ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ನಿಧನ

Date:

ದ.ಕ. ಜಿಲ್ಲಾ ಖಾಝಿ ಅಲ್ ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್(78) ಅವರು ಜೂ.23ರಂದು ಮಂಗಳವಾರ ಬೆಳಗ್ಗೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನಹೊಂದಿದರು.

- Advertisement -

ಕೆಲವು ಸಮಯದಿಂದ ಅನಾರೋಗಕ್ಕೀಡಾಗಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

2010ರಲ್ಲಿ ದ.ಕ. ಜಿಲ್ಲಾ ಖಾಝಿಯಾಗಿ ಅಧಿಕಾರ ಸ್ವೀಕರಿಸಿದ್ದ ತ್ವಾಕಾ ಉಸ್ತಾದ್, ದ.ಕ. ಮತ್ತು ಕೇರಳ ರಾಜ್ಯದ ಸುಮಾರು 200ಕ್ಕೂ ಅಧಿಕ ಜಮಾಅತ್ ಗಳ ಖಾಝಿಯಾಗಿದ್ದರು. ಸಮಸ್ತ ಕಾಸರಗೋಡು ಜಿಲ್ಲಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮೃತರು ಪತ್ನಿ, ಮೂವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸಚಿವ ಯು.ಟಿ. ಖಾದರ್ ಸಂತಾಪ

ದ.ಕ. ಜಿಲ್ಲಾ ಖಾಝಿ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾ‌ರ್ ಅವರ ನಿಧನಕ್ಕೆ ಆರೋಗ್ಯ ಸಚಿವ ಯು.ಟಿ. ಖಾದ‌ರ್ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಮುಸ್ಲಿಂ ಸಮುದಾಯಕ್ಕೆ ದೀರ್ಘಕಾಲ ಧಾರ್ಮಿಕ ಮಾರ್ಗದರ್ಶನ ನೀಡಿದ ಮುಸ್ಲಿಯಾ‌ರ್ ಅವರು ತಮ್ಮ ಜೀವನವನ್ನೆಲ್ಲಾ ಧರ್ಮ, ಶಿಕ್ಷಣ ಹಾಗೂ ಸಮಾಜ ಸೇವೆಗೆ ಸಮರ್ಪಿಸಿ ಸಾವಿರಾರು ಜನರಿಗೆ ದಾರಿದೀಪರಾಗಿದ್ದರು. ಅವರ ಸರಳತೆ, ಆಳವಾದ ಜ್ಞಾನ ಹಾಗೂ ಸಮನ್ವಯದ ಮನೋಭಾವವು ಎಲ್ಲರಿಗೂ ಪ್ರೇರಣೆಯಾಗಿತ್ತು. ಅವರ ಅಗಲಿಕೆ ಮುಸ್ಲಿಂ ಸಮುದಾಯಕ್ಕೆ ಮಾತ್ರವಲ್ಲದೆ ಸಮಸ್ತ ಸಮಾಜಕ್ಕೂ ಅಪಾರ ನಷ್ಟವಾಗಿದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಬಲಪಡಿಸುವಲ್ಲಿ ಅವರ ಪಾತ್ರ ಅತ್ಯಂತ ಮಹತ್ವದ್ದಾಗಿತ್ತು ಎಂದು ಖಾದರ್ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಧಿಕಾರಿಗಳ ನಿರ್ಲಕ್ಷ್ಯದಿಂದ ದೌರ್ಜನ್ಯಗಳಿಗೆ ಕಡಿವಾಣ ಬೀಳುತ್ತಿಲ್ಲ : ಸಂಜೀವ ಬಳ್ಕೂರು

ರಾಯಚೂರು ಜಿಲ್ಲೆಯಲ್ಲಿ ದಲಿತ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಅತ್ಯಾಚಾರ ಹಾಗೂ...

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...