ಮಗನಿಂದಲೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆಗೈದಿರುವ ಶಂಕೆ ವ್ಯಕ್ತವಾಗಿದ್ದು, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ಸೋಮವಾರ ಘಟನೆ ನಡೆದಿದೆ.
ಬೈಕಾಡಿಯ ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಮತ್ತು ಸಂಶದ್ ಬೇಗಂ ಕೊಲೆಯಾದ ದಂಪತಿ. ಅವರ ಪುತ್ರ ಶಾಹಿದ್ ಅಲಿ (31) ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ.
ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದ್ದು, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಬ್ರಹ್ಮಾವರ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿಸಿದ್ದಾರೆ.





