ಉಡುಪಿ | ಜ್ಞಾನೇಶ್ ಕುಮಾರ್ ಅಣಕು ಶವಯಾತ್ರೆ ನಡೆಸಿ, ಪ್ರತಿಕೃತಿ ದಹಿಸಿ ಆಕ್ರೋಶ

Date:

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ವಿರೋಧಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸೋಮವಾರ ಬೃಹತ್ ಪ್ರತಿಭಟನೆ ಮತ್ತು ಪಾದಯಾತ್ರೆ ನಡೆಯಿತು.

- Advertisement -

ಬ್ರಹ್ಮಾವರದ ಬಂಟರ ಭವನದಿಂದ ಆರಂಭವಾದ ಪಾದಯಾತ್ರೆ ಆಕಾಶವಾಣಿ ವೃತ್ತ, ಗಾಂಧಿ ಮೈದಾನ ಹಾಗೂ ಮಾರ್ಕೆಟ್ ರಸ್ತೆ ಮೂಲಕ ಬಸ್ ನಿಲ್ದಾಣದವರೆಗೆ ಸಾಗಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜ್ಞಾನೇಶ್ ಕುಮಾರ್ ಅವರ ಅಣಕು ಶವಯಾತ್ರೆ ನಡೆಸಿ, ಬಳಿಕ ಪ್ರತಿಕೃತಿ ದಹಿಸಿದರು. ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಎಸ್ಐಆರ್ ಮೂಲಕ ಮಧ್ಯಮ ವರ್ಗದವರು, ಬಡವರು ಹಾಗೂ ಕಾರ್ಮಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

WhatsApp Image 2026 10 26 at 9.13.36 PM

ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿಯೂ ಸುಮಾರು 15 ಸಾವಿರ ಮಂದಿಯನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಆರೋಪಿಸಿದ ಅವರು, ಗ್ರಾಮೀಣ ಭಾಗದ ಅನಕ್ಷರಸ್ಥರು ಹಾಗೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದ ಜನರ ಮತದಾನದ ಹಕ್ಕಿಗೆ ಧಕ್ಕೆಯಾಗಿದೆ ಎಂದು ದೂರಿದರು.

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಇಂತಹ ತಂತ್ರಗಳು ದೇಶದ ಪ್ರಜ್ಞಾವಂತ ಮತದಾರರ ಮುಂದೆ ನಡೆಯುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಜನರು ಬಿಜೆಪಿಯನ್ನು ಸೋಲಿಸಲಿದ್ದಾರೆ ಎಂದು ಹೇಳಿದರು.

ಚುನಾವಣೆಯಲ್ಲಿ ಸೋಲುವ ಭೀತಿಯಿಂದ ಬಿಜೆಪಿ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ಎಸ್ಐಆರ್ ಜಾರಿಗೊಳಿಸಿದೆ ಎಂದು ಆರೋಪಿಸಿದ ಪ್ರಸಾದ್ ರಾಜ್ ಕಾಂಚನ್, ಬಡವರು ಹಾಗೂ ಹಿಂದುಳಿದ ವರ್ಗಗಳ ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

WhatsApp Image 2026 10 26 at 9.13.35 PM

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಮಾತನಾಡಿದರು. ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಘವೇಂದ್ರ ಶೆಟ್ಟಿ ಕರ್ಜೆ, ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಉದಯ್ ಆಚಾರ್, ಕುಮಾರ್, ಅಮೃತ್ ಶೆಣೈ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಾರಾಯಿ ಅಂಗಡಿಗೆ ಜಾಗವಿದೆ, ದಲಿತರಿಗೆ ನಿವೇಶನವಿಲ್ಲವೇ? : ಕೃಷ್ಣ ಮೂಡುಬೆಳ್ಳೆ

ಡಿಸಿ ಮನ್ನಾ ಜಮೀನು ಹಾಗೂ ವಸತಿ ನಿವೇಶನಗಳ ಹಕ್ಕುಪತ್ರ ವಿತರಣೆಯಲ್ಲಿ ದಲಿತರಿಗೆ...

ವಿಜಯಪುರ | ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಮಹರ್ಷಿ ವಾಲ್ಮೀಕಿ: ಶಾಸಕ ವಿಠ್ಠಲ ಕಟಕಧೊಂಡ

ಮಹರ್ಷಿ ವಾಲ್ಮೀಕಿ ಅವರು ರಾಮಾಯಣದ ಮೂಲಕ ಭಾರತೀಯ ಸಾಹಿತ್ಯ, ಸಂಸ್ಕೃತಿ ಹಾಗೂ...

ಬಾಗಲಕೋಟೆ | ಸಾರ್ವಜನಿಕ ಸೇವೆಗಳಲ್ಲಿ ಲೋಪ; ಅಧಿಕಾರಿಗಳಿಗೆ ನೋಟಿಸ್ ನೀಡಲು ಸಿಇಒ ಗಜಾನನ ಬಾಲೆ ಸೂಚನೆ

ಬಡವರು, ರೋಗಿಗಳು, ವಿದ್ಯಾರ್ಥಿನಿಯರು ಹಾಗೂ ವೃದ್ಧರಿಗೆ ಉತ್ತಮ ಸೌಲಭ್ಯ ಕಲ್ಪಿಸಬೇಕಾದ ಸರ್ಕಾರಿ...

ನೆಲಮಂಗಲ | ಶಿಕ್ಷಣದ ಜೊತೆಗೆ ಕೌಶಲ್ಯ ಮತ್ತು ಸಮಾಜಸೇವೆಯ ಮನೋಭಾವ ಬೆಳೆಸಿಕೊಳ್ಳಿ: ಚಿಕ್ಕಮಾರನಹಳ್ಳಿ ಅನಂತ್

ಯುವಜನರು ಶಿಕ್ಷಣದ ಜೊತೆಗೆ ಜೀವನಕ್ಕೆ ಅಗತ್ಯವಾದ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು. ಸಮಾಜದ ಅಭಿವೃದ್ಧಿಯಲ್ಲಿ...