ಉಡುಪಿ | ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲ : ಶಾಸಕ ಕಿರಣ್ ಕುಮಾರ್ ಕೊಡ್ಗಿ

Date:

ಸಹಕಾರಿ ಸಂಘಗಳು ಸ್ಥಳೀಯ ಜನರಿಗೆ ಸುಲಭವಾಗಿ ಸಾಲ ಸೌಲಭ್ಯ ಹಾಗೂ ಉತ್ತಮ ಸೇವೆಗಳನ್ನು ಒದಗಿಸುವ ಮೂಲಕ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಯುತ್ತಿವೆ. ಸಹಕಾರಿ ಸಂಘಗಳ ಬೆಳವಣಿಗೆಯಿಂದ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲವಾಗುತ್ತಿದೆ ಎಂದು ಶಾಸಕ ಕಿರಣ್ ಕುಮಾರ್ ಕೊಡ್ಗಿ ಹೇಳಿದರು.

- Advertisement -

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಉಡುಪಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘ ಬೀಜಾಡಿ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಕೋಟೇಶ್ವರ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಜರಗಿದ 73ನೇ ಅಖಿಲ ಭಾರತ ಸಹಕಾರ ಸಪ್ತಾಹ ಸಮಾರಂಭ ಹಾಗೂ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ವತಿಯಿಂದ ಮಹಿಳಾ ಮೀನುಗಾರರ ಸ್ವ-ಸಹಾಯ ಗುಂಪುಗಳಿಗೆ ಸಾಲ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಈ ದಿನ ಕವಿತೆ | ನಾನು, ರಸ್ತೆ ಹಾಗೂ...

ವಾರಕ್ಕೊಂದು ಅನುವಾದಿತ ಕವಿತೆ ಮಾಲಿಕೆಯಲ್ಲಿ ಈ ಬಾರಿ ಮರಾಠಿ ಕವಿ ವಸಂತ್ ಆಬಾಜಿ ದಹಾಕೆ ಅವರ "ನಾನು, ರಸ್ತೆ ಹಾಗೂ ಕಪ್ಪು ಹಕ್ಕಿ" ಕವಿತೆಯನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ ಹಿರಿಯ ಅನುವಾದಕಿ ಸಿ...

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ...

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ ಹೆಸರಾಂತ ಗಜಾನನ ಬಸ್ ಸಂಸ್ಥೆ ಒಂದು ಕಾಲದಲ್ಲಿ ಸುಮಾರು 150ಕ್ಕೂ ಹೆಚ್ಚು ಬಸ್‌ಗಳ ಮೂಲಕ ಜನಪ್ರಿಯತೆ ಗಳಿಸಿತ್ತು. ಸಂಸ್ಥೆಯ ಬೆಳವಣಿಗೆಯಲ್ಲಿ...

ರಾಜಕೀಯ ಪಕ್ಷಗಳಿಗೆ ಪ್ರವೇಶವಿಲ್ಲ: ಚುನಾವಣೆ ಬಹಿಷ್ಕರಿಸಿದ ಹೊನ್ನಗುಂಡಿ ಗ್ರಾಮಸ್ಥರು!

ಅದೆಷ್ಟೋ ಚುನಾವಣೆ ನಡೆದು ಹೋದವು, ಆದರೆ ನಮ್ಮೂರಿಗೆ ಮೂಲಭೂತ ಸೌಕರ್ಯಗಳಿಲ್ಲ. ಕನಿಷ್ಠ ಸೌಲಭ್ಯವಾದ ಡಾಂಬರ್ ರಸ್ತೆ ಕಾಣದೆ ಅದೆಷ್ಟೋ ವರ್ಷ ಕಳೆದಿದೆ. ನಮ್ಮ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ ಯಾವ ರಾಜಕೀಯ ಪಕ್ಷಗಳು...
WhatsApp Image 2026 11 20 at 9.27.41 PM 2

