ತುಳು ಅಭಿವೃದ್ಧಿ ನಿಗಮ ಸ್ಥಾಪನೆ, ತುಳು ಭವನ ನಿರ್ಮಾಣಕ್ಕೆ ಮುಖ್ಯಮಂತ್ರಿಗೆ ಉದಯ್ ಶೆಟ್ಟಿ ಮುನಿಯಾಲ್ ಮನವಿ

Date:

ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು ಭಾಷೆಯ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾಳಜಿ ವಹಿಸುವ ದೃಷ್ಟಿಯಿಂದ ರಾಜ್ಯ ಸರಕಾರ ತುಳು ಅಭಿವೃದ್ಧಿ ನಿಗಮ ಸ್ಥಾಪಿಸುವಂತೆ ಹಾಗೂ ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲ್ ಅವರು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿರುವ ಉದಯ್ ಶೆಟ್ಟಿ ಅವರು, ತುಳು ಭಾಷೆ, ಸಂಸ್ಕೃತಿ ಹಾಗೂ ಪರಂಪರೆಯ ಉಳಿವು ಮತ್ತು ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ವತಿಯಿಂದ “ತುಳು ಅಭಿವೃದ್ಧಿ ಪ್ರಾಧಿಕಾರ”ವನ್ನು ಶೀಘ್ರವಾಗಿ ಸ್ಥಾಪಿಸಬೇಕೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದೇನೆ. ತುಳು ಭಾಷೆಯು ಸಾವಿರಾರು ವರ್ಷಗಳ ಇತಿಹಾಸವನ್ನು ಹೊಂದಿರುವ ಪ್ರಾಚೀನ ದ್ರಾವಿಡ ಭಾಷೆಯಾಗಿದ್ದು, ಲಕ್ಷಾಂತರ ಜನರ ಮಾತೃಭಾಷೆಯಾಗಿದೆ. ತುಳು ಭಾಷೆಯು ತುಳುನಾಡಿನ ಸಂಸ್ಕೃತಿ, ಪರಂಪರೆ ಮತ್ತು ಜೀವನ ಶೈಲಿಯ ಅವಿಭಾಜ್ಯ ಅಂಗವಾಗಿದೆ. ಜಾಗತೀಕರಣದ ಪರಿಣಾಮವಾಗಿ ಪ್ರಾದೇಶಿಕ ಭಾಷೆಗಳ ಬಳಕೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ ತುಳು ಭಾಷೆಯ ಸಂರಕ್ಷಣೆ ಮತ್ತು ಅಭಿವೃದ್ಧಿಯ ಅಗತ್ಯತೆ ಹೆಚ್ಚಾಗಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಈಗಾಗಲೇ ಯುನೆಸ್ಕೋ (UNESCO) ಸಹ ತುಳು ಭಾಷೆಯನ್ನು ಸಂರಕ್ಷಿಸಬೇಕಾದ ಭಾಷೆಗಳ ಪೈಕಿ ಪರಿಗಣಿಸಿರುವ ಹಿನ್ನೆಲೆಯಲ್ಲಿ, ತುಳು ಭಾಷೆಯ ಉಳಿವು ಮತ್ತು ಬೆಳವಣಿಗೆಗಾಗಿ ವಿಶೇಷ ಕ್ರಮಗಳನ್ನು ಕೈಗೊಳ್ಳುವುದು ಅತ್ಯಗತ್ಯವಾಗಿದೆ. ಆದ್ದರಿಂದ ತುಳು ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿ ತುಳು ಭಾಷೆಯ ಸಂರಕ್ಷಣೆ ಮತ್ತು ಪ್ರಚಾರ, ತುಳು ಸಾಹಿತ್ಯ, ಸಂಶೋಧನೆ ಹಾಗೂ ಪ್ರಕಟಣೆಗಳಿಗೆ ಉತ್ತೇಜನ, ಶಾಲೆ ಮತ್ತು ಕಾಲೇಜುಗಳಲ್ಲಿ ತುಳು ಅಧ್ಯಯನಕ್ಕೆ ಹೆಚ್ಚಿನ ಪ್ರೋತ್ಸಾಹ, ತುಳು ಜಾನಪದ ಕಲೆ, ಯಕ್ಷಗಾನ, ಭೂತಾರಾಧನೆ ಹಾಗೂ ಇತರ ಸಾಂಸ್ಕೃತಿಕ ಪರಂಪರೆಗಳ ಸಂರಕ್ಷಣೆ, ತುಳು ಭಾಷೆಗೆ ಸಂವಿಧಾನಿಕ ಹಾಗೂ ಶೈಕ್ಷಣಿಕ ಮಾನ್ಯತೆ ದೊರಕುವಂತೆ ಕ್ರಮ ಕೈಗೊಳ್ಳುವುದು,ತುಳುನಾಡಿನ ಸಾಂಸ್ಕೃತಿಕ ಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವಂತೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದ್ದಾರೆ.

