ಉಡುಪಿ | ಎಸ್‌ಐಆರ್ (SIR) ಅನ್ನು ನಿರ್ಲಕ್ಷ್ಯಿಸಬೇಡಿ: ಎಲ್ಲಾ ಜಮಾಅತ್‌ಗಳಲ್ಲಿ ಜಾಗೃತಿ ಮೂಡಿಸಿ : ಕುಂಬೋಳ್ ತಂಙಳ್ ಕರೆ

Date:

ಉಡುಪಿ ಜಿಲ್ಲಾ ಸಂಯುಕ್ತ ಜಮಾಅತ್ ಸಮಿತಿ ವತಿಯಿಂದ ಮೂಳೂರು ಅಲ್ ಇಹ್ಸಾನ್ ಶಾಲಾ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಮಾಅತ್ ಅಸ್ಸೆಂಬ್ಲೇಜ್ ಕಾರ್ಯಕ್ರಮದಲ್ಲಿ ಮಾತನಾಡಿದ ಕುಂಬೋಳ್ ತಂಙಳ್, ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ಯಾರೂ ನಿರ್ಲಕ್ಷ್ಯಿಸಬಾರದು ಎಂದು ಕರೆ ನೀಡಿದರು.

- Advertisement -

ಪ್ರತಿಯೊಂದು ಜಮಾಅತ್, ಮೊಹಲ್ಲಾ ಹಾಗೂ ಸ್ಥಳೀಯ ಸಮಿತಿಗಳಲ್ಲಿ ಎಸ್‌ಐಆರ್ ಕುರಿತು ಜನರಿಗೆ ಸರಿಯಾದ ಮಾಹಿತಿ ನೀಡಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ಉಳಿಸಿಕೊಳ್ಳಲು ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಸಲ್ಲಿಸುವಂತೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಎಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಅದೇ ರೀತಿ, ತಲಾಕ್, ಫಸ್ಕ್ ಹಾಗೂ ಇತರ ವೈಯಕ್ತಿಕ ಮತ್ತು ಸಾಮೂಹಿಕ ಸಮಸ್ಯೆಗಳಿಗೆ ಆಯಾ ಜಮಾಅತ್‌ಗಳಲ್ಲಿಯೇ ಪರಿಹಾರ ಕಂಡುಕೊಳ್ಳುವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದ ಅವರು, ಜಮಾಅತ್ ಮಟ್ಟದಲ್ಲಿಯೇ ಬಗೆಹರಿಸಬಹುದಾದ ಸಮಸ್ಯೆಗಳಿಗಾಗಿ ಅನಗತ್ಯವಾಗಿ ಕೋರ್ಟ್ ಹಾಗೂ ಪೊಲೀಸ್ ಠಾಣೆಗಳಿಗೆ ಅಲೆದಾಡುವ ಪರಿಸ್ಥಿತಿಗೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕ್ಕರ್ ನೇಜಾರು ವಹಿಸಿದ್ದರು. ಉಡುಪಿ ಜಿಲ್ಲಾ ಸಹಾಯಕ ಖಾಝಿ ಬಹು. ಅಬ್ದುರ್ರಹ್ಮಾನ್ ಮದನಿ ಮೂಳೂರು ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಮೊಹಲ್ಲಾ ಆಡಳಿತ ಎಂಬ ವಿಷಯದ ಬಗ್ಗೆ ಬಹು ಹಂಝ ಮದನಿ ಮಿತ್ತೂರು ಹಾಗೂ ನಮ್ಮ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬ ಹಿರಿಯ ಪೊಲೀಸ್ ಅಧಿಕಾರಿ ಅಬ್ದುರಝಾಕ್ ವಿಷಯ ಮಂಡಿಸಿದರು, ಯು.ಕೆ. ಮುಸ್ತಫಾ ಸಅದಿ ಮೂಳೂರು ಮುನ್ನುಡಿ ಭಾಷಣ ಮಾಡಿದರು. ಚರ್ಚಾಗೋಷ್ಠಿಗೆ ಕೆ.ಎ. ಅಬ್ದುರ್ರಹ್ಮಾನ್ ರಝ್ವಿ ಅಲ್ ಫುರ್ಖಾನಿ ಕಲ್ಕಟ್ಟ ನೇತೃತ್ವ ನೀಡಿದರು.

ಜಿಲ್ಲಾ ಉಲಮಾ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಮದನಿ ಮಾವಿನಕಟ್ಟೆ, ಸುಲೈಮಾನ್ ಸಅದಿ ಅಫ್ಳಲಿ ಕಾರ್ಕಳ, ಹಾಫಿಳ್ ಅಶ್ರಫ್ ಸಖಾಫಿ ಮೂಳೂರು, ಅಬ್ದುಲ್ ಲತೀಫ್ ಫಾಳಿಲಿ ನಾವುಂದ ಹಾಗೂ ಅಬ್ದುರ್ರಶೀದ್ ಸಖಾಫಿ ಮಜೂರು ಸಾಂದರ್ಭಿಕವಾಗಿ ಮಾತನಾಡಿದರು.

ಎಸ್‌ಜೆಎಂ ಜಿಲ್ಲಾಧ್ಯಕ್ಷ ಅಬ್ದುರ್ರಝಾಖ್ ಖಾಸಿಮಿ, ಎಸ್‌ಎಂಎ ಜಿಲ್ಲಾಧ್ಯಕ್ಷ ಹುಸೈನ್ ಮೋನು, ಹಾಜಿ ಪಿ.ಎಚ್. ಉಸ್ಮಾನ್, ಮುರಾದ್ ಅಲಿ ಮೂಳೂರು, ಮನ್ಸೂರು ಮೆಕ್ಕಾಸ್ ಸೇರಿದಂತೆ ಅನೇಕ ಪ್ರಮುಖರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಜಿ ಎಂ.ಎ. ಬಾವು ಮೂಳೂರು ಸ್ವಾಗತಿಸಿದರು. ಅಶ್ರಫ್ ಫುರ್ಖಾನಿ ಕಾರ್ಯಕ್ರಮ ನಿರೂಪಿಸಿ, ಎನ್.ಸಿ. ರಹೀಂ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...