‘ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು’ : ಸುರೇಶ್ ಶೆಟ್ಟಿ ಬನ್ನಂಜೆ

Date:

ಮತದಾರರ ಪಟ್ಟಿಯಿಂದ ಮತದಾರರನ್ನು ಅಕ್ರಮವಾಗಿ ತೆಗೆದುಹಾಕುವ ಮೂಲಕ ಚುನಾವಣಾ ಪ್ರಕ್ರಿಯೆಯಲ್ಲಿ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿರುವ ಉಡುಪಿ ಬ್ಲಾಕ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ಹಾಗೂ ಉಡುಪಿ ನಗರಸಭೆಯ ನಾಮನಿರ್ದೇಶಿತ ಸದಸ್ಯ ಸುರೇಶ್ ಶೆಟ್ಟಿ ಬನ್ನಂಜೆ, ಇಂತಹ ಆರೋಪಗಳಿಗೆ ಗುರಿಯಾಗಿರುವ ಮುಖ್ಯ ಚುನಾವಣಾ ಆಯುಕ್ತರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

ಕಳೆದ ಎರಡು ವರ್ಷಗಳಿಂದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಪ್ರಕ್ರಿಯೆ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ಅಕ್ರಮಗಳ ಕುರಿತು ನಿರಂತರವಾಗಿ ಧ್ವನಿ ಎತ್ತುತ್ತಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಅವರು ವ್ಯಕ್ತಪಡಿಸಿರುವ ಆಕ್ಷೇಪಗಳಿಗೆ ಇದೀಗ ಮತ್ತಷ್ಟು ಮಹತ್ವ ದೊರೆತಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಕಡೆಗಣಿಸಿ ಬಿಜೆಪಿ ನಾಯಕರ ಸೂಚನೆಯಂತೆ ನಡೆದುಕೊಂಡಿದ್ದಾರೆ ಎಂಬ ಆರೋಪವನ್ನು ಅವರು ಮಾಡಿದ್ದಾರೆ. ಇದು ದೇಶದ ಕೋಟ್ಯಂತರ ಜನರಿಗೆ ಮಾಡಿರುವ ಅನ್ಯಾಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಚುನಾವಣಾ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಕುರಿತು ಸಮಗ್ರ ತನಿಖೆ ನಡೆಸಿ ಸತ್ಯವನ್ನು ದೇಶದ ಜನತೆಗೆ ತಿಳಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಬಿಜೆಪಿ ನಾಯಕರು ಮುಖ್ಯ ಚುನಾವಣಾ ಆಯುಕ್ತರ ಪರವಾಗಿ ಹಾಗೂ ರಾಹುಲ್ ಗಾಂಧಿ ವಿರುದ್ಧವಾಗಿ ಹೇಳಿಕೆ ನೀಡುತ್ತಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ. ಚುನಾವಣಾ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸವನ್ನು ಕಾಪಾಡಲು ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಅಗತ್ಯವಾಗಿದ್ದು, ಈ ವಿಚಾರದಲ್ಲಿ ಚುನಾವಣಾ ಆಯೋಗ ಸ್ಪಷ್ಟನೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ರಾಯಚೂರು | ಕಾಲೇಜಿನಲ್ಲಿ ಶೌಚಾಲಯವಿದೆ, ನೀರಿಲ್ಲ: 400 ಮಂದಿ ವಿದ್ಯಾರ್ಥಿನಿಯರ ಪರದಾಟ

ಹೆಣ್ಣುಮಕ್ಕಳಿಗೆ ಶಿಕ್ಷಣ ನೀಡುವುದಷ್ಟೇ ಸಾಲದು; ಅವರು ಸುರಕ್ಷಿತ, ಗೌರವಯುತ ಹಾಗೂ ಸ್ವಚ್ಛ...