ಉಡುಪಿ | ಆದಿದ್ರಾವಿಡ ಸಹಕಾರ ಸಂಘದಿಂದ ಶೇ.15 ಡಿವಿಡೆಂಡ್ ಘೋಷಣೆ

Date:

ತೆಂಕುಬಿರ್ತಿ, ಬ್ರಹ್ಮಾವರದ ಆದಿದ್ರಾವಿಡ ಸಹಕಾರ ಸಂಘ ನಿಯಮಿತದ 9ನೇ ವಾರ್ಷಿಕ ಮಹಾಸಭೆ ಅಂಬೇಡ್ಕರ್ ಭವನದಲ್ಲಿ ಸಂಘದ ಅಧ್ಯಕ್ಷ ಸುಧಾಕರ್ ಗುಜ್ಜರ್‌ಬೆಟ್ಟು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

- Advertisement -

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸುಧಾಕರ್ ಗುಜ್ಜರ್‌ಬೆಟ್ಟು ಅವರು ಸಂಘದ ವಾರ್ಷಿಕ ವರದಿಯನ್ನು ಮಂಡಿಸಿ, ಸಂಘವು ಸತತ 9ನೇ ವರ್ಷವೂ ಲಾಭ ಗಳಿಸಿದ್ದು, ಈ ಬಾರಿ ಸದಸ್ಯರಿಗೆ ಶೇ.15ರಷ್ಟು ಡಿವಿಡೆಂಡ್ ನೀಡಲಾಗುವುದು ಎಂದು ಘೋಷಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ:...

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ ಗುಲಾಬಿ ಎಣ್ಣೆ ತಯಾರಿಕಾ ಘಟಕ, ಪ್ರವಾಸಿ ತಾಣ ಮಾಡಬೇಕು. ಟಿಪ್ಪು ಕಾಲದ ಚಾಮನ್ ಎಂಬ ಹೆಸರನ್ನು ಉಳಿಸಬೇಕು. ಗುಲಾಬಿ ಕೇವಲ ಒಂದು...

ಜರ್ಮನಿಯಲ್ಲಿ ತೀವ್ರಗಾಮಿಗಳ ಅಬ್ಬರ: ದಿಕ್ಕುತಪ್ಪಿದ ಮಧ್ಯಮಾರ್ಗ, ಮರುಜೀವ ಪಡೆಯುತ್ತಿದೆಯೇ...

ಜರ್ಮನಿಯಲ್ಲಿ ತೀವ್ರ ಬಲಪಂಥೀಯರ ಈ ಮಟ್ಟದ ಏರಿಕೆ ಕೇವಲ ರಾಜಕೀಯ ಪೈಪೋಟಿಯಲ್ಲ, ಬದಲಾಗಿ ಅತ್ಯಂತ ಆತಂಕಕಾರಿ ಬೆಳವಣಿಗೆಯಾಗಿದೆ. ಜರ್ಮನಿ ಮತ್ತು ಬಲಪಂಥ ಎಂದಾಕ್ಷಣ ಇಡೀ ವಿಶ್ವಕ್ಕೆ ಅಡಾಲ್ಫ್ ಹಿಟ್ಲರ್ ಮತ್ತು ಆತನ ನಾಜಿ...

ಸೌಜನ್ಯಳನ್ನು ಕೊಂದವರು ಯಾರು? ಹೊಸ ತನಿಖೆಯಲ್ಲಿ ಉತ್ತರ ಸಿಗುವ...

14 ವರ್ಷಗಳು... 3 ತನಿಖಾ ಸಂಸ್ಥೆಗಳಾದ ಪೊಲೀಸ್, ಸಿಐಡಿ, ಸಿಬಿಐ ತನಿಖೆಗಳು... ಅಮಾಯಕನಾದ ಒಬ್ಬನೇ ಆರೋಪಿಯ ಸುತ್ತಲಿನ ತನಿಖೆ-... ಕೊನೆಗೆ ಆತ ನಿರಪರಾಧಿ ಎಂದು ಸಾಬೀತು, ಆತನ ಖುಲಾಸೆ. ಹಾಗಾದರೆ 17 ವರ್ಷದ...

ಸಂಘದ ಆಂತರಿಕ ಲೆಕ್ಕ ಪರಿಶೋಧಕ ಸುರೇಶ್ ಬಿರ್ತಿ ಅವರು ಸಂಘದ ವಿವಿಧ ಚಟುವಟಿಕೆಗಳು ಹಾಗೂ ಬಜೆಟ್ ಮಂಡಿಸಿದರು. ದಶಮಾನೋತ್ಸವದ ಕೊಡುಗೆಯಾಗಿ ಸಂಘದ ವತಿಯಿಂದ ‘ಭೀಮಾ ಲಕ್ಷಾಧಿಪತಿ’ ಮತ್ತು ‘ಭೀಮಾ ಮಾಸಿಕ’ ಎಂಬ ಎರಡು ಉಳಿತಾಯ ಯೋಜನೆಗಳಿಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಾಯಿತು. ಪ್ರಭಾರ ಸಿಇಒ ಪ್ರಶಾಂತ್ ಬಿರ್ತಿ ಅವರು ಲೆಕ್ಕಪತ್ರಗಳನ್ನು ಮಂಡಿಸಿದರು.