ಮುಂದುವರೆದು ಮಾತನಾಡಿದ ಅವರು, ಸಹಕಾರಿ ಕ್ಷೇತ್ರದ ಜನಕ ಮೊಳಹಳ್ಳಿ ಶಿವರಾಮ್ ರನ್ನು ಸ್ಮರಿಸಿ, ಹಿಂದಿನ ದಿನಗಳಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘಗಳು ಮುಖ್ಯವಾಗಿ ಕೃಷಿ ಸಾಲ ವಿತರಣೆಗೆ ಸೀಮಿತವಾಗಿದ್ದವು. ಆದರೆ, ಆಡಳಿತ ಮಂಡಳಿ ಮತ್ತು ಸಿಬ್ಬಂದಿಯ ಉತ್ತಮ ಕಾರ್ಯನಿರ್ವಹಣೆ, ಸದಸ್ಯರೊಂದಿಗೆ ಹೊಂದಿರುವ ಆತ್ಮೀಯ ಒಡನಾಟ ಹಾಗೂ ಸುಲಭ ಸಾಲ ಸೌಲಭ್ಯಗಳಿಂದಾಗಿ ಇಂದು ಸಹಕಾರಿ ಸಂಘಗಳು ಹೆಚ್ಚಿನ ಅಭಿವೃದ್ಧಿ ಸಾಧಿಸಿವೆ ಎಂದರು.

ರಾಷ್ಟ್ರೀಕೃತ ಬ್ಯಾಂಕ್‌ಗಳ ವಿಲೀನದ ಬಳಿಕ ಸ್ಥಳೀಯ ಸಿಬ್ಬಂದಿಯ ಕೊರತೆ ಮತ್ತು ಭಾಷಾ ಸಮಸ್ಯೆಯಿಂದಾಗಿ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ಸೇವೆ ಪಡೆಯುವಲ್ಲಿ ಕೆಲವು ತೊಂದರೆಗಳು ಎದುರಾಗುತ್ತಿವೆ. ಸಿಂಡಿಕೇಟ್ ಬ್ಯಾಂಕ್ ಕೆನರಾ ಬ್ಯಾಂಕ್‌ನೊಂದಿಗೆ ವಿಲೀನಗೊಂಡಿರುವುದು ಸೇರಿದಂತೆ ಹಲವು ಬದಲಾವಣೆಗಳಿಂದ ಸ್ಥಳೀಯ ಜನರಿಗೆ ಹಿಂದಿನ ರೀತಿಯ ಸೇವೆ ಲಭ್ಯವಾಗುತ್ತಿಲ್ಲ. ಹೀಗಾಗಿ ಜನರು ಸ್ಥಳೀಯ ಸಹಕಾರಿ ಸಂಘಗಳೊಂದಿಗೆ ಹೆಚ್ಚು ಒಡನಾಟ ಬೆಳೆಸಿಕೊಂಡು ವ್ಯವಹಾರ ನಡೆಸುತ್ತಿದ್ದಾರೆ ಎಂದು ಹೇಳಿದರು.

ದಕ್ಷಿಣ ಕನ್ನಡ ಮತ್ತು ಉಡುಪಿ ಅವಳಿ ಜಿಲ್ಲೆಗಳ ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಸಹಕಾರಿ ನಾಯಕರಾದ ರಾಜೇಂದ್ರ ಕುಮಾರ್ ಸೇರಿದಂತೆ ಹಲವು ಗಣ್ಯರ ಕೊಡುಗೆ ಮಹತ್ವದ್ದಾಗಿದೆ. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅವರು ಸಹಕಾರಿ ಸಂಘಗಳ ಅಭಿವೃದ್ಧಿಗೆ ನಿರಂತರವಾಗಿ ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದ್ದಾರೆ. ಸಹಕಾರಿ ಸಂಘಗಳು ಇನ್ನಷ್ಟು ಅಭಿವೃದ್ಧಿ ಹೊಂದಿದರೆ ಸ್ಥಳೀಯ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

WhatsApp Image 2026 11 20 at 9.27.41 PM 1

ಬೀಜಾಡಿ ಮೀನುಗಾರರ ಸಹಕಾರಿ ಸಂಘದ ವತಿಯಿಂದ ಮೀನುಗಾರರಿಗೆ ದೊರೆಯುತ್ತಿರುವ ಪರಿಹಾರ ಸೌಲಭ್ಯಗಳ ಕುರಿತು ಮಾತನಾಡಿದ ಅವರು, ಮೀನುಗಾರಿಕೆ ಸಂದರ್ಭದಲ್ಲಿ ಸಂಭವಿಸುವ ಅವಘಡಗಳಿಗೆ ಸರ್ಕಾರದಿಂದ ನೀಡಲಾಗುವ ಸಂಕಷ್ಟ ಪರಿಹಾರ ನಿಧಿಯಡಿ ₹10 ಲಕ್ಷ ಪರಿಹಾರವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ಜಮೆ ಮಾಡುವ ವ್ಯವಸ್ಥೆ ಜಾರಿಯಲ್ಲಿದೆ. ಈ ಹಿಂದೆ ಪರಿಹಾರ ಪಡೆಯಲು ದೀರ್ಘಕಾಲ ಕಾಯಬೇಕಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆ ಸರಳಗೊಂಡು ಫಲಾನುಭವಿಗಳಿಗೆ ನೇರವಾಗಿ ಪರಿಹಾರ ತಲುಪುತ್ತಿದೆ ಎಂದರು.

