ಮಂಗಳೂರು | ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡು : ಅತ್ರಾಡಿ ಅಮೃತ ಶೆಟ್ಟಿ

Date:

ತುಳುನಾಡು ಮಾತೃಮೂಲ ಸಂಸ್ಕೃತಿಯ ನಾಡಾಗಿದ್ದು, ಮಾತೃಪ್ರಧಾನ ಸಾಮಾಜಿಕ ವ್ಯವಸ್ಥೆ ಇಲ್ಲಿನ ವಿಶೇಷತೆಯಾಗಿತ್ತು. ಬದಲಾಗುತ್ತಿರುವ ಸಾಮಾಜಿಕ ಸನ್ನಿವೇಶದಲ್ಲಿಯೂ ಮಹಿಳೆಯರು ತಮ್ಮ ಸ್ಥಾನಮಾನ, ಗೌರವ ಹಾಗೂ ಸಾಮರ್ಥ್ಯದ ಬಗ್ಗೆ ಪ್ರಜ್ಞಾಪೂರ್ವಕವಾಗಿ ಮುನ್ನಡೆಯಬೇಕು ಎಂದು ಹಿರಿಯ ಲೇಖಕಿ ಅತ್ರಾಡಿ ಅಮೃತ ಶೆಟ್ಟಿ ಹೇಳಿದರು.

- Advertisement -

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಮಂಗಳೂರಿನ ಸಂವಾದ ಯುವ ಸಂಪನ್ಮೂಲ ಕೇಂದ್ರದ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ‘ಅಕಾಡೆಮಿಡ್ ಒಂಜಿ ದಿನ ಬಲೆ ತುಳು ಓದುಗ’ ಕಾರ್ಯಕ್ರಮದ 14ನೇ ಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಂವಾದ ಯುವ ಸಂಪನ್ಮೂಲ ಕೇಂದ್ರದ ಯೂತ್ ಆಕ್ಷನ್ ಕನ್ವೀನರ್ ಮಂಜುಳಾ ಸುನಿಲ್ ಮಾತನಾಡಿ, ತುಳು ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಬಗ್ಗೆ ವಿದ್ಯಾರ್ಥಿಗಳಲ್ಲಿ ಆಸಕ್ತಿ ಮತ್ತು ಅಭಿರುಚಿ ಬೆಳೆಸುವ ವಿಶಿಷ್ಟ ಪರಿಕಲ್ಪನೆಯ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, ತುಳು ಭಾಷೆಯಲ್ಲಿ ಪ್ರಕಟವಾಗಿರುವ ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸುವ ಉದ್ದೇಶದಿಂದ ‘ಬಲೆ ತುಳು ಓದುಗ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಚಾಲಕ ಮನೋಜ್ ಕುಮಾರ್ ವೇಣೂರು ಉಪಸ್ಥಿತರಿದ್ದರು. ಅಕಾಡೆಮಿಯ ಸದಸ್ಯ ಪಾಂಗಾಳ ಬಾಬು ಕೊರಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸಂವಾದ ಯುವ ಸಂಪನ್ಮೂಲ ಕೇಂದ್ರದ ವಿವಿಧ ಕಾಲೇಜುಗಳ ಸುಮಾರು 40 ವಿದ್ಯಾರ್ಥಿಗಳು ಅಕಾಡೆಮಿಯ ಗ್ರಂಥಾಲಯದಲ್ಲಿ ತುಳು ಸಾಹಿತ್ಯ ಕೃತಿಗಳನ್ನು ಓದಿ, ಸಮಾರೋಪ ಸಮಾರಂಭದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...