ಉಡುಪಿ | ಹಸಿರಲೆ ಗೊಬ್ಬರ ಬಳಕೆಯಿಂದ ಮಣ್ಣಿನ ಆರೋಗ್ಯ ವೃದ್ಧಿ

Date:

ಕೃಷಿಯಲ್ಲಿ ಗುಣಮಟ್ಟದ ಆಹಾರ ಉತ್ಪಾದನೆ ಹಾಗೂ ಮಣ್ಣಿನ ಫಲವತ್ತತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರವು ಸಮಗ್ರ ಪೋಷಕಾಂಶ ನಿರ್ವಹಣೆಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಮಣ್ಣಿನ ಆರೋಗ್ಯವನ್ನು ಕಾಪಾಡಲು ಹಾಗೂ ಸಾವಯವ ಇಂಗಾಲದ ಪ್ರಮಾಣವನ್ನು ಹೆಚ್ಚಿಸಲು ಹಸಿರಲೆ ಗೊಬ್ಬರ ಬೀಜಗಳ ಬಳಕೆ ಅತ್ಯಂತ ಪರಿಣಾಮಕಾರಿ ಎಂದು ಕೃಷಿ ಇಲಾಖೆ ತಿಳಿಸಿದೆ.

- Advertisement -

ರಾಜ್ಯದ ವಿವಿಧ ಜಿಲ್ಲೆಗಳ ಮಣ್ಣಿನಲ್ಲಿ ಸಾವಯವ ಅಂಶವು ನಿರಂತರವಾಗಿ ಕಡಿಮೆಯಾಗುತ್ತಿದ್ದು, ಸುಮಾರು 58 ಲಕ್ಷ ಹೆಕ್ಟೇರ್ ಕೃಷಿ ಭೂಮಿಯ ಮಣ್ಣಿನಲ್ಲಿ ಶೇ.0.5 ಕ್ಕಿಂತ ಕಡಿಮೆ ಸಾವಯವ ಇಂಗಾಲ ಇರುವುದನ್ನು ಮಣ್ಣು ಮಾದರಿಗಳ ವಿಶ್ಲೇಷಣೆ ದೃಢಪಡಿಸಿದೆ. ಇದರಿಂದ ಮಣ್ಣಿನ ಆರೋಗ್ಯ ಕ್ಷೀಣಿಸುತ್ತಿರುವ ಹಿನ್ನೆಲೆಯಲ್ಲಿ ಸಾವಯವ ಇಂಗಾಲದ ಪ್ರಮಾಣ ಹೆಚ್ಚಿಸುವುದು ಅನಿವಾರ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

ಸೆಣಬು, ಡಯಾಂಚಾ, ಉದ್ದು, ಹೆಸರು, ಅಲಸಂದಿ, ಹುರುಳಿ ಹಾಗೂ ವೆಲ್ವೆಟ್ ಬೀನ್ಸ್‌ ಮೊದಲಾದ ಹಸಿರು ಗೊಬ್ಬರ ಬೆಳೆಗಳನ್ನು ಬೆಳೆಸಿ ಮಣ್ಣಿಗೆ ಸೇರಿಸುವುದರಿಂದ ಸಾವಯವ ಅಂಶದ ಪ್ರಮಾಣ ಹೆಚ್ಚುತ್ತದೆ. ಒಣಭೂಮಿಯಲ್ಲಿ ದ್ವಿದಳ ಧಾನ್ಯಗಳನ್ನು ಹಾಗೂ ತೇವಾಂಶಯುಕ್ತ ಭೂಮಿಯಲ್ಲಿ ಹಸಿರಲೆ ಗೊಬ್ಬರ ಬೆಳೆಗಳನ್ನು ಬೆಳೆಯುವುದು ಹೆಚ್ಚು ಪರಿಣಾಮಕಾರಿ ಎಂದು ಇಲಾಖೆ ತಿಳಿಸಿದೆ.

