ಉಡುಪಿ | ಸಹಕಾರ ಸಂಘಗಳು ಬಡವರು, ಮಧ್ಯಮ ವರ್ಗದವರಿಗೆ ಆರ್ಥಿಕ ಆಸರೆ : ಸಚಿವ ರಿಝ್ವಾನ್ ಅರ್ಷದ್

Date:

ಸಹಕಾರ ವ್ಯವಸ್ಥೆ ಜನರ ಸಮಸ್ಯೆಗಳನ್ನು ಅರಿತು, ಪರಸ್ಪರ ನೆರವಿನ ಮೂಲಕ ಸಮಾಜದ ಆರ್ಥಿಕ ಪ್ರಗತಿಗೆ ಕೊಡುಗೆ ನೀಡುವ ಮಹತ್ವದ ವ್ಯವಸ್ಥೆಯಾಗಿದೆ. ಸಹಕಾರ ಸಂಘಗಳು ಇಲ್ಲದಿದ್ದರೆ ಬಡವರು, ಮಧ್ಯಮ ವರ್ಗದವರು, ರೈತರು ಹಾಗೂ ಸಣ್ಣ ವ್ಯಾಪಾರಿಗಳು ಆರ್ಥಿಕ ನೆರವಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗುತ್ತಿತ್ತು ಎಂದು ಸಚಿವ ರಿಝ್ವಾನ್ ಅರ್ಷದ್ ಹೇಳಿದರು.

- Advertisement -
WhatsApp Image 2026 11 01 at 10.24.55 PM 1

ಉಡುಪಿಯ ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘ ನಿಯಮಿತದ ನವೀಕೃತ ಕಾರ್ಯಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಹಾಡಿನ ಮೂಲಕ ಅಭಿವ್ಯಕ್ತಿಸುವ ಸೋಬಾನೆ ಪದಗಳ ಗಾಯನಕ್ಕೆ ದಶಕಗಳಿಂದ ತಮ್ಮ ಬದುಕನ್ನೇ ಮುಡಿಪಾಗಿಟ್ಟಿರುವ ಚಾಮರಾಜನಗರದ ಹಿರಿಯ ಜಾನಪದ...

ನವೆಂಬರ್ 1 | ಕರ್ನಾಟಕ ರಾಜ್ಯೋತ್ಸವ ಮಾತ್ರವಲ್ಲ; ಭಾರತದ...

ನವೆಂಬರ್ 1 ಕನ್ನಡಿಗರ ಹೆಮ್ಮೆಯ ಕರ್ನಾಟಕ ರಾಜ್ಯೋತ್ಸವ. ಇದೇ ದಿನ ದೇಶದ ಎಂಟು ರಾಜ್ಯಗಳು ಮತ್ತು ಐದು ಕೇಂದ್ರಾಡಳಿತ ಪ್ರದೇಶಗಳ ರಚನೆ, ಮರುರಚನೆ ಹಾಗೂ ವಿಮೋಚನೆಯ ಇತಿಹಾಸವೂ ಇದೆ. ಭಾಷಾವಾರು ರಾಜ್ಯಗಳಿಗಾಗಿ ನಡೆದ...

ರಾಜ್ಯೋತ್ಸವ ವಿಶೇಷ | ಕನ್ನಡಕ್ಕೊಂದು ವಿಜ್ಞಾನದ ಓದು

ವಿಜ್ಞಾನ ಓದು ಎಂದರೇನು? ಕನ್ನಡಕ್ಕಾಗಿ ಅಂತಹದೊಂದು ಬೇಕಾ? ಇಂತಹದ್ದೊಂದರ ಚರ್ಚೆ ಇಂದಿನ ಅಗತ್ಯಗಳಲ್ಲೊಂದು. ಏಕೆಂದರೆ ನಮ್ಮಲ್ಲಿ ಓದು ಎನ್ನುವುದು ಬಹುಪಾಲು ಸಾಹಿತ್ಯಕವಾದ ಓದೇ ಆಗಿದೆ. ಸಾಹಿತ್ಯದಲ್ಲಿ ಸಹಜವಾಗಿ ಕಾಣಬರುವ ಒಂದು ಬಗೆಯ ಎಲ್ಲವೂ...

