ಶೆಟ್ಟಿ, ಎಸ್‌ಕೆಎಫ್ ಎಲಿಕ್ಸರ್ ಇಂಡಿಯಾ ಪ್ರೈವೇಟ್ ಲಿಮಿಟೆಡ್‌ನ ಪ್ರಜ್ವಲ್ ಆರ್. ಆಚಾರ್, ತೇಜಸ್ ಆರ್. ಆಚಾರ್ ಹಾಗೂ ರಕ್ಷತ್ ಆರ್. ಆಚಾರ್ ಉಪಸ್ಥಿತರಿದ್ದರು.

ಸುಜ್ಞಾನ ಕಾಲೇಜಿನ ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಪ್ರೊ. ಎಂ. ಬಾಲಕೃಷ್ಣ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ತಾಂತ್ರಿಕ ಸಲಹೆಗಾರ ಎ. ಬಾಲಕೃಷ್ಣ ಅಧ್ಯಯನ ವಿಭಾಗವನ್ನು ಹಾಗೂ ಶ್ರೀವಿದ್ಯಾ ಫ್ಯಾಶನ್ ಡಿಸೈನ್ ವಿಭಾಗವನ್ನು ಪರಿಚಯಿಸಿದರು.

ಪ್ರಜ್ವಲ್ ಆರ್. ಆಚಾರ್ ಸಂಸ್ಥೆಯ ಕಾರ್ಯಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ವಾಗ್ನಿ ದಾಮೋದರ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರೆ, ತೇಜಸ್ ಆರ್. ಆಚಾರ್ ಧನ್ಯವಾದ ಸಮರ್ಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...