ಉಡುಪಿ | ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ 3–4 ತಿಂಗಳಲ್ಲಿ ಪೂರ್ಣ: ಸಚಿವ ಕೆ.ಜೆ. ಜಾರ್ಜ್

Date:

ಸಮುದ್ರ ಮತ್ತು ನದಿಯ ನಡುವೆ ಸಾಗುವ ರಾಷ್ಟ್ರೀಯ ಹೆದ್ದಾರಿ 66ರ ಅಂಚಿನಲ್ಲಿರುವ ತ್ರಾಸಿ–ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳೊಳಗೆ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು.

- Advertisement -

ತ್ರಾಸಿ–ಮರವಂತೆ ಬೀಚ್‌ಗೆ ಸೋಮವಾರ ಭೇಟಿ ನೀಡಿದ ಸಚಿವರು, ಪ್ರಸ್ತುತ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಬಳಿಕ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ತ್ರಾಸಿ ಬೀಚ್‌ನಲ್ಲಿ ಪಾರ್ಕಿಂಗ್, ಫುಡ್‌ಕೋರ್ಟ್, ಸೈಕಲ್ ಟ್ರ್ಯಾಕ್, ಬಯಲು ರಂಗಮಂದಿರ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳು ಸುಮಾರು 9.95 ಕೋಟಿ ರೂ. ವೆಚ್ಚದಲ್ಲಿ ಕಳೆದ ಎರಡು ವರ್ಷಗಳಿಂದ ನಡೆಯುತ್ತಿವೆ. ಕಾಮಗಾರಿಗಳಿಗೆ ವೇಗ ನೀಡುವ ಮೂಲಕ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು.

ಕರಾವಳಿ ಭಾಗದ ಬೀಚ್‌ಗಳನ್ನು ಪ್ರವಾಸಿಗರಿಗೆ ಆಕರ್ಷಕವಾಗುವಂತೆ ಅಭಿವೃದ್ಧಿಪಡಿಸುವ ಅಗತ್ಯವಿದೆ. ಕುಡಿಯುವ ನೀರು, ಬೆಳಕಿನ ವ್ಯವಸ್ಥೆ, ಸುಸಜ್ಜಿತ ಶೌಚಗೃಹ, ವಾಹನ ನಿಲುಗಡೆ, ಆಸನ ವ್ಯವಸ್ಥೆ ಸೇರಿದಂತೆ ಅಗತ್ಯ ಅತ್ಯಾಧುನಿಕ ಸೌಲಭ್ಯಗಳನ್ನು ಒದಗಿಸಿದರೆ ಪ್ರವಾಸೋದ್ಯಮ ಕ್ಷೇತ್ರಕ್ಕೆ ಮತ್ತಷ್ಟು ಉತ್ತೇಜನ ದೊರೆಯಲಿದೆ. ಪ್ರವಾಸಿಗರ ಸಂಖ್ಯೆ ಹೆಚ್ಚುವುದರೊಂದಿಗೆ ಸ್ಥಳೀಯರಿಗೆ ಉದ್ಯೋಗಾವಕಾಶಗಳೂ ಸೃಷ್ಟಿಯಾಗಲಿವೆ ಎಂದು ಅವರು ಹೇಳಿದರು.

WhatsApp Image 2026 09 07 at 9.21.21 PM 1

ಹೆದ್ದಾರಿ ಮೇಲ್ಭಾಗದಲ್ಲಿ ಸ್ಕೈವಾಕ್ ನಿರ್ಮಾಣಕ್ಕೆ ಚಿಂತನೆ

ಬೀಚ್‌ನಿಂದ ಹೋಟೆಲ್‌ಗಳಿಗೆ ಸುರಕ್ಷಿತವಾಗಿ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿಯ ಮೇಲ್ಭಾಗದಲ್ಲಿ ಸ್ಕೈವಾಕ್ ನಿರ್ಮಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (NHAI) ಅಭಿಯಂತರರೊಂದಿಗೆ ಮಾತುಕತೆ ನಡೆಸಲಾಗುವುದು ಎಂದು ಸಚಿವ ಕೆ.ಜೆ. ಜಾರ್ಜ್ ಹೇಳಿದರು.

ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಅನಗತ್ಯ ವೆಚ್ಚ ಮಾಡುವುದಿಲ್ಲ. ಸಾರ್ವಜನಿಕರು ಹಾಗೂ ಪ್ರವಾಸಿಗರ ನೈಜ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಕಾಮಗಾರಿಗಳನ್ನು ಕೈಗೊಳ್ಳಲಾಗುವುದು ಎಂದರು.

