ಉಡುಪಿ | ರಾಮ ಮಂದಿರ, ನೀಟ್ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಬಿಜೆಪಿ ಯತ್ನ : ಸುರೇಶ್ ಶೆಟ್ಟಿ ಬನ್ನಂಜೆ

Date:

ನೀಟ್ ಪ್ರಶ್ನೆಪತ್ರಿಕೆ ಹಗರಣ ಹಾಗೂ ಅಯೋಧ್ಯೆ ರಾಮ ಮಂದಿರದ ಹಣಕಾಸು ಅಕ್ರಮಗಳ ಆರೋಪಗಳಿಂದ ಜನರ ಗಮನ ಬೇರೆಡೆ ಸೆಳೆಯುವ ಉದ್ದೇಶದಿಂದ ಬಿಜೆಪಿ ಕಾಂಗ್ರೆಸ್ ಕಚೇರಿಗಳ ಎದುರು ಪ್ರತಿಭಟನೆ ನಡೆಸಿ ಮತದಾರರು ಹಾಗೂ ವಿದ್ಯಾರ್ಥಿಗಳನ್ನು ದಿಕ್ಕುತಪ್ಪಿಸುವ ಪ್ರಯತ್ನ ಮಾಡುತ್ತಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಸುರೇಶ್ ಶೆಟ್ಟಿ ಬನ್ನಂಜೆ ಆರೋಪಿಸಿದ್ದಾರೆ.

- Advertisement -

ಈ ಕುರಿತು ಪ್ರಕಟಣೆ ನೀಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ನೀಟ್ ಪ್ರಶ್ನೆಪತ್ರಿಕೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕಾಗಿದ್ದರೂ, ಅದರ ಬದಲು ಕಾಂಗ್ರೆಸ್ ವಿರುದ್ಧ ಪ್ರತಿಭಟನೆ ನಡೆಸಿ ಜನರನ್ನು ದಾರಿ ತಪ್ಪಿಸುವ ಯತ್ನ ನಡೆಯುತ್ತಿದೆ ಎಂದು ಟೀಕಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ದೇಶದಾದ್ಯಂತ ವಿದ್ಯಾರ್ಥಿಗಳು ನೀಟ್ ಹಗರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಸಂದರ್ಭದಲ್ಲಿ, ಬಿಜೆಪಿ ನಾಯಕರು ನೈತಿಕ ಹೊಣೆಗಾರಿಕೆ ವಹಿಸುವ ಬದಲು ರಾಜಕೀಯ ನಾಟಕ ಮಾಡುತ್ತಿದ್ದಾರೆ ಎಂದು ಅವರು ಹೇಳಿದರು.

ಅಯೋಧ್ಯೆಯ ಶ್ರೀರಾಮ ಮಂದಿರ ನಿರ್ಮಾಣಕ್ಕಾಗಿ ದೇಶದಾದ್ಯಂತ ಭಕ್ತರಿಂದ ದೇಣಿಗೆ ಸಂಗ್ರಹಿಸಲಾಯಿತು. ಈಗ ಮಂದಿರದ ಹಣಕಾಸು ವ್ಯವಹಾರಗಳ ಕುರಿತು ಕೇಳಿಬರುತ್ತಿರುವ ಆರೋಪಗಳ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕಿದೆ. ಭಕ್ತರ ನಂಬಿಕೆಗೆ ಧಕ್ಕೆಯಾಗದಂತೆ ಸತ್ಯಾಂಶವನ್ನು ಬಹಿರಂಗಪಡಿಸುವ ಜವಾಬ್ದಾರಿ ಆಡಳಿತ ಪಕ್ಷದ ಮೇಲಿದೆ ಎಂದು ಅವರು ಒತ್ತಾಯಿಸಿದರು.

ಬಿಜೆಪಿಯ “ಡೋಂಗಿ ಭಕ್ತಿ”ಯ ನಿಜಸ್ವರೂಪ ಈಗ ಜನರಿಗೆ ಅರ್ಥವಾಗಿದ್ದು, ಜನರ ಪ್ರಶ್ನೆಗಳಿಗೆ ಉತ್ತರಿಸುವ ಬದಲು ಗಮನ ಬೇರೆಡೆ ಸೆಳೆಯುವ ಪ್ರಯತ್ನಗಳು ಯಶಸ್ವಿಯಾಗುವುದಿಲ್ಲ ಎಂದು ಸುರೇಶ್ ಶೆಟ್ಟಿ ಬನ್ನಂಜೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ನವೆಂಬರ್ 20, 21ರಂದು ಜೈವಿಕ ತಂತ್ರಜ್ಞಾನ ಕುರಿತು ರಾಷ್ಟ್ರೀಯ ಕಾರ್ಯಾಗಾರ

ಬಿವಿವಿಎಸ್ ರಿಸರ್ಚ್ ಸೆಂಟರ್ ಫಾರ್ ಎಕ್ಸಲೆನ್ಸ್ ವತಿಯಿಂದ ನವೆಂಬರ್ 20 ಮತ್ತು...

ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ...

‘ SIR’ ಫಾರಂ-7 ದುರ್ಬಳಕೆ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಿ: ಜಾಗೃತ ಕರ್ನಾಟಕ ಒತ್ತಾಯ

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಮತದಾರರ ಪಟ್ಟಿಯ ವಿಶೇಷ ಸಮಗ್ರ...