ಅ.23ರಂದು ‘ಊರೂರೂ ಜಂತರ್ ಮಂತರ್’ ಉಡುಪಿಯಲ್ಲೂ ಪ್ರತಿಭಟನೆ ಮತ್ತು ಜಾಥಾ

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಅಕ್ಟೋಬರ್ 23ರಂದು ಉಡುಪಿಯಲ್ಲಿ ‘ಊರೂರೂ ಜಂತರ್ ಮಂತರ್’ ಪ್ರತಿಭಟನೆ ಮತ್ತು ಜಾಥಾ ಆಯೋಜಿಸಲಾಗಿದೆ.

- Advertisement -

ದೇಶಾದ್ಯಂತ ನಡೆಯಲಿರುವ ಈ ಕಾರ್ಯಕ್ರಮದ ಅಂಗವಾಗಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ.) ಅಂಬೇಡ್ಕರ್ ವಾದವು ಸಹಬಾಳ್ವೆ ಮತ್ತು ಸಹಭಾಗೀ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಸುಂದರ ಮಾಸ್ತರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ದೇಶದಲ್ಲಿ ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನಬದ್ಧ ಸಂಸ್ಥೆಗಳನ್ನು ತಮ್ಮ ಹಿಡಿತಕ್ಕೆ ತೆಗೆದುಕೊಂಡು ಕೋಮುವಾದಿ ಅಜೆಂಡಾವನ್ನು ಜಾರಿಗೊಳಿಸಲು ಪ್ರಯತ್ನಿಸುತ್ತಿವೆ. ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನಬದ್ಧ ಪ್ರತಿಭಟನೆಯ ಹಕ್ಕು ಅಪಾಯದಲ್ಲಿವೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ನ್ಯಾಯಾಂಗದ ಕಾರ್ಯವೈಖರಿಯ ಬಗ್ಗೆಯೂ ಅನುಮಾನಗಳು ಮೂಡುತ್ತಿವೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.

Advertisements
ಜಾಹಿರಾತು
ಜಾಹಿರಾತು

ಪ್ರಜಾಪ್ರಭುತ್ವ ಅಪಾಯದಲ್ಲಿರುವ ಇಂತಹ ಸಂದರ್ಭದಲ್ಲಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ತಪ್ಪನ್ನು ತಪ್ಪೆಂದು ಹೇಳದೆ, ಅನ್ಯಾಯದ ವಿರುದ್ಧ ಧ್ವನಿ ಎತ್ತದೆ ಮೌನವಾಗಿರುವುದೂ ಪರೋಕ್ಷವಾಗಿ ಅಪರಾಧ ಎಸಗಿದಂತೆಯೇ ಎಂದು ಸುಂದರ ಮಾಸ್ತರ್ ಅಭಿಪ್ರಾಯಪಟ್ಟಿದ್ದಾರೆ.

ಅಕ್ಟೋಬರ್ 23ರಂದು ಶುಕ್ರವಾರ ಉಡುಪಿಯಲ್ಲಿ ನಡೆಯಲಿರುವ ಪ್ರತಿಭಟನೆ ಮತ್ತು ಜಾಥಾದಲ್ಲಿ ಸಮಿತಿಯ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಪ್ರಜಾಪ್ರಭುತ್ವ ಪರ ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಅವರು ಮನವಿ ಮಾಡಿದ್ದಾರೆ.

ಸಮಿತಿಯ ರಾಜ್ಯ ಮಹಿಳಾ ಸಂಘಟನಾ ಸಂಚಾಲಕಿ ವಸಂತಿ ಶಿವಾನಂದ, ರಾಜ್ಯ ಸಮಿತಿ ಮಹಿಳಾ ಸದಸ್ಯರಾದ ಕುಸುಮಾ ಗುಜ್ಜರಬೆಟ್ಟು, ಚೈತ್ರ ಬೈಂದೂರು, ಇಂದಿರಾ ಬೈಂದೂರು, ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ, ಉಡುಪಿ ಜಿಲ್ಲಾ ಪ್ರಧಾನ ಸಂಚಾಲಕ ಮಂಜುನಾಥ ಗಿಳಿಯಾರು ಹಾಗೂ ಮಹಿಳಾ ಒಕ್ಕೂಟದ ಜಿಲ್ಲಾ ಪ್ರಧಾನ ಸಂಚಾಲಕಿ ಸುಂದರಿ ಪುತ್ತೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಣಸೂರಿನ ಎರಡು ಜಿಲ್ಲಾ ಪಂಚಾಯತ್ ಕ್ಷೇತ್ರಗಳನ್ನು ಎಸ್‌ಸಿಗೆ ಮೀಸಲಿಡಲು ಒತ್ತಾಯ

ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಎರಡು...

ರಾಸಾಯನಿಕಗಳಿಲ್ಲದೆ ಎಕರೆಗೆ 80 ಟನ್ ಕಬ್ಬು ಬೆಳೆದು ಗಮನ ಸೆಳೆದ ರೈತ ಮಹೇಶ್

ರಾಸಾಯನಿಕ ಗೊಬ್ಬರಗಳು ಹಾಗೂ ಹೊರಗಿನಿಂದ ಖರೀದಿಸುವ ದುಬಾರಿ ಕೃಷಿ ಒಳಸುರಿಗಳ ಬಳಕೆಯಿಲ್ಲದೆ,...

ಧಾರವಾಡ | ಭರವಸೆಗಳನ್ನು ಈಡೇರಿಸಲು ನ.26ರವರೆಗೆ ಗಡುವು: ಕಬ್ಬು ಬೆಳೆಗಾರರ ಪ್ರತಿಭಟನೆ ತಾತ್ಕಾಲಿಕ ಅಂತ್ಯ

ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರೊಂದಿಗೆ ನಡೆದ ಸುದೀರ್ಘ ಚರ್ಚೆಯ ಬಳಿಕ...