WhatsApp Image 2026 09 22 at 10.49.45 PM 1

ಕಳೆದ ವರ್ಷ ಮೈಸೂರು ದಸರಾ ಜಂಬೂಸವಾರಿಯಲ್ಲಿ ಭಾಗವಹಿಸಿದ್ದ ಅಂಕದಮನೆ ಜಾನಪದ ಕಲಾ ತಂಡದ ಸದಸ್ಯರನ್ನು ಸಭೆಯಲ್ಲಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಬ್ರಹ್ಮಾವರ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ಎಸ್. ನಾರಾಯಣ್, ಸಾಹಿತಿ ಹಾಗೂ ಚಿಂತಕ ಪೆರೂರು ಜಾರು, ಬ್ಯಾಂಕ್ ಆಫ್ ಬರೋಡದ ಅಧಿಕಾರಿ ಸುಬ್ರಮಣ್ಯ ಪ್ರಸಾದ್, ಲೇಖಕ ಹಾಗೂ ಅಂಕಣಕಾರ ರವಿ ಪುತ್ತೂರು, ಭೋಜರಾಜ್ ಕೆ., ಅಂಬೇಡ್ಕರ್ ಯುವಕ ಮಂಡಲದ ಅಧ್ಯಕ್ಷ ಸಂಪತ್ ರಾಜ್ ಹಾಗೂ ಹರಿಶ್ಚಂದ್ರ ಕೆ.ಡಿ. ಉಪಸ್ಥಿತರಿದ್ದರು.

ಸಂಘದ ಉಪಾಧ್ಯಕ್ಷ ವರ್ಣ ವಿಶ್ವನಾಥ್, ನಿರ್ದೇಶಕರಾದ ಜಗನ್ನಾಥ್ ಬಿ., ಸಂತೋಷ್ ಬಿರ್ತಿ, ಅನಿಲ್ ಕುಮಾರ್, ಚೈತನ್ಯ ಬಿರ್ತಿ, ಗಂಗೆ, ಸುಮನಾ, ಶಂಕರ್ ಇಂದಿರಾನಗರ ಹಾಗೂ ಸಂದೇಶ್ ಕುಮಾರ್ ಬಿರ್ತಿ ಉಪಸ್ಥಿತರಿದ್ದರು.

ದಲಿತ ಸಂಘರ್ಷ ಸಮಿತಿ ಮೈಸೂರು ವಿಭಾಗೀಯ ಸಂಘಟನಾ ಸಂಚಾಲಕ ಶ್ಯಾಮರಾಜ್ ಬಿರ್ತಿ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಶಶಿರಾಜ್ ಉಪ್ಪೂರು ಕಾರ್ಯಕ್ರಮ ನಿರೂಪಿಸಿದರು. ಲಿಂಗಪ್ಪ ಕುಟ್ಟಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಭೂರಹಿತರಿಗೆ ಭೂಮಿ ಮಂಜೂರು ಮಾಡಲು ಆಗ್ರಹಿಸಿ ಉಪವಾಸ ಸತ್ಯಾಗ್ರಹ

ವಸತಿ ಹಾಗೂ ಭೂ ರಹಿತರಿಗೆ ಭೂಮಿ ಮಂಜೂರು ಮಾಡಿ ಹಕ್ಕುಪತ್ರ ನೀಡಬೇಕು,...

ನಮ್ಮ ಜೀವನ ಪ್ರೇಮ, ಸ್ನೇಹ, ಸೌಂದರ್ಯ ಹರಡುವ ಹೂವಿನಂತಿರಲಿ: ಸೆ.22 ವಿಶ್ವ ಗುಲಾಬಿ ದಿನ

ಶ್ರೀರಂಗಪಟ್ಟಣ ಪುರಸಭೆ ಚಾಮನ್ ಬಯಲನ್ನು ʼಹೂವಿನ ಗ್ರಾಮʼ ಎಂದು ಘೋಷಿಸಿ, ಅಲ್ಲಿ...

ಕೆಜಿಎಫ್ | ಚರಂಡಿ ವ್ಯವಸ್ಥೆ ಇಲ್ಲದೆ ಮಳೆನೀರು–ಕೊಳಚೆ ನೀರು ರಸ್ತೆಗೆ; ಸ್ವಚ್ಛತೆ ಹಾಗೂ ಆರೋಗ್ಯದ ಬಗ್ಗೆ ಆತಂಕ

ಬೇತಮಂಗಲ ಗ್ರಾಮದ ಗ್ರಾಮೀಣ ಪ್ರೌಢಶಾಲೆ ಮುಂಭಾಗದಲ್ಲಿ ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ...