ಉಡುಪಿ | ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ಬೋಗಿ ಅಳವಡಿಕೆ : ಸಿಪಿಎಂ ಸ್ವಾಗತ

Date:

ಕೆಎಸ್ಆರ್ ಬೆಂಗಳೂರು–ಕಾರವಾರ ಪಂಚಗಂಗಾ ಎಕ್ಸ್‌ಪ್ರೆಸ್‌ (ರೈಲು ಸಂಖ್ಯೆ 16595/16596) ರೈಲಿಗೆ ಒಂದು ತಿಂಗಳ ಅವಧಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ರೈಲ್ವೆ ಇಲಾಖೆ ಕೈಗೊಂಡಿರುವ ಕ್ರಮವನ್ನು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ಸ್ವಾಗತಿಸಿದೆ.

- Advertisement -

ಈ ಕುರಿತು ಕಾರ್ಯದರ್ಶಿ ಸುರೇಶ್ ಕಲ್ಲಾಗರ ಪತ್ರಿಕಾ ಹೇಳಿಕೆ ನೀಡಿದ್ದು, ಬೆಂಗಳೂರು–ಕಾರವಾರ ನಡುವೆ ಸಂಚರಿಸುವ ಪಂಚಗಂಗಾ ಎಕ್ಸ್‌ಪ್ರೆಸ್ ರೈಲು ಉಡುಪಿ ಜಿಲ್ಲೆಯ ಜನರಿಗೆ ಅತ್ಯಂತ ಪ್ರಮುಖ ಹಾಗೂ ಅಗತ್ಯವಾದ ರೈಲು ಸೇವೆಯಾಗಿದೆ. ಪ್ರತಿದಿನ ಉದ್ಯೋಗ, ಶಿಕ್ಷಣ, ವ್ಯಾಪಾರ, ವೈದ್ಯಕೀಯ ಚಿಕಿತ್ಸೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಜಿಲ್ಲೆಯ ಸಾವಿರಾರು ಮಂದಿ ಈ ರೈಲಿನ ಮೇಲೆ ಅವಲಂಬಿತರಾಗಿದ್ದಾರೆ. ಹೀಗಾಗಿ ರೈಲಿನಲ್ಲಿ ಪ್ರಯಾಣಿಕರ ಸಂಖ್ಯೆಗೆ ಅನುಗುಣವಾಗಿ ಆಸನಗಳ ಕೊರತೆ ಉಂಟಾಗುತ್ತಿರುವುದು ಸಾಮಾನ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಪೈಲಟ್ ಗಾಯಗೊಂಡ ನಂತರ ʼಫ್ಲೈದುಬೈʼ ವಿಮಾನ ನಡೆಸಿದವರು ಯಾರು?...

ಬುಧವಾರ ದುಬೈನಿಂದ ಇಸ್ರೇಲ್‌ನ ಟೆಲ್ ಅವೀವ್‌ಗೆ ಹಾರಾಟದಲ್ಲಿದ್ದ FZ1073 ವಿಮಾನದಲ್ಲಿ ನಡೆದ ಪ್ರಕರಣವು ಕಾಕ್‌ಪಿಟ್‌ನೊಳಗಿನ ಸುರಕ್ಷತೆ ಕುರಿತು ಪ್ರಶ್ನೆಗಳನ್ನು ಹುಟ್ಟಿ ಹಾಕಿದೆ.ಈ ವಿಮಾನದ ಯೆಮೆನ್ ಮೂಲದ ಸಹ-ಪೈಲಟ್‌, ಹರಿತ ವಸ್ತುವಿನಿಂದ ಪೈಲಟ್ ಮೇಲೆ...

ಹಬ್ಬ-ಹರಿದಿನಗಳು, ರಜೆ ಹಾಗೂ ವಾರಾಂತ್ಯದ ಸಂದರ್ಭದಲ್ಲಿ ಪ್ರಯಾಣಿಕರ ಸಂಖ್ಯೆ ಮತ್ತಷ್ಟು ಹೆಚ್ಚಾಗುವುದರಿಂದ ಟಿಕೆಟ್‌ ಪಡೆಯುವುದು ಮತ್ತು ಆರಾಮದಾಯಕವಾಗಿ ಪ್ರಯಾಣಿಸುವುದು ಕಷ್ಟಕರವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿರುವುದು ಪ್ರಯಾಣಿಕರಿಗೆ ಅನುಕೂಲವಾಗಲಿದೆ ಎಂದು ಸಿಪಿಎಂ ಜಿಲ್ಲಾ ಸಮಿತಿ ತಿಳಿಸಿದೆ.

ರೈಲ್ವೆ ಇಲಾಖೆಗೆ ಲಾಭದಾಯಕವಾಗಿರುವ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ಅಳವಡಿಸಿರುವ ಹೆಚ್ಚುವರಿ ಬೋಗಿಗಳನ್ನು ಮುಂದುವರಿಸಿ ಖಾಯಂಗೊಳಿಸಬೇಕು. ಪ್ರಯಾಣಿಕರ ಬೇಡಿಕೆ ಹಾಗೂ ರೈಲಿನ ನಿರಂತರ ಬಳಕೆಯನ್ನು ಪರಿಗಣಿಸಿ ಮುಂದಿನ ದಿನಗಳಲ್ಲಿಯೂ ಹೆಚ್ಚುವರಿ ಬೋಗಿಗಳ ಸೇವೆ ಲಭ್ಯವಾಗುವಂತೆ ಕ್ರಮ ಕೈಗೊಳ್ಳಬೇಕು ಎಂದು ಸಿಪಿಎಂ ಆಗ್ರಹಿಸಿದೆ.

ಅದೇ ರೀತಿ ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿ ಭಾಗದ ಜನರಿಗೆ ಬೆಂಗಳೂರು ಹಾಗೂ ಉತ್ತರ ಕನ್ನಡ ಭಾಗಗಳೊಂದಿಗೆ ರಾತ್ರಿ ಸಮಯದಲ್ಲಿ ಪ್ರಯಾಣಿಸಲು ಸೂಕ್ತ ರೈಲು ಸೇವೆಯ ಕೊರತೆ ಇದೆ. ಆದ್ದರಿಂದ ಕಾರವಾರ–ಬೆಂಗಳೂರು ಮಾರ್ಗದಲ್ಲಿ ಮತ್ತೊಂದು ರಾತ್ರಿ ರೈಲು ಸೇವೆಯನ್ನು ಆರಂಭಿಸಬೇಕು. ಇದರಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು, ವ್ಯಾಪಾರಸ್ಥರು, ರೋಗಿಗಳು ಹಾಗೂ ಸಾಮಾನ್ಯ ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಸಮಿತಿ ಹೇಳಿದೆ.

ಪ್ರಸ್ತುತ ರೈಲು ಸೇವೆಗಳ ಕೊರತೆಯಿಂದಾಗಿ ದೂರ ಪ್ರಯಾಣಿಸುವ ಜನರು ಅನಿವಾರ್ಯವಾಗಿ ಖಾಸಗಿ ಬಸ್‌ಗಳ ಮೇಲೆ ಅವಲಂಬಿತರಾಗಬೇಕಾಗಿದೆ. ವಿಶೇಷವಾಗಿ ಹಬ್ಬ-ಹರಿದಿನಗಳ ಸಂದರ್ಭದಲ್ಲಿ ಕೆಲವು ಖಾಸಗಿ ಬಸ್‌ ಮಾಲಕರು ಪ್ರಯಾಣಿಕರಿಂದ ದುಪ್ಪಟ್ಟು ಹಾಗೂ ಹೆಚ್ಚುವರಿ ದರ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಕೇಳಿಬರುತ್ತಿವೆ. ಸಾಮಾನ್ಯ ಜನರ ಅನಿವಾರ್ಯತೆಯನ್ನು ದುರುಪಯೋಗಪಡಿಸಿಕೊಂಡು ಹೆಚ್ಚುವರಿ ದರ ವಸೂಲಿ ಮಾಡುವುದನ್ನು ಸಂಬಂಧಪಟ್ಟ ಇಲಾಖೆಗಳು ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು ಎಂದು ಸಿಪಿಎಂ ಒತ್ತಾಯಿಸಿದೆ.

