ಕಾರ್ಕಳ: ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Date:

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದಲ್ಲಿ ಮಂಗಳವಾರ ನಡೆದಿದೆ.

- Advertisement -

ಹಿರ್ಗಾನ ಗ್ರಾಮದ ನಾಲ್ವರು ಸ್ನೇಹಿತರು ಮಧ್ಯಾಹ್ನ ಸುಮಾರು 2.30ಕ್ಕೆ ಸುವರ್ಣ ನದಿಗೆ ಈಜಲು ತೆರಳಿದ್ದರು. ಈ ವೇಳೆ ಹಿರ್ಗಾನ ಗ್ರಾಮದ ಹರ್ಷನ್ (21) ಹಾಗೂ ಭರತ್ (29) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇವರೊಂದಿಗೆ ತೆರಳಿದ್ದ ರಂಜಿತ್ (27) ಹಾಗೂ ಕೇತನ್ (23) ಅಪಾಯದಿಂದ ಪಾರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಬಗ್ಗೆ ಮಾಹಿತಿ ಲಭಿಸಿದ್ದು, ತಕ್ಷಣ ಅಗ್ನಿಶಾಮಕ ಹಾಗೂ ತುರ್ತು ಸೇವಾ ಸಿಬ್ಬಂದಿ ಮತ್ತು ಮುಳುಗು ತಜ್ಞರು ಸ್ಥಳಕ್ಕೆ ತೆರಳಿ ಶೋಧ ಕಾರ್ಯಾಚರಣೆ ನಡೆಸಿದರು. ಹಗ್ಗ, ಲೈಫ್ ಜಾಕೆಟ್ ಹಾಗೂ ಡ್ರೋನ್‌ಗಳ ನೆರವಿನಿಂದ ಕಾರ್ಯಾಚರಣೆ ನಡೆಸಿ ಸಂಜೆ ಸುಮಾರು 6 ಗಂಟೆಗೆ ಇಬ್ಬರ ಮೃತದೇಹಗಳನ್ನು ಪತ್ತೆಹಚ್ಚಿ ಹೊರತೆಗೆಯಲಾಯಿತು.

ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...

ಕೆಜಿಎಫ್ | ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್ ಆಗ್ರಹ

ಕೇಂದ್ರ ಚುನಾವಣಾ ಆಯೋಗದ ಕಾರ್ಯವೈಖರಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...