ಉಡುಪಿ | ಆರೋಪ ಸುಳ್ಳೆಂದು ಬಿಜೆಪಿ ಶಾಸಕ ಸಾಬೀತು ಮಾಡಲಿ; ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಪುರಸಭೆ ಸದಸ್ಯ

Date:

ಪರಶುರಾಮನ ಪ್ರತಿಮೆಯ ವಿಚಾರವಾಗಿ ಶಾಸಕರು ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಅವರ ವಿರುದ್ಧದ ಆರೋಪಗಳು ಸುಳ್ಳೆಂದು ಅವರು ದೇವಸ್ಥಾನದಲ್ಲಿ ಪ್ರಮಾಣ ಮಾಡಿ ಸಾಬೀತು ಮಾಡಿದರೆ, ನಾನು ಕ್ಷಮೆ ಕೇಳುತ್ತೇನೆ. ಮಾತ್ರವಲ್ಲ ರಾಜಕೀಯದಿಂದಲೂ ನಿವೃತ್ತಿಯಾಗುತ್ತೇನೆ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್‌ಗೆ ಕಾರ್ಕಳ ಪುರಸಭಾ ಸದಸ್ಯ, ಕಾಂಗ್ರೆಸ್‌ ಮುಖಂಡ ಶುಭದ ರಾವ್ ಸವಾಲು ಹಾಕಿದ್ದಾರೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶುಭದ ರಾವ್, “ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಸುನೀಲ್ ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳೆಂದು ಹೇಳಿದ್ದಾರೆ. ಅಲ್ಲದೆ, ಅವರು ಅಸಭ್ಯವಾಗಿ ಮಾತನಾಡಿದ್ದಾರೆ. ಧರ್ಮದ ದುರ್ಬಳಕೆಯು ಅವರನ್ನು ಭಿಕ್ಷೆ ಬೇಡುವ ಪರಿಸ್ಥಿತಿಗೆ ತರುತ್ತದೆ. ಅವರು ತಮ್ಮ ವಿರುದ್ಧದ ಆರೋಪಗಳು ಸುಳ್ಳೆಂದು ದೇವರ ಮೇಲೆ ಆಣೆ ಮಾಡಲಿ. ಪ್ರಮಾಣ ಮಾಡುವ ಸ್ಥಳ, ಸಮಯ, ದಿನಾಂಕವನ್ನು ಅವರೇ ನಿರ್ಧರಿಸಲಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

“ಇತ್ತೀಚೆಗೆ ವೈರಲ್‌ ಆಗಿರುವ ವಿಡಿಯೋದಲ್ಲಿ ಕಾಣಿಸಿರುವ ಪ್ರತಿಮೆ ಚೂರಾದ ಚಿತ್ರಗಳು ಪ್ರತಿಮೆ ಸ್ಥಾಪನೆ ಸಂದರ್ಭದ್ಧೇ? ವಿಡಿಯೋದಲ್ಲಿ ದಾಖಲಾಗಿರುವಂತೆ ಕ್ರೈನ್ ಮೂಲಕ ಎತ್ತಿದ ಪರಶುರಾಮನ ಎದೆಯ ಮೇಲಿನ ಭಾಗ ಕಂಚಿನದ್ದೇ? ರಾಜ್ಯದ ಮುಖ್ಯಮಂತ್ರಿಯಾಗಿದ್ದ ಬಸವರಾಜ್ ಬೊಮ್ಮಾಯಿಯವರು ಉದ್ಘಾಟಿಸಿದ್ದ ಪರಶುರಾಮನ ಪ್ರತಿಮೆ ಸಂಪೂರ್ಣ ಕಂಚಿನದ್ದೇ? ಪ್ರತಿಮೆಯ ಮೇಲ್ಭಾಗ ತೆರವು ವಿಚಾರವಾಗಿ ಜಿಲ್ಲಾಡಳಿತ, ಪೊಲೀಸ್ ಮತ್ತು ನಿರ್ಮಿತಿ ಕೇಂದ್ರದ ಮೇಲೆ ತಾವು ಒತ್ತಡ ಹೇರಲಿಲ್ಲವೇ? ಕಾಂಗ್ರೆಸ್ ಅನುದಾನ ತಡೆ ಹಿಡಿದಿದೆ ಎಂದ ಹೇಳಿದ ತಮ್ಮ ಆರೋಪ ಸರಿಯೇ? ಈ ಎಲ್ಲ ಪ್ರಶ್ನೆಗಳಿಗೆ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿ, ಸಾಬೀತು ಪಡಿಸಿ” ಎಂದು ಶಾಸಕ ಸುನೀಲ್ ಕುಮಾರ್‌ಗೆ ಸುಭದ ರಾವ್ ಸವಾಲು ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದೇವದುರ್ಗ ಬಸ್ ನಿಲ್ದಾಣದ ಅವ್ಯವಸ್ಥೆ ಸರಿಪಡಿಸಲು ಪಿಎಸ್‌ಆರ್‌ ಆಗ್ರಹ

ದೇವದುರ್ಗ ಪಟ್ಟಣದ ಬಸ್ ನಿಲ್ದಾಣದಲ್ಲಿ ಸ್ವಚ್ಛತೆ ಕಾಪಾಡುವುದು, ಶೌಚಾಲಯದ ನಿರ್ವಹಣೆ ಸುಧಾರಿಸುವುದು...

ರಾಯಚೂರು | ಪ್ರತಿ ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿ ಸ್ಥಾಪನೆಗೆ ಅಬ್ದುಲ್‌ ರಹಮಾನ್‌ ಆಗ್ರಹ

ಪ್ರತಿಯೊಂದು ಗ್ರಾಮದಲ್ಲೂ ಗ್ರಾಮಲೆಕ್ಕಾಧಿಕಾರಿಗಳ ಕಚೇರಿಗಳನ್ನು ಸ್ಥಾಪಿಸುವ ಮೂಲಕ ಸಾರ್ವಜನಿಕರು ವಿವಿಧ ಕೆಲಸಗಳಿಗಾಗಿ...

ಯಾದಗಿರಿ | ದಲಿತ ಐಕ್ಯತಾ ಸಮಾವೇಶಕ್ಕೆ ಶಾಸಕ ರಾಜಾ ವೇಣುಗೋಪಾಲ ನಾಯಕ ಚಾಲನೆ: ಕರಪತ್ರ ಬಿಡುಗಡೆ

ದಲಿತ ಸಮುದಾಯದ ಹಕ್ಕುಗಳು, ಸ್ವಾಭಿಮಾನ ಮತ್ತು ಸಾಮಾಜಿಕ ಸಮಾನತೆಯ ಪರವಾದ ಹೋರಾಟವನ್ನು...

ಕಲಬುರಗಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ

ಪೊಲೀಸ್ ವೀರ ಹುತಾತ್ಮರ ದಿನಾಚರಣೆ ಅಂಗವಾಗಿ ಕಲಬುರಗಿ ನಗರದ ಜಿಲ್ಲಾ ಸಶಸ್ತ್ರ...