ಉಡುಪಿ | ಮಲ್ಪೆ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣದ ಆರೋಪಿ ಬಂಧನ

Date:

ಉಡುಪಿಯ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಗ್ರಾಮದ ಪಡುಕೆರೆ ದಕ್ಕೆಯಲ್ಲಿ ಲಂಗರು ಹಾಕಲಾಗಿದ್ದ ಬೋಟ್‌ನಲ್ಲಿ ನಡೆದ ಜಗಳ ವಿಕೋಪಕ್ಕೆ ತಿರುಗಿ, ಯುವಕನೊಬ್ಬನನ್ನು ಕೊಲೆ ಮಾಡಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಯನ್ನು ಮಂಗಳವಾರ ಮಲ್ಪೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -

ಆಗಸ್ಟ್ 24ರಂದು ರಾತ್ರಿ ಬೋಟ್‌ನಲ್ಲಿ ಮೀನುಗಾರ ಕಾರ್ಮಿಕರಾದ ಗೋವಿಂದ ಮತ್ತು ಅಭಿಷೇಕ್ ನಡುವೆ ತೀವ್ರ ಗಲಾಟೆ ನಡೆದಿತ್ತು. ಜಗಳದ ಮುಂದುವರಿದ ಭಾಗವಾಗಿ, ಆಗಸ್ಟ್ 25ರಂದು ಬೆಳಗ್ಗೆ ಜಾವ ಗೋವಿಂದ ಎಂಬಾತ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಓಡಿ ಹೋಗಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ತಕ್ಷಣ ಕಾರ್ಯಪ್ರವೃತ್ತರಾದ ಮಲ್ಪೆ ಪೊಲೀಸ್ ಠಾಣೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪನಿರೀಕ್ಷಕ ಅನಿಲ್ ಕುಮಾರ್ ಡಿ. ಹಾಗೂ ಸಿಬ್ಬಂದಿಗಳಾದ ಹೆಚ್.ಸಿ. ಆದರ್ಶ ಮತ್ತು ಪಿಸಿ ಕುಬೇರ ಅವರು ಆರೋಪಿಯ ಪತ್ತೆಗಾಗಿ ಉಡುಪಿಗೆ ಧಾವಿಸಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಮುಂಬೈ ಅಥವಾ ಹೈದರಾಬಾದ್‌ಗೆ ಪರಾರಿಯಾಗುವ ಉದ್ದೇಶದಿಂದ ಉಡುಪಿ ರೈಲ್ವೆ ನಿಲ್ದಾಣದತ್ತ ತೆರಳುತ್ತಿದ್ದ ಆರೋಪಿ ಗೋವಿಂದನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಗೋವಿಂದ ಕಳೆದ ಸುಮಾರು 15 ವರ್ಷಗಳಿಂದ ಮನೆಗೆ ಹೋಗದೆ ಮುಂಬೈ, ಹೈದರಾಬಾದ್ ಸೇರಿದಂತೆ ವಿವಿಧೆಡೆ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಎಂಬುದು ತನಿಖೆಯ ವೇಳೆ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 92/2026ರಂತೆ BNS ಸೆಕ್ಷನ್ 103 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿ ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

ಘಟನೆ ಹಿನ್ನೆಲೆ

ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಆಗಸ್ಟ್ 24ರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಮೀನುಗಾರ ಕಾರ್ಮಿಕರಾದ ಗೋವಿಂದ ಮತ್ತು ಅಭಿಷೇಕ್ ನಡುವೆ ತೀವ್ರ ಗಲಾಟೆ ನಡೆದಿತ್ತು. ಜಗಳದ ಮುಂದುವರಿದ ಭಾಗವಾಗಿ, ಆಗಸ್ಟ್ 25ರಂದು ಬೆಳಗ್ಗೆ ಜಾವ ಗೋವಿಂದ ಎಂಬಾತ ಅಭಿಷೇಕ್‌ನನ್ನು ಕೊಲೆ ಮಾಡಿ ಸ್ಥಳದಿಂದ ಓಡಿ ಹೋಗಿದ್ದ.

ಇದನ್ನೂ ಓದಿದ್ದೀರಾ? ಶಿವಮೊಗ್ಗ | ಕೌಟುಂಬಿಕ ಕಲಹ: 3 ಮಕ್ಕಳೊಂದಿಗೆ ನದಿಗೆ ಹಾರಿದ ತಾಯಿ, ಇಬ್ಬರು ಮಕ್ಕಳು ನೀರು ಪಾಲು

ಹತ್ಯೆಯಾದ ಯುವಕನನ್ನು ಅಭಿಷೇಕ್(24) ಎಂದು ಗುರುತಿಸಲಾಗಿದ್ದು, ಇಂದು ಬೆಳಿಗ್ಗೆ ಸುಮಾರು 5.30ರ ವೇಳೆಗೆ ಬೋಟ್‌ನಲ್ಲಿ ಜೊತೆಗಿದ್ದ ಸಹಕಾರ್ಮಿಕನೇ ಅಭಿಷೇಕ್‌ನನ್ನು ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...

ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ...

ಇಳಕಲ್‌ | ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಕ್ಕೆ SYM ಒತ್ತಾಯ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ!

ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಸಂವಿಧಾನಬದ್ಧ ಮತದಾನದ...

ಅತ್ತು ಕರೆದು ಬೆದರಿಸಿ ರಚ್ಚೆ ಹಿಡಿದರೂ ಟ್ರಂಪ್’ಗೆ ಒಲಿಯಲಿಲ್ಲ ನೊಬೆಲ್ ಪುರಸ್ಕಾರ

ನೊಬೆಲ್ ಶಾಂತಿ ಪುರಸ್ಕಾರ ತಮಗೇ ಸಿಗಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ ಅಮೆರಿಕ...