ಉಡುಪಿ | ಭೀಮಯಾನ ರ‍್ಯಾಲಿ: ನೀಲಿ ಭಾವುಟಗಳಿಂದ ನಗರ ಕಂಗೊಳಿಸಿದ ಅಂಬೇಡ್ಕರ್ ಜಯಂತಿ ಆಚರಣೆ

Date:

ಸಂವಿಧಾನ ಶಿಲ್ಪಿ ಡಾ. ಭೀಮರಾವ್ ರಾಮ್‌ಜೀ ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅಂಗವಾಗಿ ಅಂಬೇಡ್ಕರ್ ಯುವಸೇನೆ, ದಸಂಸ, ಎಸ್‌ಸಿ-ಎಸ್‌ಟಿ ಗುತ್ತಿಗೆದಾರರ ಸಂಘ ಹಾಗೂ ಬೋವಿ-ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ಭವ್ಯ ಭೀಮಯಾನ ವಾಹನ ರ‍್ಯಾಲಿ ಮಲ್ಪೆಯಲ್ಲಿ ಜರುಗಿತು.

- Advertisement -

ವಡಭಾಂಡೇಶ್ವರದಿಂದ ಆರಂಭವಾದ ರ‍್ಯಾಲಿಗೆ ದಲಿತ ಚಿಂತಕ ಹಾಗೂ ಹೋರಾಟಗಾರ ಜಯನ್ ಚಾಲನೆ ನೀಡಿದರು. ಅಂಬೇಡ್ಕರ್ ಅವರ ಭಾವಚಿತ್ರವನ್ನು ಅಲಂಕರಿಸಿದ ರಥ, ಚೆಂಡೆ, ನಾಸಿಕ್ ಬ್ಯಾಂಡ್, ವಿವಿಧ ಟ್ಯಾಬ್ಲೋ ವಾಹನಗಳೊಂದಿಗೆ ಸುಮಾರು 300ಕ್ಕೂ ಹೆಚ್ಚು ಬೈಕ್, ಕಾರು, ರಿಕ್ಷಾ ಮತ್ತು ಜೀಪುಗಳು ನೀಲಿ ಭಾವುಟಗಳನ್ನು ಕಟ್ಟಿಕೊಂಡು ಮಲ್ಪೆಯಿಂದ ಉಡುಪಿ ನಗರದ ಬೀದಿ ಬೀದಿಗಳಲ್ಲಿ ಸಂಚರಿಸಿತು. ರ‍್ಯಾಲಿ ಅಜ್ಜರಕಾಡು ಭುಜಂಗ ಪಾರ್ಕ್‌ನಲ್ಲಿ ಸಮಾಪ್ತಿಗೊಂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ರ‍್ಯಾಲಿಯಲ್ಲಿ ಸಂಧ್ಯಾ ತಿಲಕ್, ಸಮಾಜಸೇವಕ ಶಶಿಧರ್, ಮಲ್ಪೆ ಠಾಣಾಧಿಕಾರಿ ಅನಿಲ್ ಕುಮಾರ್, ಬಾಲಕೃಷ್ಣ, ನಿವೃತ್ತ ಪ್ರಿನ್ಸಿಪಾಲ್ ಜಗದೀಶ್, ಪರ್ಕಳ ಹರೀಶ್ ಸಲ್ಯಾನ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷ ಗಣೇಶ್ ನೆರ್ಗಿ, ದಸಂಸ ಜಿಲ್ಲಾ ಪ್ರಧಾನ ಸಂಚಾಲಕ ವಾಸುದೇವ ಮುದ್ದೂರು, ಎಸ್‌ಸಿ-ಎಸ್‌ಟಿ ಗುತ್ತಿಗೆದಾರರ ಸಂಘದ ಜಿಲ್ಲಾಧ್ಯಕ್ಷ ಪರಮೇಶ್ವರ ಉಪ್ಪೂರು, ಬೋವಿ-ವಡ್ಡರ್ ಕ್ಷೇಮಾಭಿವೃದ್ಧಿ ಸಂಘದ ಈಶ್ವರ ಹಾಗೂ ಶಿವಕುಮಾರ್ ಪರ್ಕಳ ಉಪಸ್ಥಿತರಿದ್ದರು.

ದಲಿತ ಮುಖಂಡರಾದ ದಯಾಕರ ಮಲ್ಪೆ, ಪ್ರಸಾದ್ ನೆರ್ಗಿ, ಸುಶೀಲ್ ಕೊಡವೂರು, ಸಂತೋಷ್ ಕಪ್ಪೆಟ್ಟು, ಕಮಲಾಕ್ಷ ಚೇರ್ಕಾಡಿ, ನಾರಾಯಣ ಪರ್ಕಳ, ಪ್ರಮೀಣ್ ಕದ್ರಿಪದವು, ಉಮೇಶ್ ಬೈಂದೂರು, ಭಾಸ್ಕರ್ ನಾಯ್ಕ, ಆನಂದ ಬೆಳ್ಳಾರೆ, ರಾಮ ನಾಯ್ಕ, ಲಕ್ಷ್ಮಣ ಬೈಂದೂರು, ರಾಮ ಮೈಯಾಡಿ, ನವೀನ್ ಬನ್ನಂಜೆ ಸೇರಿದಂತೆ ಅನೇಕರು ಭಾಗವಹಿಸಿದರು.

ಸಮಾರೋಪ ಸಮಾರಂಭದಲ್ಲಿ ಮಾಜಿ ಲೋಕಸಭಾ ಸದಸ್ಯ ಜಯಪ್ರಕಾಶ್ ಹೆಗ್ಡೆ, ಸಮಾಜಸೇವಕರಾದ ಕೃಷ್ಣಮೂರ್ತಿ, ರಮೇಶ್ ಕಾಂಚನ್, ಅಮೃತ ಕೃಷ್ಣಮೂರ್ತಿ, ಶೇಖರ್ ಪೂಜಾರಿ, ರಾಘವೇಂದ್ರ ನಾಯ್ಕ ಮತ್ತಿತರರು ಉಪಸ್ಥಿತರಿದ್ದರು. ದಯಾಕರ ಸ್ವಾಗತಿಸಿ, ಸುಕೇಶ್ ನಿಟ್ಟೂರು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....