ಸಹಕಾರ ವ್ಯವಸ್ಥೆ ಇಂದಿನ ವ್ಯವಸ್ಥೆಯಲ್ಲ. ಸ್ವಾತಂತ್ರ್ಯಾನಂತರ ದೇಶದ ಆರ್ಥಿಕ ಪರಿಸ್ಥಿತಿ ಸವಾಲುಗಳಿಂದ ಕೂಡಿದ್ದ ಸಂದರ್ಭದಲ್ಲಿ ಜನರ ಸಹಭಾಗಿತ್ವದ ಮೂಲಕ ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಹಕಾರ ವ್ಯವಸ್ಥೆಗೆ ಮಹತ್ವ ನೀಡಲಾಯಿತು. ಸರಕಾರವೊಂದರಿಂದಲೇ ಎಲ್ಲ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯವಿಲ್ಲ. ಜನರೇ ಪರಸ್ಪರ ಸಹಕರಿಸಿ, ತಮ್ಮ ಸಮಸ್ಯೆಗಳನ್ನು ಅರ್ಥಮಾಡಿಕೊಂಡು, ಅಗತ್ಯಕ್ಕೆ ತಕ್ಕಂತೆ ಕಾರ್ಯಕ್ರಮಗಳನ್ನು ರೂಪಿಸಿ ಅವುಗಳಿಗೆ ಆರ್ಥಿಕ ನೆರವು ಒದಗಿಸುವ ವ್ಯವಸ್ಥೆ ಬೆಳೆಸಬೇಕೆಂಬ ದೃಷ್ಟಿಕೋನ ಇದರ ಹಿಂದಿತ್ತು ಎಂದರು.

WhatsApp Image 2026 11 01 at 10.24.56 PM

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರು ಸಹಕಾರ ವ್ಯವಸ್ಥೆಗೆ ಭದ್ರ ಬುನಾದಿ ಹಾಕುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯಾನಂತರ ದೇಶದ ಜನಸಂಖ್ಯೆ, ಆರ್ಥಿಕ ಪರಿಸ್ಥಿತಿ ಹಾಗೂ ದೇಶದ ಮುಂದಿದ್ದ ಸವಾಲುಗಳನ್ನು ಗಮನದಲ್ಲಿಟ್ಟುಕೊಂಡು ಇಂತಹ ಪರ್ಯಾಯ ವ್ಯವಸ್ಥೆಗಳಿಗೆ ಪ್ರೋತ್ಸಾಹ ನೀಡಲಾಯಿತು. ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿದ ಹಿರಿಯರ ಸಾಧನೆ ಮತ್ತು ಅವರು ತೋರಿದ ಮಾರ್ಗದರ್ಶನವನ್ನು ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.

ತಮ್ಮ ಪೂರ್ವಜರ ಕೊಡುಗೆ ಹಾಗೂ ಅವರು ತೋರಿದ ಉತ್ತಮ ಮಾರ್ಗವನ್ನು ಮರೆಯುವ ಸಮಾಜ ಕೃತಜ್ಞತೆಯುಳ್ಳ ಸಮಾಜವಾಗಲು ಸಾಧ್ಯವಿಲ್ಲ. ಹಿಂದಿನವರು ಮಾಡಿದ ಒಳ್ಳೆಯ ಕಾರ್ಯಗಳನ್ನು ಅರ್ಥಮಾಡಿಕೊಂಡು, ಅವುಗಳಿಂದ ಸಮಾಜಕ್ಕೆ ದೊರೆತ ಪ್ರಯೋಜನಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಅವರು ಅಭಿಪ್ರಾಯಪಟ್ಟರು.

WhatsApp Image 2026 11 01 at 10.24.56 PM 1

ಸಹಕಾರ ಸಂಘಗಳು ಕೇವಲ ದಾಖಲೆಗಳನ್ನು ಆಧರಿಸಿ ವ್ಯವಹಾರ ನಡೆಸುವುದಿಲ್ಲ. ವ್ಯಕ್ತಿಯ ಹಿನ್ನೆಲೆ, ಆರ್ಥಿಕ ಪರಿಸ್ಥಿತಿ ಹಾಗೂ ಅಗತ್ಯಗಳನ್ನು ಅರ್ಥಮಾಡಿಕೊಂಡು ನೆರವು ನೀಡುತ್ತವೆ. ವಿಶೇಷವಾಗಿ ಸಣ್ಣ ವ್ಯಾಪಾರಿಗಳಿಗೆ ಆರ್ಥಿಕ ನೆರವು ಒದಗಿಸುವ ಮೂಲಕ ಅವರ ಉದ್ಯಮ ಮತ್ತು ಜೀವನೋಪಾಯಕ್ಕೆ ಬೆಂಬಲ ನೀಡುತ್ತವೆ. ಹೀಗಾಗಿ ಸಹಕಾರ ಸಂಘಗಳಿಗೆ ಇನ್ನಷ್ಟು ಶಕ್ತಿ ತುಂಬುವ ಕೆಲಸವಾಗಬೇಕು ಎಂದರು.