ಹಸಿರು ಗೊಬ್ಬರ ಬೆಳೆಗಳು ಮಣ್ಣಿನಲ್ಲಿ ಸಾವಯವ ಕಾರ್ಬನ್ ಹೆಚ್ಚಿಸಿ ಅದರ ರಚನೆಯನ್ನು ಸುಧಾರಿಸುತ್ತವೆ. ದ್ವಿದಳ ವರ್ಗದ ಬೆಳೆಗಳು ವಾತಾವರಣದಲ್ಲಿರುವ ಸಾರಜನಕವನ್ನು ಸ್ಥಿರೀಕರಿಸಿ ಮಣ್ಣಿಗೆ ಒದಗಿಸುವುದರಿಂದ ರಾಸಾಯನಿಕ ಯೂರಿಯಾ ಬಳಕೆಯನ್ನು ಕಡಿಮೆ ಮಾಡಬಹುದು. ಜೊತೆಗೆ ಮಣ್ಣಿನಲ್ಲಿರುವ ಪ್ರಯೋಜನಕಾರಿ ಸೂಕ್ಷ್ಮಜೀವಿಗಳ ಚಟುವಟಿಕೆ ಹೆಚ್ಚಾಗಿ ಪೋಷಕಾಂಶಗಳ ಲಭ್ಯತೆ ಸುಧಾರಿಸುತ್ತದೆ.

ಸಾವಯವ ಪದಾರ್ಥಗಳ ಪ್ರಮಾಣ ಹೆಚ್ಚುವುದರಿಂದ ಮಣ್ಣಿನ ನೀರು ಹಿಡಿದಿಡುವ ಸಾಮರ್ಥ್ಯ ವೃದ್ಧಿಯಾಗಿ ಬರ ಪರಿಸ್ಥಿತಿಯಲ್ಲಿಯೂ ಬೆಳೆಗಳಿಗೆ ನೆರವಾಗುತ್ತದೆ. ಹಸಿರು ಗೊಬ್ಬರ ಬೆಳೆಗಳ ಬೇರುಗಳು ಮಣ್ಣನ್ನು ಸಡಿಲಗೊಳಿಸಿ ಗಾಳಿ ಮತ್ತು ನೀರಿನ ಸಂಚಾರವನ್ನು ಸುಧಾರಿಸುವ ಮೂಲಕ ಬೆಳೆ ಬೆಳವಣಿಗೆಗೆ ಅನುಕೂಲಕರ ವಾತಾವರಣ ನಿರ್ಮಿಸುತ್ತವೆ.

ಹಸಿರು ಗೊಬ್ಬರ ಬಳಕೆಯಿಂದ ರಾಸಾಯನಿಕ ಗೊಬ್ಬರಗಳ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜೊತೆಗೆ ಉತ್ಪಾದನಾ ವೆಚ್ಚವೂ ತಗ್ಗುತ್ತದೆ. ಬೆಳೆಗಳ ಇಳುವರಿ ಮತ್ತು ಗುಣಮಟ್ಟ ಹೆಚ್ಚುವುದಲ್ಲದೆ ಪರಿಸರ ಮಾಲಿನ್ಯವೂ ಕಡಿಮೆಯಾಗುತ್ತದೆ. ದೀರ್ಘಕಾಲದ ಮಣ್ಣಿನ ಫಲವತ್ತತೆಯನ್ನು ಕಾಪಾಡುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ.

ವಿಶೇಷವಾಗಿ ಅಕ್ಕಿ, ಕಬ್ಬು ಹಾಗೂ ವಿವಿಧ ತೋಟಗಾರಿಕಾ ಬೆಳೆಗಳಲ್ಲಿ ಹಸಿರು ಗೊಬ್ಬರದ ಬಳಕೆ ಉತ್ತಮ ಫಲಿತಾಂಶ ನೀಡುತ್ತಿರುವ ಹಿನ್ನೆಲೆಯಲ್ಲಿ ರೈತರು ಹೆಚ್ಚಿನ ಪ್ರಮಾಣದಲ್ಲಿ ಹಸಿರಲೆ ಗೊಬ್ಬರ ಬೀಜಗಳನ್ನು ಬಳಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿ ಪ್ರಕಟಣೆಯಲ್ಲಿ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....

ಶಿವಮೊಗ್ಗದಲ್ಲಿ ಪರೀಕ್ಷಾ ಅಕ್ರಮ: KSOU ಕೇಂದ್ರದಲ್ಲಿ ಪುಸ್ತಕ, ಮೊಬೈಲ್ ಬಳಸಿ ‘ಕಾಪಿ’ ಮಾಡಲು ಅವಕಾಶ; ವಿಡಿಯೋ ವೈರಲ್

ಶಿವಮೊಗ್ಗದಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ (KSOU) ಪ್ರಾದೇಶಿಕ ಪರೀಕ್ಷಾ ಕೇಂದ್ರದಲ್ಲಿ...

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...