ರೈಲು ಸೇವೆಗಳು ಸಾರ್ವಜನಿಕರ ಅನುಕೂಲಕ್ಕಾಗಿ ಮಾತ್ರವಲ್ಲದೆ ಕಡಿಮೆ ವೆಚ್ಚದಲ್ಲಿ ಸುರಕ್ಷಿತ ಹಾಗೂ ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯಾಗಿ ಮಹತ್ವ ಹೊಂದಿವೆ. ಆದ್ದರಿಂದ ಕರಾವಳಿ ಭಾಗದ ರೈಲು ಪ್ರಯಾಣಿಕರ ಬಹುಕಾಲದ ಬೇಡಿಕೆಗಳನ್ನು ಪರಿಗಣಿಸಿ ಹೊಸ ರೈಲುಗಳನ್ನು ಆರಂಭಿಸುವುದು, ಅಸ್ತಿತ್ವದಲ್ಲಿರುವ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸುವುದು, ನಿಲ್ದಾಣಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಹೆಚ್ಚಿಸುವುದು ಸೇರಿದಂತೆ ಸಮಗ್ರ ಕ್ರಮಗಳನ್ನು ರೈಲ್ವೆ ಇಲಾಖೆ ಕೈಗೊಳ್ಳಬೇಕು.

ಉಡುಪಿ ಜಿಲ್ಲೆಯ ಜನರ ಬಹುಕಾಲದ ಬೇಡಿಕೆಗಳಿಗೆ ಸ್ಪಂದಿಸಿ ಪಂಚಗಂಗಾ ಎಕ್ಸ್‌ಪ್ರೆಸ್‌ಗೆ ಅಳವಡಿಸಿರುವ ಹೆಚ್ಚುವರಿ ಬೋಗಿಗಳನ್ನು ಖಾಯಂಗೊಳಿಸುವುದರ ಜೊತೆಗೆ, ಬೆಂಗಳೂರು–ಕಾರವಾರ ಮಾರ್ಗದಲ್ಲಿ ಮತ್ತೊಂದು ರಾತ್ರಿ ರೈಲು ಆರಂಭಿಸಬೇಕು ಹಾಗೂ ಹಬ್ಬದ ಸಂದರ್ಭಗಳಲ್ಲಿ ಖಾಸಗಿ ಬಸ್‌ಗಳ ಹೆಚ್ಚುವರಿ ದರ ವಸೂಲಿಗೆ ಕಡಿವಾಣ ಹಾಕಬೇಕು ಎಂದು ಸಿಪಿಎಂ ಉಡುಪಿ ಜಿಲ್ಲಾ ಸಮಿತಿ ರೈಲ್ವೆ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ದೇವಿಮನೆ ಘಟ್ಟದಲ್ಲಿ KSRTC ಬಸ್ ಕಂದಕಕ್ಕೆ; 18 ಮಂದಿಗೆ ಗಾಯ

ಕುಮಟಾ: ತಾಲೂಕಿನ ದೇವಿಮನೆ ಘಟ್ಟದ 2ನೇ ತಿರುವಿನ ಬಳಿ ಗುರುವಾರ ರಾತ್ರಿ...

ಯಾದಗಿರಿ | ಸಮರ್ಪಕ ಕೂಲಿ ಪಾವತಿಗೆ ಆಗ್ರಹ: ರಸ್ತಾಪುರ ಗ್ರಾಪಂ ಕಚೇರಿ ಎದುರು ರೈತ ಸಂಘ ಧರಣಿ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡಿರುವ...

ಸೌಜನ್ಯಾ ಪ್ರಕರಣ: ಮಂಗಳೂರಿಗೆ ನೂತನ SIT ತಂಡ; ತನಿಖೆಗೆ ಸಿದ್ಧತೆ

ಸೌಜನ್ಯಾ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್...