ಆದರ್ಶ ಗ್ರಾಹಕರ ವಿವಿಧೋದ್ದೇಶ ಸಹಕಾರ ಸಂಘವು ಕಳೆದ 39 ವರ್ಷಗಳಿಂದ ತನ್ನ ಅಸ್ತಿತ್ವವನ್ನು ಉಳಿಸಿಕೊಂಡು ಜನರಿಗೆ ಸೇವೆ ಸಲ್ಲಿಸುತ್ತಿರುವುದು ಶ್ಲಾಘನೀಯ. ಹಿರಿಯರು ಹಾಕಿಕೊಟ್ಟ ಭದ್ರ ಬುನಾದಿಯನ್ನು ಮುಂದುವರಿಸಿಕೊಂಡು, ಜನರ ವಿಶ್ವಾಸವನ್ನು ಉಳಿಸಿಕೊಳ್ಳುವ ಮೂಲಕ ಸಂಘವು ಇನ್ನಷ್ಟು ಅಭಿವೃದ್ಧಿ ಹೊಂದಬೇಕು. ಈ ಬ್ಯಾಂಕ್ ಮುಂದಿನ ಪೀಳಿಗೆಗೂ ಆದರ್ಶವಾಗಿ ಬೆಳೆಯಲಿ ಎಂದು ಹಾರೈಸಿದರು.

ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ ಸಮಾರಂಭದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಸಂಘದ ಅಧ್ಯಕ್ಷ ರೆನೋಲ್ಡ್ ಪ್ರವೀಣ್ ಕುಮಾರ್ ಅತಿಥಿಗಳನ್ನು ಸ್ವಾಗತಿಸಿದರು.

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ. ಗಫೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉದ್ಯಮಿ ಪುರುಷೋತ್ತಮ ಶೆಟ್ಟಿ, ಸಂಘದ ಉಪಾಧ್ಯಕ್ಷ ಜಯನ್ ಮಲ್ಪೆ, ನಿರ್ದೇಶಕರಾದ ಕೆ. ಕೃಷ್ಣಮೂರ್ತಿ ಆಚಾರ್ಯ, ಬಿ.ಎಲ್. ನರಸಿಂಹಸ್ವಾಮಿ, ಹರಿದಾಸ ಭಟ್, ಶಾಮ ಶೆಟ್ಟಿ, ಶೇಖರ ಶೆಟ್ಟಿ, ಜಿತೇಶ್ ಕುಮಾರ್, ಮಹಮ್ಮದ್ ರಫೀಕ್ ಖಾನ್, ರವಿಪ್ರಕಾಶ್, ಅನಂತ ನಾಯ್ಕ, ಸುಲೋಚನ ದಾಮೋದರ್, ವಿನಯ ಪ್ರಕಾಶ್ ಹಾಗೂ ಕಾರ್ಯದರ್ಶಿ ಜಲೇಂದ್ರ ಕೋಟ್ಯಾನ್ ಉಪಸ್ಥಿತರಿದ್ದರು. ಸ್ಟೀವನ್ ಕುಲಾಸೊ ಕಾರ್ಯಕ್ರಮ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ನಾನು ಮುಂದೆ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ‌, ಸಚಿವರಾಗುವುದು ಖಚಿತ : ವರ್ತೂರ್ ಪ್ರಕಾಶ್

ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಬಿಜೆಪಿ ಗೆಲುವು ಸಾಧಿಸುವ...

ಗ್ರಾಮೀಣ ಜಾನಪದ ಪರಂಪರೆಯನ್ನು ಜೀವಂತವಾಗಿರಿಸಿದ ಚಾಮರಾಜನಗರದ ಗೌರಮ್ಮ

ಹಳ್ಳಿಗಳ ಮಣ್ಣಿನ ಸೊಗಡು, ಮಹಿಳೆಯರ ಬದುಕಿನ ಅನುಭವ, ಕುಟುಂಬದ ಸಂಪ್ರದಾಯ ಮತ್ತು...

ರಾಯಚೂರು | ಕೌಟುಂಬಿಕ ಕಲಹ: ದಂಪತಿ ಸೇರಿ ಇಬ್ಬರು ಮಕ್ಕಳು ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಗಂಡ, ಹೆಂಡತಿ ಇಬ್ಬರು ಮಕ್ಕಳು ಸೇರಿ ನಾಲ್ವರು...

‘ಪ್ರಜಾಸೇವೆ’ ಆಂದೋಲನ ಜನಪರ ಕಾರ್ಯಕ್ರಮ- ಸಿ. ಪುಟ್ಟರಂಗಶೆಟ್ಟಿ

ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿ, ಅವರ...