ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

Date:

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್ ಪ್ರದೇಶದಲ್ಲಿ ಸೌಪರ್ಣಿಕಾ ನದಿ ಸಮೀಪ ಇಬ್ಬರ ಮೃತದೇಹಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ. ಮೃತರು ಓರ್ವ ಪುರುಷ ಹಾಗೂ ಓರ್ವ ಮಹಿಳೆ ಎಂದು ತಿಳಿದುಬಂದಿದೆ.

- Advertisement -

ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ, ಮೃತರು ಕುಂದಾಪುರ ಉಪವಿಭಾಗದ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಸೆಪ್ಟೆಂಬರ್ 11ರಂದು ದಾಖಲಾಗಿದ್ದ ಪ್ರಕರಣದ ಆರೋಪಿಗಳಾದ ವಿಟ್ಠಲ್ ನಾಯಕ್ (35) ಹಾಗೂ ಭವ್ಯ ಅಲಿಯಾಸ್ ನಿಶ್ಮಿತಾ (33) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...
WhatsApp Image 2026 09 29 at 11.12.23 PM

ವಿಟ್ಠಲ್ ನಾಯಕ್ ಅವರ ಪತ್ನಿಗೆ ಇಂಜೆಕ್ಷನ್‌ಗಳನ್ನು ನೀಡಿ ವಿಷಪ್ರಯೋಗ ನಡೆಸಿ ಹತ್ಯೆಗೆ ಯತ್ನಿಸಿದ ಆರೋಪದಡಿ ಇಬ್ಬರ ವಿರುದ್ಧವೂ ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 123, 109 ಹಾಗೂ 3(5) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಭವ್ಯ ಅವರು ವಿಟ್ಠಲ್ ನಾಯಕ್ ಅವರೊಂದಿಗೆ ಆಕ್ರಮ ಸಂಬಂಧ ಹೊಂದಿದ್ದರು ಎಂಬ ಆರೋಪವೂ ಪ್ರಕರಣದ ಹಿನ್ನೆಲೆಯಲ್ಲಿ ತಿಳಿದುಬಂದಿದೆ.

ಮೃತದೇಹಗಳು ಕೆಲವು ದಿನಗಳ ಹಿಂದೆಯೇ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳಕ್ಕೆ SOCO (Scene of Crime Officers) ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ.

ಸಾವಿನ ಬಗ್ಗೆ ನಿಖರ ಕಾರಣ ಹಾಗೂ ಘಟನೆಗೆ ಸಂಬಂಧಿಸಿದ ಇತರ ಅಂಶಗಳು ತನಿಖೆಯಿಂದಷ್ಟೇ ಸ್ಪಷ್ಟವಾಗಬೇಕಿದೆ.

WhatsApp Image 2026 09 29 at 11.13.10 PM
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಯುವಕರ ಪರ ಹೋರಾಟದ ರೂಪುರೇಷೆಗಳನ್ನು ರೂಪಿಸಬೇಕಿದೆ: ಅನಿಲ್ ಕುಮಾರ್

ಸಮ್ಮೇಳನದ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷ...

ದಕ್ಷಿಣ ಕನ್ನಡ | ಕೃಷಿ ಜಮೀನಿನಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ!

ದಕ್ಷಿಣ ಕನ್ನಡ ಜಿಲ್ಲೆಯ ನಲ್ಕೂರು ಗ್ರಾಮದ ಬಳಿ ಸೋಮವಾರ ಸಂಜೆ ಮನುಷ್ಯನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಶ್ರೀನಿವಾಸಪುರ | ಜಾಕೀರ್ ಹುಸೇನ್ ಬಡಾವಣೆಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಅಬ್ದುಲ್ ಕಲಾಂ ಟ್ರಸ್ಟ್ ಬೆಂಬಲ

ಪಟ್ಟಣದ ಜಾಕೀರ್ ಹುಸೇನ್ ಬಡಾವಣೆಯಲ್ಲಿರುವ ಸರ್ಕಾರಿ ಉರ್ದು-ಇಂಗ್ಲಿಷ್ ಹಿರಿಯ ಪ್ರಾಥಮಿಕ ಶಾಲೆಯ...