ಇದರ ಜೊತೆಗೆ, ಈಗಾಗಲೇ ಸಂಕಷ್ಟ ಪರಿಹಾರ ನಿಧಿಯ ಪ್ರಯೋಜನ ಪಡೆದ ಮೀನುಗಾರರಿಗೆ ಕೇಂದ್ರ ಸರ್ಕಾರದ ವತಿಯಿಂದ ಹೆಚ್ಚುವರಿಯಾಗಿ ₹5 ಲಕ್ಷ ವಿಮಾ ಪರಿಹಾರ ದೊರೆಯುವ ಅವಕಾಶವಿದೆ. ಈ ಸಂಬಂಧ ಅಗತ್ಯ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಮೊತ್ತವೂ ಫಲಾನುಭವಿಗಳ ಖಾತೆಗೆ ಜಮೆಯಾಗುವ ನಿರೀಕ್ಷೆಯಿದೆ ಎಂದು ತಿಳಿಸಿದರು.

ಈ ವಿಮಾ ಸೌಲಭ್ಯದ ಕುರಿತು ಮೀನುಗಾರರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವಂತೆ ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಪದಾಧಿಕಾರಿಗಳಿಗೆ ಅವರು ಮನವಿ ಮಾಡಿದರು. ಕೇವಲ ಸಂಕಷ್ಟ ಪರಿಹಾರ ನಿಧಿಯ ಬಗ್ಗೆ ಮಾತ್ರವಲ್ಲದೆ, ಕೇಂದ್ರ ಸರ್ಕಾರದ ಹೆಚ್ಚುವರಿ ₹5 ಲಕ್ಷ ವಿಮಾ ಪರಿಹಾರದ ಬಗ್ಗೆಯೂ ಮೀನುಗಾರರಿಗೆ ಮಾಹಿತಿ ನೀಡಬೇಕು. ಪರಿಹಾರ ಪಡೆಯಲು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವುದು ಸೇರಿದಂತೆ ಅಗತ್ಯ ಕ್ರಮಗಳ ಕುರಿತು ಸಂಘದ ವತಿಯಿಂದ ಸದಸ್ಯರಿಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.

WhatsApp Image 2026 11 20 at 9.27.41 PM

ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ವಹಿಸಿದ್ದರು. ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಹಿಳಾ ಮೀನುಗಾರರ ಸ್ವಸಹಾಯ ಸಂಘಗಳಿಗೆ ಸಾಲ ವಿತರಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ಸಂಪನ್ಮೂಲ ವ್ಯಕ್ತಿ ಶ್ರೀಧರ್ ಪಿ.ಎಸ್. ಮಹಿಳೆಯರು, ಯುವ ಜನರು ಮತ್ತು ಸಮಾಜದ ಅಂಚಿನ ವರ್ಗಗಳು ಸಹಕಾರ ಕ್ಷೇತ್ರದಲ್ಲಿ ಪಾಲ್ಗೊಳ್ಳುವಿಕೆಯ ಕುರಿತು ಮಾಹಿತಿ ನೀಡಿದರು.

ಉಡುಪಿ ಜಿಲ್ಲಾ ಮೀನುಗಾರಿಕಾ ಜಂಟಿ ನಿರ್ದೇಶಕ ಬಿ.ವಿ.ಕುಮಾರ ಸ್ವಾಮಿ, ಸಹಕಾರಿ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್, ಸಹಕಾರಿ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪನಿರ್ದೇಶಕ ಎಂ.ಎಂ. ಆನಂದ, ಸಹಕಾರ ಸಂಘಗಳ ಸಹಾಯಕ ನಿಬಂಧಕ ಜೆ.ಸುಧೀರ್ ಕುಮಾರ್, ಮೀನುಗಾರಿಕಾ ಸಹಾಯಕ ನಿರ್ದೇಶಕಿ ಆಶಾ, ಸಹಕಾರಿ ಧುರೀಣರಾದ ಅರುಣ್ ಕುಮಾರ್ ಶೆಟ್ಟಿ, ವೈ.ಸುಧೀರ್ ಕುಮಾರ್ ಶೆಟ್ಟಿ, ಬೀಜಾಡಿ ಮೀನುಗಾರರ ಸಹಕಾರಿ ಸಂಘದ ಉಪಾಧ್ಯಕ್ಷ ನಾಗೇಶ್ ಉಪಸ್ಥಿತರಿದ್ದರು.

ಈ ಸಂದರ್ಭ ಮೀನುಗಾರಿಕೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ಮೀನುಗಾರಿಕಾ ಇಲಾಖೆಯ ಸಂಕಷ್ಟ ಪರಿಹಾರ ವಿಮಾ ನಿಧಿ ವಿತರಣೆ, ಮಹಿಳಾ ಮೀನುಗಾರ ಸ್ವಸಹಾಯ ಸಂಘಗಗಳಿಗೆ ಸಾಲ ವಿತರಣೆ, ಮಹಿಳಾ ಮೀನುಗಾರರಿಕೆ ಮೀನು ಸಂರಕ್ಷಣೆಯ ಪ್ರೀಜರ್ ಕೊಡುಗೆ, ಮೀನುಗಾರರಿಗೆ ಲೈಫ್ ಜಾಕೇಟ್ ವಿತರಣೆ, ಶೈಕ್ಷಣಿಕ ಮತ್ತು ಸಹಾಯ ಹಸ್ತದ ನೆರವನ್ನು ವಿತರಿಸಲಾಯಿತು. ಸಹಕಾರಿ ರತ್ನ ಇಂದ್ರಾಳಿ ಜಯಕರ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಮೇಶ್ ಕಾಂಚನ್ ಸ್ವಾಗತಿಸಿದರು. ಜಿಲ್ಲಾ ಸಹಕಾರ ಯೂನಿಯನ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ವಂದಿಸಿದರು. ಪತ್ರಕರ್ತ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರ್ವಹಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | 40 ವರ್ಷ ದುಡಿದರೂ ಗಜಾನನ ಸಂಸ್ಥೆ ಕಾರ್ಮಿಕರ ಬದುಕಿಗಿಲ್ಲ ಭದ್ರತೆ!

ಮಲೆನಾಡಿನ ಸಾರಿಗೆ ಕ್ಷೇತ್ರದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿದ್ದ ಸಾಗರ ತಾಲೂಕಿನ...

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಮಾರಾಟಕ್ಕೆ ಬ್ರೇಕ್‌: ತೀವ್ರ ಕಾರ್ಯಾಚರಣೆಗೆ ಎಡಿಸಿ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನಕ್ಕೆ ಅವಕಾಶ ನೀಡುವ ಹಾಗೂ ಕಾನೂನುಬಾಹಿರವಾಗಿ ಸಿಗರೇಟ್, ತಂಬಾಕು...

ಬೆಂಗಳೂರು | ಪಿಯುಸಿ ಪಾಸಾದವರಿಗೆ ಅರಣ್ಯ ಇಲಾಖೆಯಲ್ಲಿ 450 ಉದ್ಯೋಗಾವಕಾಶ

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಪಿಯುಸಿ ಉತ್ತೀರ್ಣ ಅಭ್ಯರ್ಥಿಗಳಿಗೆ ಕರ್ನಾಟಕ ಅರಣ್ಯ ಇಲಾಖೆ...

ತಳ ಸಮುದಾಯಗಳ ಹೋರಾಟಕ್ಕೆ ಅಹಿಂದ ಒಂದೇ ವೇದಿಕೆಯಾಗಲಿ: ಡಾ. ಭೀಮಣ್ಣ ಮೇಟಿ

ಸಮಾಜದಲ್ಲಿ ಶತಮಾನಗಳಿಂದ ಶೋಷಣೆ ಮತ್ತು ಅಸಮಾನತೆಯನ್ನು ಎದುರಿಸುತ್ತಿರುವ ಸಮುದಾಯಗಳಿಗೆ ರಾಜಕೀಯ, ಸಾಮಾಜಿಕ...