ಸುರಕ್ಷತೆಗೆ ಸ್ಥಳೀಯ ಜೀವರಕ್ಷಕರ ನೇಮಕ

ತ್ರಾಸಿ–ಮರವಂತೆ ಬೀಚ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ ಸುಮಾರು 1.5 ಕಿ.ಮೀ. ಉದ್ದಕ್ಕೆ ಸಾಗುತ್ತದೆ. ಹೆದ್ದಾರಿ ಮತ್ತು ಬೀಚ್ ನಡುವೆ ಸಮರ್ಪಕ ತಡೆಬೇಲಿ ಇಲ್ಲದ ಕಾರಣ ಪ್ರವಾಸಿಗರು ಹೆದ್ದಾರಿ ಬದಿಯಲ್ಲಿ ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿ ಬೀಚ್‌ಗೆ ತೆರಳುತ್ತಿದ್ದಾರೆ. ಇದರಿಂದ ಸುರಕ್ಷತಾ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಈ ಬಗ್ಗೆ ವಿಶೇಷ ನಿಗಾ ವಹಿಸಲಾಗುವುದು ಎಂದು ಸಚಿವರು ತಿಳಿಸಿದರು.

ಪ್ರವಾಸಿಗರ ಸುರಕ್ಷತೆಗಾಗಿ ಸ್ಥಳೀಯ ಜೀವರಕ್ಷಕರನ್ನು ಅಗತ್ಯ ತರಬೇತಿ ನೀಡಿ ನೇಮಕ ಮಾಡಲಾಗುವುದು. ಬೀಚ್ ಪ್ರದೇಶದಲ್ಲಿ ಸುರಕ್ಷತಾ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲಾಗುವುದು ಎಂದರು.

ಧಾರ್ಮಿಕ ಪ್ರವಾಸೋದ್ಯಮಕ್ಕೂ ಮೂಲಸೌಕರ್ಯ

ಉಡುಪಿ ಜಿಲ್ಲೆಯ ಶ್ರೀಕೃಷ್ಣ ಮಠ, ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನ ಸೇರಿದಂತೆ ಹಲವು ಧಾರ್ಮಿಕ ಕ್ಷೇತ್ರಗಳಿಗೆ ಪ್ರತಿನಿತ್ಯ ಸಾವಿರಾರು ಪ್ರವಾಸಿಗರು ಹಾಗೂ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ ಪ್ರವಾಸೋದ್ಯಮಕ್ಕೆ ಪೂರಕವಾಗಿ ವ್ಯವಸ್ಥಿತ ಮೂಲಸೌಕರ್ಯಗಳನ್ನು ಒದಗಿಸುವುದಕ್ಕೂ ಸರ್ಕಾರ ಆದ್ಯತೆ ನೀಡಲಿದೆ ಎಂದು ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿ, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ. ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ರಾಮ್ ಪ್ರಸಾತ್ ಮನೋಹರ್, ಎಡಿಸಿ ಅಬೀದ್ ಗಧ್ಯಾಳ, ಜಿಲ್ಲಾ ಸಹಾಯಕ ನಿರ್ದೇಶಕಿ ವಿಂಧ್ಯಾ ಎನ್.ಎಂ. ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೃದಯದ ಮೇಲಿದ್ದ ಬೃಹತ್ ಗಡ್ಡೆ ಯಶಸ್ವಿ ತೆರವು; ಬಾಗಲಕೋಟೆಯ ಕೆರೂಡಿ ಆಸ್ಪತ್ರೆ ವೈದ್ಯರ ಅಪರೂಪದ ಸಾಧನೆ

ಎದೆಯ ಮಧ್ಯಭಾಗದಲ್ಲಿ ಬೆಳೆದು ಹೃದಯದ ಮೇಲೆ ತೀವ್ರ ಒತ್ತಡ ಉಂಟುಮಾಡುತ್ತಿದ್ದ ಬೃಹತ್...

ಬಾಗೇಪಲ್ಲಿ | ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆ ಬಹುತೇಕಶಾಂತಿಯುತ ಹಾಗೂ ಬಿರುಸಿನ ಮತದಾನ

ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಎನ್‌ಡಿಎ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿಗೆ ಕಾರಣವಾಗಿರುವ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...