ಮಂಗಳೂರು | ಹೊರವಲಯದಲ್ಲಿ ಎಐ ಆಧಾರಿತ ಸೈಬರ್ ಸುರಕ್ಷತಾ ಜಾಲ : ಸ್ಪೀಕರ್ ಯು.ಟಿ. ಖಾದರ್

Date:

ಕರ್ನಾಟಕ ವಿಧಾನಸಭೆ ಮತ್ತು ವಿಧಾನ ಪರಿಷತ್ ಸೇರಿದಂತೆ ರಾಜ್ಯದ ಎರಡೂ ಸದನಗಳಲ್ಲಿ ಮುಂದಿನ ಆರು ತಿಂಗಳೊಳಗೆ ಡಿಜಿಟಲೀಕರಣ ವ್ಯವಸ್ಥೆ ಜಾರಿಯಾಗಲಿದ್ದು, ಇದಕ್ಕೆ ಸರ್ಕಾರದ ಅನುಮೋದನೆ ದೊರೆತಿದೆ ಎಂದು ವಿಧಾನಸಭಾ ಅಧ್ಯಕ್ಷ ಯು ಟಿ ಖಾದರ್ ತಿಳಿಸಿದ್ದಾರೆ.

- Advertisement -

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ತಲಾ ಶೇ.50ರ ಅನುದಾನದೊಂದಿಗೆ ಈ ಯೋಜನೆ ಜಾರಿಯಾಗಲಿದೆ. ಬೆಂಗಳೂರು ಮತ್ತು ಬೆಳಗಾವಿಯ ವಿಧಾನಸಭಾ ಕಟ್ಟಡಗಳ ಡಿಜಿಟಲೀಕರಣಕ್ಕೆ 78 ಕೋಟಿ ರೂ. ಹಾಗೂ ವಿಧಾನ ಪರಿಷತ್‌ಗೆ 52 ಕೋಟಿ ರೂ. ಮೊತ್ತದ ಡಿಪಿಆರ್ ಸಿದ್ಧಪಡಿಸಲಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

ಡಿಜಿಟಲೀಕರಣದಿಂದ ಕಾಗದರಹಿತ ಆಡಳಿತ ವ್ಯವಸ್ಥೆ ಜಾರಿಗೆ ಬಂದು ವೆಚ್ಚ ಉಳಿತಾಯವಾಗುವುದರ ಜೊತೆಗೆ ಸದಸ್ಯರಿಗೆ ಮಾಹಿತಿ ತ್ವರಿತವಾಗಿ ಲಭ್ಯವಾಗಲಿದೆ. ಹಾಜರಾತಿ ವ್ಯವಸ್ಥೆಯಲ್ಲಿಯೂ ಆಧುನಿಕ ಬದಲಾವಣೆಗಳನ್ನು ತರಲಾಗುವುದು ಎಂದು ತಿಳಿಸಿದರು.

ಇದೇ ವೇಳೆ, ಮಂಗಳೂರು ಸ್ಮಾರ್ಟ್ ಸಿಟಿ ವ್ಯಾಪ್ತಿಯ ಹೊರಗಿನ ಪ್ರದೇಶಗಳಲ್ಲಿ ಸುಮಾರು 20 ಕೋಟಿ ರೂ. ವೆಚ್ಚದಲ್ಲಿ ಎಐ ಆಧಾರಿತ ಸೈಬರ್ ಸುರಕ್ಷತಾ ವ್ಯವಸ್ಥೆ ಜಾರಿಗೊಳಿಸುವ ಯೋಜನೆಯನ್ನೂ ಪ್ರಕಟಿಸಿದರು. ಸ್ಮಾರ್ಟ್ ಕ್ಯಾಮೆರಾಗಳು ಹಾಗೂ ಸಿಸಿ ಕ್ಯಾಮೆರಾಗಳ ಜಾಲದ ಮೂಲಕ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸುರಕ್ಷತಾ ವ್ಯವಸ್ಥೆ ಬಲಪಡಿಸಲಾಗುವುದು ಎಂದು ಹೇಳಿದರು.

ಈ ವ್ಯವಸ್ಥೆಯ ನಿರ್ವಹಣೆಗೆ ಸ್ಥಳೀಯ ಖಾಸಗಿ ಸಂಸ್ಥೆಗಳ ಮಾನವ ಸಂಪನ್ಮೂಲ ಸಹಕಾರವನ್ನು ಬಳಸಿಕೊಳ್ಳಲಾಗುವುದು ಎಂದೂ ಅವರು ತಿಳಿಸಿದರು.

ರಾಜ್ಯದ ನೂತನ ಮುಖ್ಯಮಂತ್ರಿ ಆಯ್ಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್, ತಾನು ಪ್ರಸ್ತುತ ವಿಧಾನಸಭಾ ಸ್ಪೀಕರ್ ಆಗಿಯೇ ಕಾರ್ಯನಿರ್ವಹಿಸುತ್ತಿದ್ದು, ಯಾವುದೇ ಬದಲಾವಣೆ ಆಗಿಲ್ಲ ಎಂದು ಸ್ಪಷ್ಟಪಡಿಸಿದರು. ಸ್ಪೀಕರ್ ಆಗಿ ಕಾರ್ಯನಿರ್ವಹಿಸಿರುವ ಬಗ್ಗೆ ತೃಪ್ತಿ ಇದೆ. ಭವಿಷ್ಯದಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ಅದನ್ನು ಪ್ರಾಮಾಣಿಕವಾಗಿ ಹಾಗೂ ಸಮರ್ಥವಾಗಿ ನಿರ್ವಹಿಸುವುದಾಗಿ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ವಾಲ್ಮೀಕಿ ವಿವಿ ವಿದ್ಯಾರ್ಥಿಗಳ ಸಮಸ್ಯೆ ಪರಿಹರಿಸಲು: ದಲಿತ ವಿದ್ಯಾರ್ಥಿ ಪರಿಷತ್ ಆಗ್ರಹ

ಆದಿ ಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಅಧೀನದಲ್ಲಿ ವ್ಯಾಸಂಗ ಮಾಡುತ್ತಿರುವ...

ಉಡುಪಿ | ಕೃಷಿ ಮೇಳದಿಂದ ರೈತರ ಬದುಕಿಗೆ ಆತ್ಮಸ್ಥೈರ್ಯ ತುಂಬಲಿ: ಕೋಟ ಶ್ರೀನಿವಾಸ ಪೂಜಾರಿ

ಕೃಷಿ ಮತ್ತು ತೋಟಗಾರಿಕಾ ಬೆಳೆಗಳ ಮೌಲ್ಯವರ್ಧನೆಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು...

ಉಡುಪಿ | ಜನಸಾಮಾನ್ಯರ ಅಹವಾಲುಗಳಿಗೆ ಪೂರಕವಾಗಿ ಸ್ಪಂದಿಸೋಣ : ಯಶ್ ಪಾಲ್ ಸುವರ್ಣ

ಜನಸಾಮಾನ್ಯರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಿ, ಸೂಕ್ತ ಪರಿಹಾರ ಒದಗಿಸಿದಾಗ ಮಾತ್ರ ಸರಕಾರದ...

ಧಾರವಾಡ | ಪಶ್ಚಿಮ ಪದವೀಧರರ ಚುನಾವಣೆ; ಬ್ಯಾಲೆಟ್ ಪೇಪರ್ ನಿರ್ವಹಣೆಯಲ್ಲಿ ಎಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಸ್ನೇಹಲ್. ಆರ್

"ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿ ಚುನಾವಣಾ ಆಯೋಗದ...