ಕಾರ್ಕಳದಲ್ಲಿ ಸುಸಜ್ಜಿತ ತುಳು ಭವನಕ್ಕೆ ಬೇಡಿಕೆ

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ತುಳು ಭವನ ನಿರ್ಮಾಣ ಮಾಡುವ ಕುರಿತು ಮನವಿ ಮಾಡಿಕೊಂಡಿದ್ದು, ತುಳು ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಸುಸಜ್ಜಿತ ತುಳು ಭವನ ನಿರ್ಮಾಣ ಅಗತ್ಯವಾಗಿದೆ.

ಕಾರ್ಕಳವು ತುಳುನಾಡಿನ ಪ್ರಮುಖ ಸಾಂಸ್ಕೃತಿಕ ಕೇಂದ್ರಗಳಲ್ಲಿ ಒಂದಾಗಿದ್ದು, ಇಲ್ಲಿ ತುಳು ಭಾಷೆ, ಯಕ್ಷಗಾನ, ಭೂತಾರಾಧನೆ, ನಾಗಾರಾಧನೆ ಹಾಗೂ ಇತರ ಜನಪದ ಕಲೆಗಳು ಇಂದಿಗೂ ಜೀವಂತವಾಗಿವೆ. ತುಳು ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆ, ಅಧ್ಯಯನ ಮತ್ತು ಪ್ರಚಾರಕ್ಕಾಗಿ ಕಾರ್ಕಳದಲ್ಲಿ ತುಳು ಭವನದ ಅಗತ್ಯವಿದೆ.

ಪ್ರಸ್ತಾವಿತ ತುಳು ಭವನದಲ್ಲಿ ಗ್ರಂಥಾಲಯ, ಸಂಶೋಧನಾ ಕೇಂದ್ರ, ಸಭಾಂಗಣ, ವಸ್ತುಸಂಗ್ರಹಾಲಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗಾಗಿ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಬಹುದಾಗಿದೆ. ಇದರಿಂದ ತುಳು ಭಾಷೆ ಮತ್ತು ಸಂಸ್ಕೃತಿಯ ಅಭಿವೃದ್ಧಿಗೆ ಹೆಚ್ಚಿನ ಉತ್ತೇಜನ ದೊರೆಯಲಿದೆ. ಆದ್ದರಿಂದ, ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನಲ್ಲಿ ಸರ್ಕಾರದ ವತಿಯಿಂದ ಸೂಕ್ತ ಜಾಗವನ್ನು ಗುರುತಿಸಿ, ಅಗತ್ಯ ಅನುದಾನವನ್ನು ಮಂಜೂರು ಮಾಡಿ ಶೀಘ್ರದಲ್ಲೇ ತುಳು ಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಉದಯ್ ಶೆಟ್ಟಿ ಮುನಿಯಾಲ್ ಅವರು ನೂತನ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿಯ ಮೂವರು ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಗರಿ

ರಾಜ್ಯ ಸರ್ಕಾರ 2026ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರಕಟಿಸಿದ್ದು,...

ಯಾದಗಿರಿ | ಮಕ್ಕಳ ಸುರಕ್ಷತೆ ಸಮಾಜದ ಹೊಣೆ: ಪೋಕ್ಸೋ, ಬಾಲ್ಯವಿವಾಹ ತಡೆಗೆ ಕಾನೂನು ಅರಿವು ಅಭಿಯಾನ

ಮಕ್ಕಳ ಹಕ್ಕುಗಳ ರಕ್ಷಣೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಸುರಕ್ಷಿತ...

ಕಲಬುರಗಿ | ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರ ದುಸ್ತರ: ದುರಸ್ತಿಗೆ ದಲಿತ ಸೇನೆ ಆಗ್ರಹ

ಮಳಖೇಡದಿಂದ ಚಿತ್ತಾಪುರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಸಂಪೂರ್ಣ ಹದಗೆಟ್ಟು ಸಂಚಾರಕ್ಕೆ...

ಕಲಬುರಗಿ ಜಿಲ್ಲೆಯ 4.77 ಲಕ್ಷ ಮತದಾರರು ಎಲ್ಲಿ ಹೋದರು? ಎಸ್‌ಐಆರ್ ವಿರುದ್ಧ ಸಿಪಿಐ ತೀವ್ರ ಆಕ್ರೋಶ

ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಬಳಿಕ ಲಕ್ಷಾಂತರ ಮತದಾರರ ಹೆಸರುಗಳು...