ಉಡುಪಿ‌ | ಯುದ್ಧವೇ ಸಾಮ್ರಾಜ್ಯಶಾಹಿಗಳ ವ್ಯಾಪಾರ : ಸುರೇಶ್ ಕಲ್ಲಾಗರ

Date:

ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆಯನ್ನು ಖಂಡಿಸಿ ಸಿಪಿಎಂ ಪಕ್ಷದ ವತಿಯಿಂದ ಕುಂದಾಪುರದಲ್ಲಿ ಪ್ರತಿಭಟನೆ ನಡೆಯಿತು.

- Advertisement -

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಅವರು, ಯುಎಸ್ ಮತ್ತು ಇಸ್ರೇಲ್ ದೇಶಗಳು ಜಗತ್ತಿನ ಕೆಲ ರಾಷ್ಟ್ರಗಳ ಮೇಲೆ ನಡೆಸುತ್ತಿರುವ ಯುದ್ಧಗಳು ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿವೆ ಎಂದು ಆರೋಪಿಸಿದರು. ಯುದ್ಧದ ಪರಿಣಾಮವಾಗಿ ಗ್ಯಾಸ್ ಮಾತ್ರವಲ್ಲದೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...
1010111817

ಸಾಮ್ರಾಜ್ಯಶಾಹಿ ಅಮೇರಿಕಾ ಯುದ್ಧ ಸಾಮಗ್ರಿಗಳ ವ್ಯಾಪಾರವನ್ನೇ ಆಧಾರವಾಗಿಟ್ಟುಕೊಂಡಿದ್ದು, ಯುದ್ಧ ನಡೆಯದಿದ್ದರೆ ಆ ದೇಶದ ಆರ್ಥಿಕ ವ್ಯವಸ್ಥೆ ದುರ್ಬಲವಾಗುತ್ತದೆ ಎಂದು ಅವರು ಹೇಳಿದರು. ಭಾರತದ ಬಜೆಟ್‌ನಿಗಿಂತಲೂ ಹೆಚ್ಚಿನ ಮೊತ್ತವನ್ನು ಅಮೇರಿಕಾ ತನ್ನ ರಕ್ಷಣಾ ವೆಚ್ಚಕ್ಕೆ ಖರ್ಚು ಮಾಡುತ್ತಿದೆ ಎಂದು ಆರೋಪಿಸಿದ ಅವರು, ಸಾಮ್ರಾಜ್ಯಶಾಹಿಗಳು ಯುದ್ಧವನ್ನು ವ್ಯಾಪಾರವಾಗಿ ಮಾಡಿಕೊಂಡಿದ್ದು, ಇದರ ಪರಿಣಾಮ ಜನತೆಗೆ ತೀವ್ರ ಹೊರೆ ಆಗುತ್ತಿದೆ ಎಂದರು.

ಅಮೇರಿಕಾ ಭಾರತ ಹಾಗೂ ಪಾಕಿಸ್ತಾನಕ್ಕೆ ಯುದ್ಧ ಸಾಮಗ್ರಿಗಳನ್ನು ಸರಬರಾಜು ಮಾಡುವ ಮೂಲಕ ಲಾಭ ಗಳಿಸುತ್ತಿದೆ ಎಂದು ಆರೋಪಿಸಿದರು.

1010036681 2
ಜಾಹಿರಾತು

ಪ್ರತಿಭಟನೆಯಲ್ಲಿ ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಚ್. ನರಸಿಂಹ, ತಾಲೂಕು ಕಾರ್ಯದರ್ಶಿ ಚಂದ್ರಶೇಖರ ವಿ ಸೇರಿದಂತೆ ಹಲವರು ಮಾತನಾಡಿದರು. ಪಕ್ಷದ ಸದಸ್ಯ ರಾಜು ದೇವಾಡಿಗ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ಸುರೇಂದ್ರ ಎಚ್., ಶೀಲಾವತಿ, ಬಲ್ಕೀಸ್ ಹಾಗೂ ತಾಲೂಕು ಸಮಿತಿ ಸದಸ್ಯರಾದ ಕೆ. ಶಂಕರ್, ಮಹಾಬಲ ವಡೇರಹೋಬಳಿ, ಸಂತೋಷ್ ಹೆಮ್ಮಾಡಿ, ಚಂದ್ರ ಪೂಜಾರಿ, ಡಿ. ಲಕ್ಷ್ಮಣ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಕಾರ್ಮಿಕ ಮುಖಂಡರಾದ ಪ್ರಕಾಶ್ ಕೋಣಿ, ರಮೇಶ್ ವಿ., ಚಂದ್ರ ವಿ., ರಹೆಮಾನ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಈಜಲು ತೆರಳಿದ್ದಾಗ ನೀರಿನಲ್ಲಿ ಮುಳುಗಿ ಯುವಕ ಸಾವು

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ರಾಯಚೂರು ತಾಲೂಕಿನ...

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...