ಉಡುಪಿ | ನೀಟ್ ಹಗರಣ ವಿರೋಧಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡನೀಯ : ಸುರೇಶ್ ಶೆಟ್ಟಿ ಬನ್ನಂಜೆ

Date:

ನೀಟ್ ಪ್ರಶ್ನೆಪತ್ರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ದೇಶದಾದ್ಯಂತ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗಿಸಿರುವುದು ಖಂಡನೀಯ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಹೇಳಿದ್ದಾರೆ.

- Advertisement -

ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯಕ್ಕೆ ನ್ಯಾಯ ಕೋರಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಸಂದರ್ಭದಲ್ಲಿ ಅವರನ್ನು ಬಲಪ್ರಯೋಗದಿಂದ ಚದುರಿಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಅವರು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸುವ ಬದಲು ದಮನದ ಮಾರ್ಗ ಅನುಸರಿಸುತ್ತಿದೆ ಎಂದು ಟೀಕಿಸಿದ ಅವರು, ನೀಟ್ ಹಗರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಜತೆಗೆ, ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುತ್ತಿರುವ ಮಿತ್ರಪಕ್ಷಗಳು ಹಾಗೂ ಈ ಹಿಂದೆ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದ ಸಾಮಾಜಿಕ ಕಾರ್ಯಕರ್ತರು, ಸಾರ್ವಜನಿಕ ಜೀವನದ ಪ್ರಮುಖರು ಮತ್ತು ವಿವಿಧ ರಾಜಕೀಯ ಪಕ್ಷಗಳ ನಾಯಕರು ವಿದ್ಯಾರ್ಥಿಗಳ ಪರವಾಗಿ ಧ್ವನಿ ಎತ್ತಿ, ನ್ಯಾಯ ದೊರಕಿಸುವ ಹೋರಾಟಕ್ಕೆ ಬೆಂಬಲ ನೀಡಬೇಕು ಎಂದು ಸುರೇಶ್ ಶೆಟ್ಟಿ ಬನ್ನಂಜೆ ಕರೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಬಿಜೆಪಿ ಮತ್ತೆ ಕರೆದರೆ ಸೇರ್ಪಡೆ, ಇಲ್ಲದಿದ್ದರೆ ಕಾಂಗ್ರೆಸ್ ಅಥವಾ ಪಕ್ಷೇತರ ಆಯ್ಕೆ: ರಘುಪತಿ ಭಟ್

ಮುಂದಿನ 2028ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಆದರೆ ಯಾವ...

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...